Homeಕರ್ನಾಟಕಅಭಯಾರಣ್ಯದ ಮೂಲಕ ತಮ್ಮ ಜಮೀನಿಗೆ ತೆರಳಲು ಸಚಿವ ಕೆ.ಜೆ ಜಾರ್ಜ್ ಮಗನಿಗೆ ಹೈಕೋರ್ಟ್ ಅನುಮತಿ

ಅಭಯಾರಣ್ಯದ ಮೂಲಕ ತಮ್ಮ ಜಮೀನಿಗೆ ತೆರಳಲು ಸಚಿವ ಕೆ.ಜೆ ಜಾರ್ಜ್ ಮಗನಿಗೆ ಹೈಕೋರ್ಟ್ ಅನುಮತಿ

- Advertisement -
- Advertisement -

ತಮ್ಮ ಖಾಸಗಿ ಜಮೀನಿಗೆ ನುಗು ವನ್ಯಜೀವಿ ಅಭಯಾರಣ್ಯದ ಮೂಲಕ ತೆರಳಲು ಇಂಧನ ಸಚಿವ ಕೆ.ಜೆ ಜಾರ್ಜ್ ಅವರ ಮಗನಿಗೆ ಅನುಮತಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ಮೈಸೂರು ಜಿಲ್ಲೆ ಎಚ್‌.ಡಿ ಕೋಟೆ ತಾಲೂಕಿನ ಸರಗೂರು ಹೋಬಳಿಯ ಶಂಬುಗೌಡನಹಳ್ಳಿ ಮತ್ತು ಲಕ್ಕಸೋಗೆ ಗ್ರಾಮಗಳಲ್ಲಿರುವ ತಮ್ಮ ಖಾಸಗಿ ಜಮೀನಿಗೆ ನುಗು ವನ್ಯಜೀವಿ ಅಭಯಾರಣ್ಯದಲ್ಲಿನ ರಸ್ತೆ ಮಾರ್ಗದ ಮೂಲಕ ಹಗಲು-ರಾತ್ರಿ ಓಡಾಡಲು ಅವಕಾಶ ನೀಡುವಂತೆ ಸಚಿವ ಜಾರ್ಜ್ ಅವರ ಮಗ ರಾಣಾ ಜಾರ್ಜ್‌ ನ್ಯಾಯಾಲಯವನ್ನು ಕೋರಿದ್ದರು.

ನುಗು ಅಭಯಾರಣ್ಯದಲ್ಲಿ ಹಾದು ಹೋಗುವ ರಸ್ತೆಯನ್ನು ಬಳಸದಂತೆ ನಿರ್ಬಂಧಿಸಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) 2024ರ ಮಾಚ್೯ 1ರಂದು ಹೊರಡಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ರದ್ದುಗೊಳಿಸಿದ್ದು, ರಾಣಾ ಜಾಜ್೯ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದೆ.

ತಮ್ಮ ಜಮೀನಿಗೆ ತೆರಳುವಾಗ ವನ್ಯಜೀವಿ ತಾಣದಲ್ಲಿನ ಸಸ್ಯ ಮತ್ತು ಪ್ರಾಣಿ ಸಂಕುಲಕ್ಕೆ ಯಾವುದೇ ಹಾನಿ ಮಾಡದಂತೆ ಇದೇ ವೇಳೆ ರಾಣಾ ಅವರಿಗೆ ಸೂಚಿಸಿದೆ.

“2024ರ ಮಾಚ್೯ 1ರಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೊರಡಿಸಿರುವ ಆದೇಶವು ರಾಣಾ ಜಾರ್ಜ್‌ ವಿರುದ್ಧ ಇರುವುದರಿಂದ ಅದನ್ನು ವಜಾ ಮಾಡಲಾಗಿದೆ. ರಾಣಾ ಅವರು ಯಾವುದೇ ಅಡ್ಡಿ ಇಲ್ಲದೇ ಅವರ ಆಸ್ತಿಗೆ ತೆರಳಲು ಕಾನೂನಿನ ಅನ್ವಯ ಅನುಕೂಲ ಮಾಡಿಕೊಡಬೇಕು. ಅಲ್ಲಿ ಓಡಾಡುವಾಗ ಅವರು ಭೌತಿಕವಾಗಿ ಸಸ್ಯ ಮತ್ತು ಪ್ರಾಣಿ ಸಂಕುಲಕ್ಕೆ ಹಾನಿ ಉಂಟು ಮಾಡಬಾರದು” ಎಂದು ನ್ಯಾಯಾಲಯ ನಿರ್ದೇಶಿಸಿರುವುದಾಗಿ barandbench.com ವರದಿ ಮಾಡಿದೆ.

ತಾನು ಶಂಬುಗೌಡನಹಳ್ಳಿ ಮತ್ತು ಲಕ್ಕಸೋಗೆಯಲ್ಲಿನ ಸರ್ವೇ ನಂಬರ್‌ 1, 2, 3, 26, 32 ಮತ್ತು 33ರ ಭೂಮಿಯ ಮಾಲೀಕತ್ವವನ್ನು ಹೊಂದಿದ್ದು, ಇದು ನುಗು ಅಭಯಾರಣ್ಯದ ವ್ಯಾಪ್ತಿಯಲ್ಲಿದೆ. ಈ ಆಸ್ತಿಯನ್ನು ತಾನು ವೈಯಕ್ತಿಕ ಬಳಕೆ ಮಾಡುತ್ತಿದ್ದು, ಇಲ್ಲಿ ಯಾವುದೇ ವಾಣಿಜ್ಯ ಚಟುವಟಿಕೆ ನಡೆಸುತ್ತಿಲ್ಲ. ಇಡೀ ಪ್ರದೇಶ ಪರಿಸರ ಸೂಕ್ಷ್ಮ ವಲಯಕ್ಕೆ ಸೇರಿದೆ ಎಂಬ ಅರಿವಿದೆ ಎಂದು ರಾಣಾ ನ್ಯಾಯಾಲಯಕ್ಕೆ ವಿವರಿಸಿದ್ದರು ಎಂದು ವರದಿ ತಿಳಿಸಿದೆ.

ಖಾಸಗಿ ಭೂಮಿ ಮಾಲೀಕರಿಗೆ ತಮ್ಮ ಜಮೀನಿಗೆ ತೆರಳಲು ಜಾಗವಿಲ್ಲದಿದ್ದಾಗ ಸಾರ್ವಜನಿಕ ಜಾಗವನ್ನು ಬಳಕೆ ಮಾಡಲು ಅನುಮತಿಸಬೇಕು ಎಂಬುದು ಸ್ಥಾಪಿತ ಕಾನೂನು. ಹಾಲಿ ಪ್ರಕರಣದಲ್ಲಿ ರಾಣಾ ಜಾರ್ಜ್‌ ಅವರ ಜಮೀನು ಅಭಯಾರಣ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಈ ಜಮೀನಿಗೆ ತೆರಳಲು ಮಣ್ಣಿನ ರಸ್ತೆಯನ್ನೇ ಆಶ್ರಯಿಸಬೇಕಿದ್ದು, ಅದು ಅರಣ್ಯ ಇಲಾಖೆಯ ವಶದಲ್ಲಿದೆ. ರಾಣಾ ಅವರ ಜಮೀನಿಗೆ ತೆರಳಲು ಇನ್ನೊಂದು ರಸ್ತೆ ಇದ್ದು, ಮಾನ್ಸೂನ್‌ ಅಥವಾ ನುಗು ಜಲಾಶಯದಲ್ಲಿ ನೀರಿನ ಮಟ್ಟ 100 ಅಡಿಗಿಂತ ಹೆಚ್ಚಾದಾಗ ಅಲ್ಲಿ ಓಡಾಡಲು ಸಾಧ್ಯವಿಲ್ಲ. ಇಂಥ ಸಂದರ್ಭದಲ್ಲಿ ರಾಣಾ ಅವರಿಗೆ ಅರಣ್ಯ ಇಲಾಖೆಯ ದಾರಿ ಬಳಸದೇ ವಿಧಿಯಿಲ್ಲದಂತಾಗಿದೆ ಎಂದು ರಾಣಾ ಅವರ ಅರ್ಜಿಯಲ್ಲಿ ವಾದಿಸಲಾಗಿತ್ತು.

ಅಭಯಾರಣ್ಯದ ವ್ಯಾಪ್ತಿಯಲ್ಲಿ ಭೂಮಿ ಹೊಂದಿರುವವರಿಗೆ ಓಡಾಡಲು ವನ್ಯಜೀವಿ ಸಂರಕ್ಷಣಾ ಕಾಯಿದೆ ಸೆಕ್ಷನ್ 27(1)(ಸಿ) ಅಡಿ ವಿನಾಯಿತಿ ಇದೆ. ಈಗ ಅರಣ್ಯ ಇಲಾಖೆಯು ರಾಣಾ ಅವರನ್ನು ತಮ್ಮ ಜಮೀನಿಗೆ ಸಂಜೆ 6ರಿಂದ ಬೆಳಿಗಿನ ಜಾವ 6 ಗಂಟೆಯವರೆಗೆ ಅರಣ್ಯ ಇಲಾಖೆಯ ರಸ್ತೆಯಲ್ಲಿ ಓಡಾಡಲು ಕಾನೂನುಬಾಹಿರವಾಗಿ ನಿರ್ಬಂಧಿಸುವ ಮೂಲಕ ಕಿರುಕುಳ ನೀಡುತ್ತಿದೆ. ಅರಣ್ಯ ಇಲಾಖೆಯ ರಸ್ತೆಯನ್ನು ಬಳಕೆ ಮಾಡುವುದಕ್ಕೆ ಸಾರ್ವಜನಿಕರು ಆಕ್ಷೇಪಿಸಿರುವ ಸುದ್ದಿಯು ಮಾಧ್ಯಮಗಳಲ್ಲಿ ಪ್ರಕಟವಾಗಿರುವುದನ್ನು ಆಧರಿಸಿ ಹೆಡಿಯಾಲ ವಲಯದ ಸಹಾಯಕ ಅರಣ್ಯಾ ಸಂರಕ್ಷಣಾಧಿಕಾರಿಯು ಓಡಾಟಕ್ಕೆ ನಿರ್ಬಂಧಿಸಿದ್ದಾರೆ ಎಂದು ವಿವರಿಸಲಾಗಿದೆ. ಹೀಗಾಗಿ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ರದ್ದುಪಡಿಸಿ, ದಿನದ 24 ತಾಸು ತಮ್ಮ ಜಮೀನಿಗೆ ಓಡಾಲು ಅನುಮತಿಸಬೇಕು ಎಂದು ರಾಣಾ ಜಾರ್ಜ್‌ ಕೋರಿದ್ದರು.

ದಕ್ಷಿಣ ಕನ್ನಡ | ಸಂಘಪರಿವಾರದ ದುಷ್ಕರ್ಮಿಗಳ ಸಹಿತ 36 ಜನರ ಗಡೀಪಾರಿಗೆ ಮುಂದಾದ ಪೊಲೀಸ್ ಇಲಾಖೆ: ಪಟ್ಟಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...