Homeಕರ್ನಾಟಕಬಲವಂತದ ಭೂಸ್ವಾಧೀನ ವಿರೋಧಿಸಿ ಸಂಯುಕ್ತ ಹೋರಾಟದಿಂದ 'ದೇವನಹಳ್ಳಿ ಚಲೋ'

ಬಲವಂತದ ಭೂಸ್ವಾಧೀನ ವಿರೋಧಿಸಿ ಸಂಯುಕ್ತ ಹೋರಾಟದಿಂದ ‘ದೇವನಹಳ್ಳಿ ಚಲೋ’

- Advertisement -
- Advertisement -

ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟದ 1150ನೇ ದಿನವಾದ ಗುರುವಾರ ರೈತರನ್ನು ಬೆಂಬಲಿಸಿ ‘ಸಂಯುಕ್ತ ಹೋರಾಟ- ಕರ್ನಾಟಕ’ ಸಂಘಟನೆಗಳ ಒಕ್ಕೂಟ ದೇವನಹಳ್ಳಿಯ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿತು.

ಕರ್ನಾಟಕದ ವಿವಿಧ ಭಾಗಗಳಿಂದ ರೈತ, ಕಾರ್ಮಿಕ, ದಲಿತ ಸಂಘಟನೆಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿ, ಚನ್ನರಾಯಪಟ್ಟಣ ರೈತರ ಸುದೀರ್ಘ ಹೋರಾಟವನ್ನು ಮೆಲುಕು ಹಾಕಿದರು. “ಇಂತಹ ಪ್ರಾಮಾಣಿಕ ಹೋರಾಟಕ್ಕೆ ಸೋಲಾಗಬಾರದು, ನಾವು ಯಾವುದೇ ಕಾರಣಕ್ಕೂ ಈ ಹೋರಾಟವನ್ನು ಸೋಲಲು ಬಿಡಬಾರದು” ಎಂದು ಪ್ರತಿಪಾದಿಸಿದರು.

ಸಭೆಯನ್ನುದ್ದೇಶಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಯಶವಂತ್, “ಬಂಡವಾಳಶಾಹಿಗಳ ಪರವಾಗಿರುವ ಈ ಸರ್ಕಾರಗಳು ಎಂದಿಗೂ ರೈತರ ಪರವಾಗಿಲ್ಲ, ಯಾವ ಪಕ್ಷದ ಸರ್ಕಾರಗಳು ಕೂಡ ಇದಕ್ಕೆ ಹೊರತಾಗಿಲ್ಲ. ಈ ಸುದೀರ್ಘ ಚನ್ನರಾಯಪಟ್ಟಣ ಹೋರಾಟಕ್ಕೆ ದೆಹಲಿ ಹೋರಾಟದ ಸ್ಪೂರ್ತಿ ಇದೆ. ಅಲ್ಲಿ ರೈತರು ಸರ್ವಾಧಿಕಾರಿ ಆದೇಶವನ್ನು ಹಿಮ್ಮೆಟ್ಟಿಸಿದಂತೆ, ಇಲ್ಲಿ ಭೂಮಿ ಕಸಿಯುತ್ತಿರುವ ಕಾರ್ಪೊರೇಟ್‌ ಪರವಾದ ಸರ್ಕಾರವನ್ನು ನಾವು ಹಿಮ್ಮೆಟ್ಟಿಸಲೇಬೇಕು, ನಾವು ಖಂಡಿತ ಗೆಲ್ಲುತ್ತೇವೆ” ಎಂದರು.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಮಾತನಾಡಿ, “ಸರ್ಕಾರಗಳಿಗೆ ಈ ಭೂಮಿ ಕೇವಲ ಮಾರಾಟದ ಸರಕಷ್ಟೇ. ಆದರೆ, ಇಲ್ಲಿನ ರೈತರಿಗೆ ಇದು ಬದುಕು. ಆದ್ದರಿಂದಲೇ, ಯಾವುದೇ ಕಾರಣಕ್ಕೂ ನಾವು ಭೂಮಿ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ದೇವನಹಳ್ಳಿ ಚನ್ನರಾಯಪಟ್ಟಣ ರೈತರು ಈ ಐತಿಹಾಸಿಕ ಹೋರಾಟ ನಡೆಸುತ್ತಿದ್ದು, ಈ ಹೋರಾಟ ಇಂದು ಬರಿಯ ದೇವನಹಳ್ಳಿಯ ಹೋರಾಟವಾಗಿ ಮಾತ್ರ ಉಳಿದಿಲ್ಲ. ಇಡೀ ರಾಜ್ಯದ ಹೋರಾಟ. ಇಡೀ ರಾಜ್ಯದ ರೈತ ಸಂಘಟನೆಗಳು ಮತ್ತು ಇತರ ಎಲ್ಲ ಪ್ರಗತಿಪರ ಸಂಘಟನೆಗಳು ಈ ಹೋರಾಟವನ್ನು ಪ್ರತಿಷ್ಠೆಯಾಗಿ ಪರಿಗಣಿಸಿ, ಜೂನ್ 25ಕ್ಕೆ ‘ದೇವನಹಳ್ಳಿ ಚಲೋ ಹೆಸರಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಎಲ್ಲ ಹೋರಾಟಗಾರರು, ಬೆಂಬಲಿಗರು ಸೇರಿ ಪ್ರತಿರೋಧವನ್ನು ವ್ಯಕ್ತಪಡಿಸೋಣ. ಇದು ಕನಿಷ್ಠ 10,000 ಜನರನ್ನು ಒಳಗೊಂಡ ಬೃಹತ್ ಕಾರ್ಯಕ್ರಮವಾಗಬೇಕು. ಇದಕ್ಕಾಗಿ ಸಂಯುಕ್ತ ಹೋರಾಟ ಕರ್ನಾಟಕದ ಎಲ್ಲ ಸಹಭಾಗಿ ಸಂಘಟನೆಗಳು ರಾಜ್ಯದ ವಿವಿಧ ಭಾಗಗಳಿಂದ ತಮ್ಮ ಕಾರ್ಯಕರ್ತರುಗಳನ್ನು ಇಲ್ಲಿಗೆ ಕರೆತರಲಿವೆ” ಎಂದು ಸಭೆಯ ನಿರ್ಧಾರವನ್ನು ಪ್ರಕಟಿಸಿದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್‌ ಮಾತನಾಡಿ, “ಹಿಂದಿನ ಕೋಮುವಾದಿ ಸರ್ಕಾರವನ್ನು ಸೋಲಿಸಲು ನಾವೇ ಹಗಲಿರುಳು ಶ್ರಮಿಸಿ ಅಸ್ತಿತ್ವಕ್ಕೆ ತಂದ ಸರ್ಕಾರ ಇದು. ಆದರೆ, ಸಿದ್ದರಾಮಯ್ಯನವರ ಸರ್ಕಾರದ ಮೇಲಿಟ್ಟಿದ್ದ ನಂಬಿಕೆ ಸಂಪೂರ್ಣ ಹುಸಿಯಾಗಿದೆ. ವಿರೋಧ ಪಕ್ಷದಲ್ಲಿದ್ದಾಗ ರೈತರ ಪರವಾಗಿ, ಬಡವರ ಪರವಾಗಿ ನಿಲ್ಲುವುದಾಗಿ ಹೇಳಿ ಜನರನ್ನು ನಂಬಿಸಿ ಅಧಿಕಾರಕ್ಕೆ ಬಂದ ಸರ್ಕಾರ ಇದು. ಚನ್ನರಾಯಪಟ್ಟಣ ರೈತರು ಧರಣಿ ನಡೆಸುತ್ತಿರುವಾಗ ಅಲ್ಲಿಗೆ ಬಂದು, ‘ಫಲವತ್ತಾದ ಕೃಷಿ ಭೂಮಿಯನ್ನು ಯಾವುದೇ ಕಾರಣಕ್ಕೂ ಭೂಸ್ವಾಧೀನ ಮಾಡಿಕೊಳ್ಳಬಾರದು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಬಲವಂತದ ಭೂಸ್ವಾಧೀನವನ್ನು ಮಾಡುವುದಿಲ್ಲ. ಈ ಭೂಸ್ವಾಧೀನವನ್ನು ಕೈಬಿಡುತ್ತೇವೆ’ ಎಂದು ಹೇಳಿದ್ದ ಮುಖ್ಯಮಂತ್ರಿಗಳು ಇಂದು ವಚನಭ್ರಷ್ಟರಾಗಿದ್ದಾರೆ. ಅಲ್ಲದೆ, ಚುನಾವಣೆಯ ಸಮಯದಲ್ಲಿ ರೈತರ ಜೊತೆಗಿರುವುದಾಗಿ ಹೇಳಿದ್ದ ಕೆ.ಹೆಚ್. ಮುನಿಯಪ್ಪನವರು ರೈತರ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ. ಆದ್ದರಿಂದ, ಎಲ್ಲ ಸಂಘಟನೆಗಳು ಚನ್ನರಾಯಪಟ್ಟಣ ರೈತರ ಜೊತೆಗೆ ನಿಂತು ಅವರನ್ನು ಗೆಲ್ಲಿಸಲೇಬೇಕು. ಈ ಕಾರ್ಪೊರೇಟ್‌ ಪರವಾದ ಸರ್ಕಾರಗಳನ್ನು ಹಿಮ್ಮೆಟ್ಟಿಸಲೇಬೇಕು” ಎಂದು ಮಾತನಾಡಿದರು.

ಭೂಮಿ ಮತ್ತು ವಸತಿ ಹೋರಾಟ ಸಮಿತಿಯ ನೂರ್ ಶ್ರೀಧರ್‌ ಮಾತನಾಡಿ, “ಸದಾ ರೈತರ ಪರವಾಗಿ ಇರುವುದಾಗಿ ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತು ಇಂದಿನ ಕಾಂಗ್ರೆಸ್ ಸರ್ಕಾರ ಭೂಮಿ ವಿಷಯಕ್ಕೆ ಸಂಬಂಧಿಸಿದಂತೆ ರೈತ ವಿರೋಧಿಯಾಗಿ ನಡೆದುಕೊಳ್ಳುತ್ತಿರುವುದು, ಜನ ವಿರೋಧಿಗಳಾಗಿ ನಡೆದುಕೊಳ್ಳುತ್ತಿರುವುದು ಸಹಿಸಲು ಸಾಧ್ಯವಿಲ್ಲ. ಒಂದು ಕಡೆ ರೈತರ ಕೈಯಲ್ಲಿರುವ ಭೂಮಿಯನ್ನು ಭೂಸ್ವಾಧೀನದ ಮೂಲಕ ಕಸಿದುಕೊಳ್ಳುವ ಪ್ರಯತ್ನವಾಗುತ್ತಿದ್ದರೆ, ಮತ್ತೊಂದೆಡೆ ಬಗರ್ ಹುಕುಂ ಸಾಗುವಳಿದಾರರಿಗೆ ಭೂ ಹಂಚಿಕೆ ಮಾಡದಿರುವುದು ಈ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಎತ್ತಿ ತೋರಿಸುತ್ತಿದೆ. ಇಂತಹ ಜನ ವಿರೋಧಿ ಸರ್ಕಾರವನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದರು.

“ಚನ್ನರಾಯಪಟ್ಟಣ ಹೋರಾಟದ ಹಾದಿಯಲ್ಲಿ ಎಲ್ಲ ರೀತಿಯ ಪ್ರತಿರೋಧಗಳನ್ನು, ಪ್ರತಿಭಟನೆಗಳನ್ನು ಮಾಡುತ್ತಲೇ ಬಂದಿದೆ. ಆದರೆ ಜೂನ್ 25ರಂದು ನಡೆಯಲಿರುವ ‘ದೇವನಹಳ್ಳಿ ಚಲೋ’ ಹಿಂದಿನ ಹೋರಾಟದಂತೆ ಮತ್ತೊಂದು ಹೋರಾಟವಾಗಿರುವುದಿಲ್ಲ. ಇದು ನಿರ್ಣಾಯಕ ಹೋರಾಟ. ಯಾವುದೇ ಕಾರಣಕ್ಕೂ ನಾವು ಬರಿಗೈಯಲ್ಲಿ ವಾಪಸ್ ಹೋಗುವ ಪ್ರಶ್ನೆಯೇ ಇಲ್ಲ. ಅದಕ್ಕೆ ಇಲ್ಲಿನ ರೈತರು ತಮ್ಮ ಮನೆಯ ದನ, ಕರು, ಕುರಿ ಎಲ್ಲವುಗಳ ಜೊತೆ ಬಂದು ಸೇರಿಕೊಳ್ಳೋಣ. ಅದನ್ನೂ ಮೀರಿ ಹೇಗೆ ಭೂಸ್ವಾಧೀನ ಮಾಡುತ್ತಾರೋ ನೋಡೋಣ, ತಾಕತ್ತಿದ್ದರೆ ಒಂದಿಂಚು ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಲಿ, ಇದು ಸರ್ಕಾರಕ್ಕೆ ಹೋರಾಟಗಾರರ ಸವಾಲು ” ಅವರು ಹಾಕಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಾದ ಚಾಮರಸ ಮಾಲಿ ಪಾಟೀಲ್, “ನಾವು ಅಭಿವೃದ್ಧಿಯ ವಿರೋಧಿಗಳಲ್ಲ. ಕೃಷಿಗೆ ಯೋಗ್ಯವಲ್ಲದ ಬರಡು ಭೂಮಿಗಳು ಮತ್ತು ಅತಿಯಾದ ನೀರಾವರಿಯ ಕಾರಣಕ್ಕೆ ಉಂಟಾಗಿರುವ ಜೌಗು ಭೂಮಿಗಳು ನಮ್ಮಲ್ಲಿ ಸಾಕಷ್ಟು ಇವೆ. ಅಂತಹ ಕಡೆಗಳಲ್ಲಿ ಧಾರಾಳವಾಗಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲಿ. ಆದರೆ, ಈ ಸರ್ಕಾರಗಳಿಗೆ ಕೈಗಾರಿಕೆಗಳನ್ನು ಸ್ಥಾಪನೆ ಮಾಡುವ ಉದ್ದೇಶವಿಲ್ಲ ಕೆಐಎಡಿಬಿ ಹೆಸರಿನಲ್ಲಿ ರಿಯಲ್ ಎಸ್ಟೇಟ್ ದಂಧೆ ನಡೆಸುತ್ತಿದ್ದಾರೆ” ಎಂದು ದೂರಿದರು.

ಸಭೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷರಾದ ಯು. ಬಸವರಾಜು, ಸಿ.ಐ.ಟಿ.ಯು. ಸಂಘಟನೆಯ ಮೀನಾಕ್ಷಿ ಸುಂದರಂ, ವರಲಕ್ಷ್ಮಿ, ಭೂಮಿ ಮತ್ತು ವಸತಿ ಹೋರಾಟ ಸಮಿತಿಯ ಮರಿಯಪ್ಪ, ಹೋರಾಟಗಾರರಾದ ಕಾರಳ್ಳಿ ಶ್ರೀನಿವಾಸ್, ಪ್ರಭಾ ಬೆಳವಂಗಲ, ನವೀನ್, ಚಂದ್ರ ತೇಜಸ್ವಿ, ರಮೇಶ್ ಸಂಕ್ರಾಂತಿ ಮುಂತಾದ ವಿವಿಧ ಸಂಘಟನೆಗಳ ಮುಖಂಡರು, ರೈತ ನಾಯಕರುಗಳು, ಮತ್ತು 13 ಹಳ್ಳಿಗಳ ರೈತರು ಭಾಗವಹಿಸಿದ್ದರು.

ಬೆಂಗಳೂರು| ರಾತ್ರೋರಾತ್ರಿ ದಲಿತರ ಮನೆ, ದೇವಸ್ಥಾನ ಧ್ವಂಸ ಆರೋಪ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಾನವೀಯತೆಯೇ ಏಕೈಕ ಧರ್ಮ..’; ಹಳ್ಳಿಯನ್ನು ಜಾತಿ ಮುಕ್ತ ಎಂದು ಘೋಷಿಸಿದ ಮಹಾರಾಷ್ಟ್ರದ ಸೌಂದಲ ಗ್ರಾಮ

ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯ ಸೌಂದಲ ಗ್ರಾಮವು ತನ್ನನ್ನು ತಾನು 'ಜಾತಿ ಮುಕ್ತ' ಎಂದು ಘೋಷಿಸಿಕೊಂಡಿದ್ದು, ಸಂವಿಧಾನದ ಪೀಠಿಕೆ ಮೌಲ್ಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಮಾರ್ಗದರ್ಶಿ ತತ್ವವಾಗಿ ಅಳವಡಿಸಿಕೊಂಡಿದೆ. ಫೆಬ್ರವರಿ 5 ರಂದು ನಡೆದ...

ಸಿಎಂ ಸಿದ್ದರಾಮಯ್ಯ ಹೆಸರಿನಲ್ಲಿ ನಕಲಿ ವರ್ಗಾವಣೆ ಪತ್ರ ಹಂಚಿಕೆ: ದೂರು ದಾಖಲು

ಮಂಡ್ಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ ಮೋಹನ್ ಅವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ನಿಯೋಜಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ನಕಲಿ...

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...