ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿಗೆ ನಡೆದ ಬೆಳವಣಿಗೆಗೆ ಮತ್ತು ರಾಜ್ಯ ಸರ್ಕಾರದ ಗೃಹ ಇಲಾಖೆಯ ವೈಫಲ್ಯಕ್ಕೆ ಮನನೊಂದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ಸಾಮೂಹಿಕ ರಾಜೀನಾಮೆಯ ನಿರ್ಧಾರವನ್ನು ಗುರುವಾರ ಸಾರ್ವಜನಿಕವಾಗಿ ಪ್ರಕಟಿಸಿದ್ದಾರೆ. ಮಂಗಳೂರಿನ ಬೋಳಾರದಲ್ಲಿರುವ ಶಾದಿಮಹಲ್‌ನ ಸಭಾಂಗಣದಲ್ಲಿ ಸಭೆ ಕರೆದು, ಈ ತೀರ್ಮಾನವನ್ನು ಪ್ರಕಟಿಸಿದ್ದಾರೆ. ಮಂಗಳೂರು | ಕಾಂಗ್ರೆಸ್‌ಗೆ
ಸಭೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್ ವೇದಿಕೆಯಲ್ಲಿ ಮಾತನಾಡುತ್ತಿರುವಾಗ ಕೋಲಾಹಲ ಉಂಟಾದ ಘಟನೆಯೂ ನಡೆಯಿತು. ಜಿಲ್ಲಾ ಘಟಕದ ಕರೆಗೆ ಸ್ಪಂದಿಸಿದ್ದ ಕಾಂಗ್ರೆಸ್‌ನ ನೂರಾರು ಮುಸ್ಲಿಂ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ಕಾರ್ಯಕರ್ತರ ಕೋಲಾಹಲದ ನಡುವೆಯೇ ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆಯನ್ನು ಘೋಷಿಸಿದ್ದಾರೆ.
ಈ ನಡುವೆ, ಸಚಿವ ಜಮೀರ್ ಖಾನ್ ಅವರು ಮೊಬೈಲ್‌ನಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್ ಅವರಿಗೆ ಗುರುವಾರ ಬೆಳಗ್ಗೆ ಕರೆ ಮಾಡಿದ್ದರು. ಜೊತೆಗೆ ಸಿಎಂ ಸಿದ್ದರಾಮಯ್ಯ ಅವರು ಕೂಡಾ ಸಾಮೂಹಿಕ ರಾಜೀನಾಮೆಯಿಂದ ಹಿಂದೆ ಸರಿಯುವಂತೆ ಮನವಿ ಮಾಡಿದ್ದರು. ಅದಾಗ್ಯೂ, ಪಕ್ಷ ಮುಖಂಡರು ಪಕ್ಷಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಬಹಿರಂಗವಾಗಿ ಘೋಷಿಸಿದ್ದಾರೆ.
ಮಂಗಳೂರು | ಕಾಂಗ್ರೆಸ್‌ಗೆ ಸಾಮೂಹಿಕ ರಾಜೀನಾಮೆ ಘೋಷಿಸಿದ ಪಕ್ಷದ ಮುಸ್ಲಿಂ ಮುಖಂಡರು pic.twitter.com/ZepqFZwSGc
— Naanu Gauri (@naanugauri) May 29, 2025
ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಶಾಹುಲ್ ಹಮೀದ್ ಅವರು, “ದೇಶದ ಅಲ್ಪಸಂಖ್ಯಾತರ ರಕ್ತದಲ್ಲಿ ಕಾಂಗ್ರೆಸ್ ಹರಿಯುತ್ತಿದೆ. ಎಲ್ಲಾ ಸಂಕಷ್ಟದ ಸಮಯದಲ್ಲೂ ಅಲ್ಪಸಂಖ್ಯಾತರು ಕಾಂಗ್ರೆಸ್ ಜೊತೆ ನಿಂತಿದ್ದಾರೆ. ಆದರೆ ಅಲ್ಪಸಂಖ್ಯಾತರ ಮೇಲೆ ಬಿಜೆಪಿ ಮತ್ತು ಸಂಘಪರಿವಾರ ನಡೆಸುವ ದೌರ್ಜನ್ಯಗಳಿಗೆ ಕಡಿವಾಣ ಹಾಕಲು ಕಾಂಗ್ರೆಸ್ ಸರಕಾರದಿಂದ ಸಾಧ್ಯವಾಗುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಮುಸ್ಲಿಮರಿಗೆ ರಕ್ಷಣೆ ನೀಡಲು ಸಾಧ್ಯವಾಗದ ನೀವು ಕಾಂಗ್ರೆಸ್ ಪಕ್ಷದಲ್ಲಿ ಯಾಕೆ ಇದ್ದೀರಿ ಎಂದು ನಮ್ಮ ತಾಯಿ, ಹೆಂಡತಿ, ಮಕ್ಕಳೇ ಪ್ರಶ್ನಿಸುತ್ತಿದ್ದಾರೆ” ಎಂದು ಅವರು ಬೇಸರ ಹೊರಹಾಕಿದ್ದಾರೆ.
“ಅಬ್ದುಲ್ ರಹ್ಮಾನ್ ಹತ್ಯೆಯ ಬಳಿಕ ನಾವು ಆಸ್ಪತ್ರೆಗೆ ಹೋದಾಗ ಕಾಂಗ್ರೆಸ್ ನಲ್ಲಿರುವ ಮುಸ್ಲಿಮ್ ಕಾರ್ಯಕರ್ತರೇ ನಮ್ಮನ್ನು ತರಾಟೆಗೆ ತೆದುಕೊಳ್ಳುತ್ತಿದ್ದಾರೆ. ನಿಮ್ಮನ್ನು ಹತ್ಯೆ ಮಾಡಬೇಕಿತ್ತು. ನಿಮ್ಮ ಮಕ್ಕಳನ್ನು ಹತ್ಯೆ ಮಾಡಬೇಕಿತ್ತು ಎಂದು ನಮ್ಮ ಕಾರ್ಯಕರ್ತರೇ ನಮ್ಮ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.
“ಮುಸ್ಲಿಮರಿಗೆ ರಕ್ಷಣೆ ನೀಡಲು ಸಾಧ್ಯವಾಗದಿದ್ದರೆ ನೀವು ಕಾಂಗ್ರೆಸ್‌ನಲ್ಲಿ ಯಾಕೆ ಇದ್ದೀರಿ. ರಾಜೀನಾಮೆ ಕೊಟ್ಟು ಹೊರ ಬನ್ನಿ ಎಂದು ಸಮುದಾಯದಲ್ಲಿ ಒತ್ತಡ ಬರುತ್ತಿದೆ. ಈ ಹಿನ್ನೆಲೆಯಲ್ಲಿ ನಾವು ರಾಜೀನಾಮೆಗೆ ನಿರ್ಧಾರ ಮಾಡಿದ್ದೆವು. ಸಾಮೂಹಿಕ ರಾಜೀನಾಮೆಗೆ ಕಾಂಗ್ರೆಸ್‌ನ ಎಲ್ಲಾ ಮುಸ್ಲಿಮ್ ಕಾರ್ಯಕರ್ತರು, ನಾಯಕರು ಬೆಂಬಲ ಸೂಚಿಸಿದ್ದಾರೆ” ಎಂದು ಅವರು ತಿಳಿಸಿದ್ದಾರೆ.
“ಬೂತ್ ಮಟ್ಟದಿಂದ ರಾಜ್ಯಮಟ್ಟದವರೆಗೆ ಇರುವ ಜಿಲ್ಲೆಯ ಎಲ್ಲಾ ಮುಸ್ಲಿಮ್ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ಘೋಷಿಸುವ ಹಿನ್ನೆಲೆಯಲ್ಲಿ ಇಲ್ಲಿ ಇಂದು ಸಭೆ ಕರೆಯಲಾಗಿದೆ. ನಮ್ಮ ಸರಕಾರ ನಮ್ಮ ನಾಯಕರು ಇನ್ನಾದರೂ ಎಚ್ಚೆತ್ತು ಕೊಳ್ಳುತ್ತದೆಯೋ ಕಾದು ನೋಡಲು ಸಾಮೂಹಿಕ ರಾಜೀನಾಮೆಯ ನಿರ್ಧಾರವನ್ನು ನಮ್ಮ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ಮಾಡಿದ್ದೇವೆ. ಹಾಗಾಗಿ, ಎಲ್ಲರೂ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದೇವೆ” ಎಂದು ಶಾಹುಲ್ ಹಮೀದ್ ತಿಳಿಸಿದ್ದಾರೆ.
“ನಮ್ಮನ್ನು ನಾಯಿ, ಎಸಿಯಲ್ಲಿ ಕೂತುಕೊಳ್ಳುವವರು ಎಂದು ನಿಂದಿಸಿದ್ದಾರೆ. ಗೃಹ ಸಚಿವ ಬಂದರೂ, ಉಸ್ತುವಾರಿ ಸಚಿವ ಬಂದರೂ ಜಿಲ್ಲೆಯಲ್ಲಿ ಶಾಂತಿ ನೆಲೆಸುತ್ತಿಲ್ಲ” ಎಂದು ಶಾಹುಲ್ ಹಮೀದ್ ನೋವು ತೋಡಿಕೊಂಡಿದ್ದಾರೆ. ಮಂಗಳೂರು | ಕಾಂಗ್ರೆಸ್‌ಗೆ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಕೀನ್ಯಾದ ಕ್ರಾಂತಿಕಾರಿ ಲೇಖಕ, ಹೋರಾಟಗಾರ ಗೂಗಿ ವಾ ಥಿಯೊಂಗೊ ನಿಧನ

