Homeಮುಖಪುಟನ್ಯೂಸ್ ಲಾಂಡ್ರಿ ಪತ್ರಕರ್ತರ ಮಾನನಷ್ಟ ಪ್ರಕರಣ: ಅಭಿಜಿತ್ ಅಯ್ಯರ್‌ಗೆ ದೆಹಲಿ ಹೈಕೋರ್ಟ್ ಸಮನ್ಸ್

ನ್ಯೂಸ್ ಲಾಂಡ್ರಿ ಪತ್ರಕರ್ತರ ಮಾನನಷ್ಟ ಪ್ರಕರಣ: ಅಭಿಜಿತ್ ಅಯ್ಯರ್‌ಗೆ ದೆಹಲಿ ಹೈಕೋರ್ಟ್ ಸಮನ್ಸ್

- Advertisement -
- Advertisement -

ನ್ಯೂಸ್ ಲಾಂಡ್ರಿಯ ಮಹಿಳಾ ಪತ್ರಕರ್ತರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಪಟ್ಟ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ರಾಜಕೀಯ ವ್ಯಾಖ್ಯಾನಕಾರ ಮತ್ತು ನಿರೂಪಕ ಅಭಿಜಿತ್ ಅಯ್ಯರ್ ಮಿತ್ರ ದೆಹಲಿ ಹೈಕೋರ್ಟ್ ಆದೇಶದಂತೆ ತೆಗೆದುಹಾಕಿದ್ದಾರೆ.

ಆದರೆ, ಮೊಕದ್ದಮೆಯಲ್ಲಿ ಮಹಿಳಾ ಪತ್ರಕರ್ತರು ಮಾನನಷ್ಟಕ್ಕೆ ಪರಿಹಾರ ಕೋರಿದ್ದಾರೆ. ಈ ಹಿನ್ನೆಲೆ, ಪ್ರಕರಣದ ವಿಚಾರಣೆ ಮುಂದುವರಿದಿದೆ. ದೆಹಲಿ ಹೈಕೋರ್ಟ್ ಸೋಮವಾರ (ಮೇ.26) ಅಭಿಜಿತ್ ಅಯ್ಯರ್‌ಗೆ ಸಮನ್ಸ್ ಜಾರಿ ಮಾಡಿದೆ.

ಬಿಜೆಪಿ ಪರ ಮಾಧ್ಯಮ ಒಪಿಇಂಡಿಯಾ ಅಂಕಣಕಾರ ಅಭಿಜಿತ್ ಅಯ್ಯರ್ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಮತ್ತು 2 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಮಹಿಳಾ ಪತ್ರಕರ್ತರು ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ. ನ್ಯೂಸ್‌ ಲಾಂಡ್ರಿಯ 9 ಮಹಿಳಾ ಪತ್ರಕರ್ತರು ದಾಖಲಿಸಿರುವ ಈ ಪ್ರಕರಣದಲ್ಲಿ ನ್ಯೂಸ್ ಲಾಂಡ್ರಿ ಕೂಡ ವಾದಿಯಾಗಿದೆ.

ಸೋಮವಾರ ವಿಚಾರಣೆ ವೇಳೆ ಅಭಿಜಿತ್ ಅಯ್ಯರ್ ಪರ ಹಿರಿಯ ವಕೀಲ ಪರ್ಸಿವಲ್ ಬಿಲ್ಲಿಮೋರಿಯಾ ಅವರು, ತನ್ನ ಕಕ್ಷಿದಾರರು ವಿವಾದಾತ್ಮಕ ಪೋಸ್ಟ್‌ಗಳನ್ನು ತೆಗೆದು ಹಾಕಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆದರೆ, ನ್ಯೂಸ್‌ ಲಾಂಡ್ರಿ ಪತ್ರಕರ್ತರ ಪರ ವಕೀಲ ಬಾನಿ ದೀಕ್ಷಿತ್ ಅವರು, ಅಭಿಜಿತ್ ಅಯ್ಯರ್‌ಗೆ ಈ ಪ್ರಕರಣ ಸಂಬಂಧ ಯಾವುದೇ ಪಶ್ಚಾತ್ತಾಪವಿಲ್ಲ. ಅವರು ಈಗಲೂ ಸಾಮಾಜಿ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ ಮತ್ತು ಕಾವ್ಯಾತ್ಮಕವಾಗಿ ಬರೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಈ ಮಧ್ಯೆ ಅಭಿಜಿತ್ ಪರ ವಕೀಲ, ಮಾನನಷ್ಟ ಪ್ರಕರಣವನ್ನು ವೆಚ್ಚದೊಂದಿಗೆ ವಜಾಗೊಳಿಸುವಂತೆ ನ್ಯಾಯಮೂರ್ತಿ ಪುರುಷೀಂದ್ರ ಕುಮಾರ್ ಕೌರವ್ ಅವರಿಗೆ ಮನವಿ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ, “ತನ್ನ ಕೈಯಲ್ಲಿರುವ ವಿಷಯವು ಅಭಿಜಿತ್ ಅಯ್ಯರ್ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಮಾತ್ರ ಸೀಮಿತವಾಗಿದೆ. ನಿಮಗೆ ಇತರ ಯಾವುದೇ ದೂರು ಇದ್ದರೆ ಅದನ್ನು ಬೇರೆಲ್ಲಿಯಾದರೂ ಹೇಳಿಕೊಳ್ಳಿ ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಅಭಿಜಿತ್ ಪರ ವಕೀಲ ಬಿಲ್ಲಿಮೋರಿಯಾ, ನ್ಯೂಸ್ ಲಾಂಡ್ರಿ ಅತ್ಯಂತ ಕಪಟ ಸುದ್ದಿವಾಹಿನಿಗಳಲ್ಲೊಂದಾಗಿದೆ. ಅದು ಇಟಲಿಯ ಪ್ರಧಾನಿಯ ಜೊತೆಗೆ ಪ್ರಧಾನಿ ಮೋದಿಯವರ ಸಂಬಂಧದ ಬಗ್ಗೆ ಟೀಕಿಸಿತ್ತು ಎಂದು ಆರೋಪಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ, “ಲಕ್ಷ್ಮಣ ರೇಖೆ ಎಲ್ಲಿದೆ ಎನ್ನುವುದನ್ನು ನೀವು ಅರ್ಥ ಮಾಡಿಕೊಳ್ಳಬೇಕು. ಒಂದು ಪೋಸ್ಟ್ ಮನಹಾನಿಕರವಾಗಿದ್ದಾಗ ಅವರು ನ್ಯಾಯಾಲಯದ ಮೆಟ್ಟಿಲೇರುವ ಹಕ್ಕು ಹೊಂದಿರುತ್ತಾರೆ” ಎಂದು ಹೇಳಿದ್ದಾರೆ.

ಅಂತಿಮವಾಗಿ, ಮೊಕದ್ದಮೆಯಲ್ಲಿ ಉಲ್ಲೇಖಿಸಿರುವಂತೆ ಪರಿಹಾರ ಪಡೆಯುವ ವಿಷಯವನ್ನು ಮುಂದುವರಿಸಲು ಬಯಸುವುದಾಗಿ ಮಹಿಳಾ ಪತ್ರಕರ್ತರ ಪರ ವಕೀಲರ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈ ವೇಳೆ ಅಭಿಜಿತ್ ಅಯ್ಯರ್ ಪರ ವಕೀಲರನ್ನು ಉದ್ದೇಶಿಸಿ ಮಾತನಾಡಿದ ನ್ಯಾಯಮೂರ್ತಿ ಕೌರವ್, “ಅವರು (ಅರ್ಜಿದಾರ) ಖ್ಯಾತಿ ನಷ್ಟವಾಗಿದೆ ಎಂದು ಹೇಳುತ್ತಿದ್ದಾರೆ. ಆದ್ದರಿಂದ ನೀವು ನಿಮ್ಮ ಲಿಖಿತ ಹೇಳಿಕೆಗಳನ್ನು ಸಲ್ಲಿಸಿ” ಎಂದು ಮೌಖಿಕವಾಗಿ ಸೂಚನೆ ನೀಡಿದ್ದಾರೆ. ನಂತರ ನ್ಯಾಯಾಲಯವು ಎರಡೂ ಪಕ್ಷಗಳ ವಾದಗಳನ್ನು ಪೂರ್ಣಗೊಳಿಸಲು ಜಂಟಿ ರಿಜಿಸ್ಟ್ರಾರ್ ಮುಂದೆ ವಿಷಯವನ್ನು ಇಡುವಂತೆ ನಿರ್ದೇಶಿಸಿದೆ.

ಏನಿದು ಪ್ರಕರಣ?

ಡಿಜಿಟಲ್ ಸುದ್ದಿ ವೇದಿಕೆ ನ್ಯೂಸ್‌ ಲಾಂಡ್ರಿಯ ಪತ್ರಕರ್ತೆಯರನ್ನು ‘ವೇಶ್ಯೆಯರು’ ಮತ್ತು ಅವರು ಕೆಲಸ ಮಾಡುವ ಸ್ಥಳವನ್ನು ‘ವೇಶ್ಯಾಗೃಹ’ ಎಂದು ನಿಂದಿಸಿ ಪೋಸ್ಟ್ ಹಾಕಿದ್ದ ಅಭಿಜಿತ್ ಅಯ್ಯರ್ ಮಿತ್ರ ವಿರುದ್ದ ಪತ್ರಕರ್ತೆಯರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಮಹಿಳಾ ಪತ್ರಕರ್ತರಾದ ಮನೀಶಾ ಪಾಂಡೆ, ಇಶಿತಾ ಪ್ರದೀಪ್, ಸುಹಾಸಿನಿ ಬಿಸ್ವಾಸ್, ಸುಮೇಧಾ ಮಿತ್ತಲ್, ತೀಸ್ತಾ ರಾಯ್ ಚೌಧರಿ, ತಸ್ನೀಮ್ ಫಾತಿಮಾ, ಪ್ರಿಯಾ ಜೈನ್, ಜಯಶ್ರೀ ಅರುಣಾಚಲಂ ಮತ್ತು ಪ್ರಿಯಾಲಿ ಧಿಂಗ್ರಾ ಮೊಕದ್ದಮೆ ಹೂಡಿದವರು. ಪ್ರಕರಣದ ಪಕ್ಷಕಾರರಲ್ಲಿ ನ್ಯೂಸ್ ಲಾಂಡ್ರಿಯೂ ಸೇರಿದೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಅಭಿಜಿತ್ ಅಯ್ಯರ್ ಹಾಕಿರುವ ಪೋಸ್ಟ್‌ಗಳು ಮಾನಹಾನಿಕರ ಆಧಾರರಹಿತ ಮತ್ತು ತಪ್ಪು ಕಲ್ಪನೆಯಿಂದ ಕೂಡಿದ್ದು, ಮಹಿಳಾ ಉದ್ಯೋಗಿಗಳ ಘನತೆ ಮತ್ತು ಖ್ಯಾತಿಗೆ ಹಾನಿ ಮಾಡುವ ಉದ್ದೇಶ ಹೊಂದಿದೆ ಎಂದು ಮೊಕದ್ದಮೆಯಲ್ಲಿ ತಿಳಿಸಲಾಗಿದೆ.

ಕೇರಳದ ಅಬ್ದುಲ್ ರಹೀಂಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಸೌದಿ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...