Homeಮುಖಪುಟಎಸ್‌ಸಿ, ಎಸ್‌ಟಿ, ಒಬಿಸಿ ಅಭ್ಯರ್ಥಿಗಳನ್ನು ಉದ್ದೇಶಪೂರ್ವಕವಾಗಿ 'ಅರ್ಹರಲ್ಲ' ಎಂದು ಘೋಷಿಸಲಾಗುತ್ತಿದೆ: ರಾಹುಲ್ ಗಾಂಧಿ

ಎಸ್‌ಸಿ, ಎಸ್‌ಟಿ, ಒಬಿಸಿ ಅಭ್ಯರ್ಥಿಗಳನ್ನು ಉದ್ದೇಶಪೂರ್ವಕವಾಗಿ ‘ಅರ್ಹರಲ್ಲ’ ಎಂದು ಘೋಷಿಸಲಾಗುತ್ತಿದೆ: ರಾಹುಲ್ ಗಾಂಧಿ

"Not Found Suitable ಈಗ ಹೊಸ ಮನುವಾದ"

- Advertisement -
- Advertisement -

ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳ ಅರ್ಹ ಅಭ್ಯರ್ಥಿಗಳನ್ನು ಶಿಕ್ಷಣ ಮತ್ತು ನಾಯಕತ್ವದಿಂದ ದೂರವಿಡಲು ಉದ್ದೇಶಪೂರ್ವಕವಾಗಿ ‘ಅರ್ಹರಲ್ಲ’ ಎಂದು ಘೋಷಿಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ (ಡಿಯುಎಸ್‌ಯು) ಸದಸ್ಯರೊಂದಿಗೆ ಇತ್ತೀಚೆಗೆ ನಡೆಸಿದ ಸಂವಾದದ ವಿಡಿಯೋವನ್ನು ರಾಹುಲ್ ಗಾಂಧಿ ಮಂಗಳವಾರ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ಮೇಲಿನ ಹೇಳಿಕೆ ನೀಡಿರುವುದು ನೋಡಬಹುದು.

‘ಅರ್ಹರಲ್ಲ’ ಎಂಬುದು ಈಗ ಹೊಸ ಮನುವಾದ. ಎಸ್‌ಸಿ, ಎಸ್‌ಟಿ, ಒಬಿಸಿಯ ಅರ್ಹ ಅಭ್ಯರ್ಥಿಗಳನ್ನು ಉದ್ದೇಶಪೂರ್ವಕವಾಗಿ ‘ಅರ್ಹರಲ್ಲ’ ಎಂದು ಘೋಷಿಸಲಾಗುತ್ತಿದೆ. ಈ ಮೂಲಕ ಅವರನ್ನು ಶಿಕ್ಷಣ ಮತ್ತು ನಾಯಕತ್ವದಿಂದ ದೂರವಿಡಲಾಗುತ್ತಿದೆ” ಎಂದು ರಾಹುಲ್ ಗಾಂಧಿ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

‘ಮನುವಾದ’ ಎಂಬುದು ಮನುಸ್ಮೃತಿಯಿಂದ ಆಳಲ್ಪಡುವ ನೀತಿಯಾಗಿದೆ. ಶಿಕ್ಷಣವು ಸಮಾನತೆಗೆ ದೊಡ್ಡ ಅಸ್ತ್ರವಾಗಿದೆ ಎಂದು ಡಾ. ಬಿ.ಆರ್ ಅಂಬೇಡ್ಕರ್ ಹೇಳಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಆರ್‌ಎಸ್‌ಎಸ್ ಈ ಶಕ್ತಿಯನ್ನು ಬುಡಮೇಲು ಮಾಡುತ್ತಿವೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ಮೋದಿ ಸರ್ಕಾರ ಈ ಅಸ್ತ್ರವನ್ನು ಮೊಂಡಾಗಿಸುವಲ್ಲಿ ನಿರತವಾಗಿದೆ” ಎಂದಿದ್ದಾರೆ.

‘ಅರ್ಹರಲ್ಲ’ (Not Found Suitable-NFS) ಎಂದು ಹೇಳಿಕೊಂಡು ದೆಹಲಿಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕರ ಮೀಸಲು ಹುದ್ದೆಗಳಲ್ಲಿ ಶೇ.60ಕ್ಕಿಂತ ಹೆಚ್ಚು ಮತ್ತು ಸಹಾಯಕ ಪ್ರಾಧ್ಯಾಪಕರ ಮೀಸಲು ಹುದ್ದೆಗಳಲ್ಲಿ ಶೇ. 30ಕ್ಕಿಂತ ಹೆಚ್ಚು ಖಾಲಿ ಇಡಲಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಐಐಟಿಗಳು, ಕೇಂದ್ರೀಯ ವಿಶ್ವವಿದ್ಯಾಲಯಗಳು ಇದಕ್ಕೆ ಹೊರತಾಗಿಲ್ಲ. ಎಲ್ಲೆಡೆ ಒಂದೇ ರೀತಿಯ ಪಿತೂರಿ ನಡೆಯುತ್ತಿದೆ. ‘ಅರ್ಹರಲ್ಲ’ ಎಂಬುವುದು ಸಂವಿಧಾನದ ಮೇಲಿನ ದಾಳಿಯಾಗಿದೆ. ಸಾಮಾಜಿಕ ನ್ಯಾಯಕ್ಕೆ ಮಾಡುವ ದ್ರೋಹವಾಗಿದೆ ಎಂದಿದ್ದಾರೆ.

ಮೀಸಲಾತಿ ಪಡೆಯುವುದು ಹಕ್ಕು, ಗೌರವ ಮತ್ತು ಭಾಗವಹಿಸುವಿಕೆಗಾಗಿ ಹೋರಾಡುವ ವಿಷಯ ಎಂದಿರುವ ರಾಹುಲ್ ಗಾಂಧಿ, “ನಾನು ಡಿಯುಎಸ್‌ಯು ವಿದ್ಯಾರ್ಥಿಗಳೊಂದಿಗೆ ಮಾತನಾಡಿದೆ. ನಾವೆಲ್ಲರೂ ಒಟ್ಟಾಗಿ ಬಿಜೆಪಿ/ಆರೆಸ್ಸೆಸ್‌ನ ಪ್ರತಿಯೊಂದು ಮೀಸಲಾತಿ ವಿರೋಧಿ ಕ್ರಮಕ್ಕೂ ಸಂವಿಧಾನದ ಶಕ್ತಿಯೊಂದಿಗೆ ಉತ್ತರಿಸುತ್ತೇವೆ” ಎಂದು ತಿಳಿಸಿದ್ದಾರೆ.

ವಿಡಿಯೋದಲ್ಲಿ ‘ಹಿಂದುತ್ವ’ ಯೋಜನೆಯ ಅಡಿಪಾಯ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳ ಇತಿಹಾಸವನ್ನು ಅಳಿಸುವುದು ಎಂದು ರಾಹುಲ್ ಗಾಂಧಿಯವರು ವಿದ್ಯಾರ್ಥಿಗಳಿಗೆ ಹೇಳುವುದನ್ನು ನೋಡಬಹುದು.

“ಶೇಕಡಾ 90ರಷ್ಟು ಜನರ ಇತಿಹಾಸ ನಮ್ಮ ಪುಸ್ತಕಗಳಲ್ಲಿ ಏಕಿಲ್ಲ? ಕೇವಲ 10ರಷ್ಟು ಜನರ ಇತಿಹಾಸ ಮಾತ್ರ ಏಕೆ ಇದೆ? ಉದಾಹರಣೆಗೆ: ನಮ್ಮ ಇತಿಹಾಸ ಪುಸ್ತಕಗಳಲ್ಲಿ 3,000 ವರ್ಷಗಳಿಂದ ದಲಿತರನ್ನು ಕೀಳಾಗಿ ನಡೆಸಿಕೊಳ್ಳಲಾಗಿದೆ, ಗೌರವಿಸಲಾಗಿಲ್ಲ, ನಮ್ಮ ಸಮಾಜದಲ್ಲಿ ಅವರಿಗೆ ಯಾವುದೇ ಸ್ಥಾನಮಾನ ನೀಡಲಾಗಿಲ್ಲ ಎಂದು ಏಕೆ ಬರೆದಿಲ್ಲ? ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಮೇ 22ರಂದು ದೆಹಲಿ ವಿಶ್ವ ವಿದ್ಯಾಲಯವು ತನ್ನ ಉತ್ತರ ಕ್ಯಾಂಪಸ್‌ಗೆ ರಾಹುಲ್ ಗಾಂಧಿಯವರ ಅಘೋಷಿತ ಭೇಟಿಯನ್ನು ಆಕ್ಷೇಪಿಸಿತ್ತು. ಇದು ಸಾಂಸ್ಥಿಕ ಶಿಷ್ಟಾಚಾರದ ಉಲ್ಲಂಘನೆ ಮತ್ತು ವಿದ್ಯಾರ್ಥಿ ಆಡಳಿತ ಕಾರ್ಯಾಚರಣೆಗಳಿಗೆ ಅಡ್ಡಿ ಎಂದಿತ್ತು.

ಈ ರೀತಿ ಯಾವುದೇ ಮುನ್ಸೂಚನೆ ನೀಡದೆ ರಾಹುಲ್ ಗಾಂಧಿ ಭೇಟಿ ನೀಡಿರುವುದು ಎರಡನೆ ಬಾರಿಯಾಗಿದೆ ಎಂದು ವಿವಿಯ ಪ್ರಾಕ್ಟರ್ ಕಚೇರಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿತ್ತು.

ರಾಹುಲ್ ಗಾಂಧಿಯವರು ವಿವಿಯ ಉತ್ತರ ಕ್ಯಾಂಪಸ್‌ನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದರು.

ಕಾಂಗ್ರೆಸ್‌ ಪಕ್ಷದ ವಿದ್ಯಾರ್ಥಿ ಸಂಘಟನೆ ಎನ್‌ಎಸ್‌ಯುಐ ಬೆಂಬಲಿತ ದೆಹಲಿ ವಿವಿ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷರ ಕಚೇರಿಯಲ್ಲಿ ರಾಹುಲ್ ಗಾಂಧಿ ಸಭೆ ನಡೆಸಿದ್ದರು.

ಬ್ರಿಜ್‌ ಭೂಷಣ್ ವಿರುದ್ಧದ ಪೋಕ್ಸೋ ಪ್ರಕರಣ: ದೆಹಲಿ ಪೊಲೀಸರಿಂದ ಮುಕ್ತಾಯ ವರದಿ; ಅಂಗೀಕರಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...