Homeಕರ್ನಾಟಕಸಾಹಿತಿ ಎಚ್.ಎಸ್ ವೆಂಕಟೇಶಮೂರ್ತಿ ನಿಧನ

ಸಾಹಿತಿ ಎಚ್.ಎಸ್ ವೆಂಕಟೇಶಮೂರ್ತಿ ನಿಧನ

- Advertisement -
- Advertisement -

ಕನ್ನಡದ ಹಿರಿಯ ಸಾಹಿತಿ ಎಚ್‌.ಎಸ್‌ ವೆಂಕಟೇಶಮೂರ್ತಿ (ಎಚ್‌ಎಸ್‌ವಿ) ಅವರು ಶುಕ್ರವಾರ (ಮೇ.30) ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ವಯೋಸಹಜ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದ 80 ವರ್ಷ ವಯಸ್ಸಿನ ಎಚ್‌ಎಸ್‌ವಿ, ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಶುಕ್ರವಾರ ಬೆಳಿಗ್ಗೆ 7 ಗಂಟೆಗೆ ಮೃತಪಟ್ಟಿದ್ದಾರೆ ಎಂದು ವರದಿಗಳು ಹೇಳಿವೆ.

1944ರ ಜೂನ್ 23ರಂದು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಹೊದಿಗೆರೆ ಗ್ರಾಮದಲ್ಲಿ ಜನಿಸಿದ ವೆಂಕಟೇಶಮೂರ್ತಿ ಅವರ ತಂದೆ ನಾರಾಯಣ ಭಟ್ಟರು ಮತ್ತು ತಾಯಿ ನಾಗರತ್ನಮ್ಮ.

ಎಚ್‌ಎಸ್‌ವಿ ಕನ್ನಡ ಸಾಹಿತ್ಯ ಲೋಕದ ಪ್ರಮುಖ ಕವಿ, ನಾಟಕಕಾರ, ವಿಮರ್ಶಕರಾಗಿದ್ದರು. ಸುಮಾರು 30 ವರ್ಷಗಳ ಕಾಲ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಕೆಲಸ ಮಾಡಿದ್ದರು.

ಎಚ್‌ಎಸ್‌ವಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಎಂ.ಎ ಪದವಿ ಪಡೆದಿದ್ದರು. ‘ಕನ್ನಡದಲ್ಲಿ ಕಥನ ಕವನಗಳು’ ಎಂಬ ಅವರ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ದೊರೆತಿತ್ತು.

ಎಷ್ಟೊಂದು ಮುಗಿಲು, ಒಣಮರದ ಗಿಳಿಗಳು, ಅಮೆರಿಕಾದಲ್ಲಿ ಬಿಲ್ಲುಹಬ್ಬ, ಕ್ರಿಯಾಪರ್ವ, ನದಿತೀರದಲ್ಲಿ, ಉತ್ತರಾಯಣ ಮತ್ತು ಕನ್ನಡಿಯ ಸೂರ್ಯ, ವೈದೇಹಿ ಮತ್ತು ಇತರ ಕವನಗಳು ಎಚ್‌ಎಸ್‌ವಿ ಅವರ ಪ್ರಮುಖ ಕಾವ್ಯಕೃತಿಗಳು

ಅಗ್ನಿವರ್ಣ, ಚಿತ್ರಪಟ, ಉರಿಯ ಉಯ್ಯಾಲೆ, ಮಂಥರೆ ಸೇರಿ ವಿವಿಧ ನಾಟಕಗಳು, ತಾಪಿ, ಅಮಾನುಷರು, ಕದಿರನಕೋಟೆ, ಅಗ್ನಿಮುಖಿ, ವೇದವತಿ ನದಿಯಲ್ಲ ಕಾದಂಬರಿಗಳನ್ನು ಅವರು ರಚಿಸಿದ್ದಾರೆ.

ಎಚ್‌ಎಸ್‌ವಿ ಕಲಬುರಗಿಯಲ್ಲಿ ನಡೆದ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಹಲವು ಪ್ರಶಸ್ತಿ, ಪುರಸ್ಕಾರಗಳು ಅವರಿಗೆ ಸಂದಿವೆ.

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಸಾಕ್ಷಿದಾರರಿಗೆ ಬೆದರಿಕೆ: ನ್ಯಾಯಾಧೀಶರಿಗೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...