Homeಮುಖಪುಟಪಾಕಿಸ್ತಾನದ ವಿರುದ್ಧದ ಸಂಘರ್ಷದ ವೇಳೆ ಫೈಟರ್ ಜೆಟ್‌ ನಷ್ಟವಾಗಿದೆ: ಜನರಲ್ ಅನಿಲ್ ಚೌಹಾಣ್

ಪಾಕಿಸ್ತಾನದ ವಿರುದ್ಧದ ಸಂಘರ್ಷದ ವೇಳೆ ಫೈಟರ್ ಜೆಟ್‌ ನಷ್ಟವಾಗಿದೆ: ಜನರಲ್ ಅನಿಲ್ ಚೌಹಾಣ್

- Advertisement -
- Advertisement -

ಪಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನದೊಂದಿಗಿನ ನಡೆದ ಸಂಘರ್ಷದ ವೇಳೆ ಅನಿರ್ದಿಷ್ಟ ಸಂಖ್ಯೆಯ ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಯಿತು ಎಂದು ಭಾರತದ ಉನ್ನತ ಮಿಲಿಟರಿ ಜನರಲ್ ಮೊದಲ ಬಾರಿಗೆ ಒಪ್ಪಿಕೊಂಡಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ಅದಾಗ್ಯೂ, ಸಶಸ್ತ್ರ ಪಡೆಗಳು ಪಾಕಿಸ್ತಾನದ ಮೇಲೆ ಮತ್ತೆ ದಾಳಿ ಮಾಡಲು ತನ್ನ ತಪ್ಪುಗಳನ್ನು ತ್ವರಿತವಾಗಿ ಸರಿಪಡಿಸಿಕೊಂಡಿವೆ ಎಂದು ಅವರು ಪ್ರತಿಪಾದಿಸಿದ್ದಾರೆ. ಪಾಕಿಸ್ತಾನದ ವಿರುದ್ಧದ ಸಂಘರ್ಷದ

ಶಾಂಗ್ರಿ-ಲಾ ಸಂವಾದದ ಹೊರತಾಗಿ ಬ್ಲೂಮ್‌ಬರ್ಗ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್, ನಾಲ್ಕು ರಫೇಲ್‌ಗಳು ಸೇರಿದಂತೆ ಆರು ಭಾರತೀಯ ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ ಎಂಬ ಪಾಕಿಸ್ತಾನ ಪ್ರಧಾನಿಯ ಹೇಳಿಕೆಯನ್ನು “ಸಂಪೂರ್ಣವಾಗಿ ತಪ್ಪು” ಎಂದು ತಳ್ಳಿಹಾಕಿದ್ದಾರೆ.

“ಜೆಟ್ ಪತನವಾಗಿದ್ದು ಮುಖ್ಯ ವಿಚಾರವಲ್ಲ, ಅವು ಏಕೆ ಪತನಗೊಂಡವು, ಯಾವ ತಪ್ಪುಗಳನ್ನು ಮಾಡಲಾಯಿತು ಎಂಬುವುದು ಮುಖ್ಯವೇ ಹೊರತು, ಸಂಖ್ಯೆಗಳು ಮುಖ್ಯವಲ್ಲ” ಎಂದು ಜನರಲ್ ಚೌಹಾಣ್ ಹೇಳಿದ್ದಾರೆ.

ರಾಯಿಟರ್ಸ್‌ಗೆ ನೀಡಿದ ಪ್ರತ್ಯೇಕ ಸಂದರ್ಶನದಲ್ಲಿ ಮಾತನಾಡಿದ ಜನರಲ್ ಚೌಹಾಣ್, ಭಾರತ ಅನುಭವಿಸಿದ ನಷ್ಟಗಳು ಮೇ 7 ರಂದು ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ಆರಂಭಿಕ ಹಂತಗಳಲ್ಲಿ ನಡೆದಿವೆ ಎಂದು ಹೇಳಿದ್ದಾರೆ.

“ನಾನು ಹೇಳುವುದೇನೆಂದರೆ, ಮೇ 7 ರಂದು, ಆರಂಭಿಕ ಹಂತಗಳಲ್ಲಿ ಈ ನಷ್ಟಗಳು ಸಂಭವಿಸಿದವು… ಈ ನಷ್ಟಗಳು ಏಕೆ ಸಂಭವಿಸುತ್ತವೆ ಮತ್ತು ಅದರ ನಂತರ ನಾವು ಏನು ಮಾಡುತ್ತೇವೆ ಎಂಬುದು ಮುಖ್ಯವಾಗಿತ್ತು” ಎಂದು ಅವರು ತಿಳಿಸಿದ್ದಾರೆ.

ಆದಾಗ್ಯೂ, ಸಶಸ್ತ್ರ ಪಡೆಗಳು “ಯುದ್ಧತಂತ್ರದ ತಪ್ಪುಗಳನ್ನು” ವಿಶ್ಲೇಷಿಸಿ, ಅವುಗಳನ್ನು ಸರಿಪಡಿಸಲು ಮತ್ತು ಮೇ 8 ಮತ್ತು ಮೇ 10 ರಂದು ಮತ್ತೆ ಪಾಕಿಸ್ತಾನವನ್ನು ಗುರಿಯಾಗಿಸಲು ತ್ವರಿತವಾಗಿ ಕಾರ್ಯಾಚರಿಸಿದವು ಎಂದು ಹೇಳಿದ್ದಾರೆ. ಪಾಕಿಸ್ತಾನದ ವಿರುದ್ಧದ ಸಂಘರ್ಷದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ದಲಿತ ರ‍್ಯಾಪರ್ ವೇಡನ್ ವಿರುದ್ಧ ಪ್ರಚೋದನಾತ್ಮಕ ಹೇಳಿಕೆ; ಆರ್‌ಎಸ್‌ಎಸ್ ಮುಖವಾಣಿ ಕೇಸರಿ ಮುಖ್ಯ ಸಂಪಾದಕನ ಬಂಧನ

ದಲಿತ ರ‍್ಯಾಪರ್ ವೇಡನ್ ವಿರುದ್ಧ ಪ್ರಚೋದನಾತ್ಮಕ ಹೇಳಿಕೆ; ಆರ್‌ಎಸ್‌ಎಸ್ ಮುಖವಾಣಿ ಕೇಸರಿ ಮುಖ್ಯ ಸಂಪಾದಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Indian forces have achieved their goals. Fighting between two forces nobody can predict what will happen. Enemy country has got sophisticated modern arms supplied by America. Both countries India and Pakistan are customers America it has got good Markets for its dumped arms.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...