Homeಅಂತರಾಷ್ಟ್ರೀಯಭಾರತದ ಆಕ್ಷೇಪಗಳ ಹೊರತಾಗಿಯೂ ಪಾಕಿಸ್ತಾನಕ್ಕೆ 800 ಮಿಲಿಯನ್ ಡಾಲರ್ ನೀಡಿದ ಏಷ್ಯನ್‌ ಅಭಿವೃದ್ಧಿ ಬ್ಯಾಂಕ್‌!

ಭಾರತದ ಆಕ್ಷೇಪಗಳ ಹೊರತಾಗಿಯೂ ಪಾಕಿಸ್ತಾನಕ್ಕೆ 800 ಮಿಲಿಯನ್ ಡಾಲರ್ ನೀಡಿದ ಏಷ್ಯನ್‌ ಅಭಿವೃದ್ಧಿ ಬ್ಯಾಂಕ್‌!

- Advertisement -
- Advertisement -

ಭಾರತ ವ್ಯಕ್ತಪಡಿಸಿದ ಆಕ್ಷೇಪಗಳ ಹೊರತಾಗಿಯೂ ಏಷ್ಯನ್‌ ಅಭಿವೃದ್ಧಿ ಬ್ಯಾಂಕ್‌ (ADB) ಪಾಕಿಸ್ತಾನಕ್ಕೆ 800 ಮಿಲಿಯನ್ ಡಾಲರ್‌ ಹಣಕಾಸು ಪ್ಯಾಕೇಜ್‌ ಅನ್ನು ಅನುಮೋದಿಸಿದೆ ಎಂದು ವರದಿಗಳು ತಿಳಿಸಿವೆ. ಬ್ಯಾಂಕ್ ನೀಡಿರುವ ಒಟ್ಟು ಸಾಲದಲ್ಲಿ 300 ಮಿಲಿಯನ್ ಡಾಲರ್‌ ಅನ್ನು ನೀತಿ ಆಧಾರಿತ ಸಾಲ (PBL) ಮತ್ತು 500 ಮಿಲಿಯನ್ ಡಾಲರ್ ಅನ್ನು ಕಾರ್ಯಕ್ರಮ ಆಧಾರಿತ ಗ್ಯಾರಂಟಿ(PBG)ಗಳಿಗೆ ನೀಡಲಾಗಿದೆ ಎಂದು ವರದಿ ಉಲ್ಲೇಖಿಸಿದೆ. ಭಾರತದ ಆಕ್ಷೇಪಗಳ ಹೊರತಾಗಿಯೂ

ಪಾಕಿಸ್ತಾನವು ಅಂತರರಾಷ್ಟ್ರೀಯ ಹಣಕಾಸು ನಿಧಿಯಿಂದ (IMF) 1 ಬಿಲಿಯನ್ ಡಾಲರ್‌ (ಸುಮಾರು ರೂ. 8,500 ಕೋಟಿ) ಪ್ಯಾಕೇಜ್ ಅನ್ನು ಇತ್ತಿಚೆಗೆ ಪಡೆದಿತ್ತು. ಅದಾಗಿ ಒಂದು ತಿಂಗಳ ನಂತರ ಈ ಬೆಳವಣಿಗೆ ಸಂಭವಿಸಿದೆ.

ಪಾಕಿಸ್ತಾನ ಹಣಕಾಸು ಸಚಿವರ ಸಲಹೆಗಾರ ಖುರ್ರಾಮ್ ಶೆಹ್ಜಾದ್ ಸಾಮಾಜಿಕ ಮಾಧ್ಯಮದಲ್ಲಿ ನೀಡಿದ ಸಂಕ್ಷಿಪ್ತ ಹೇಳಿಕೆಯಲ್ಲಿ ಬ್ಯಾಂಕ್‌ನ ಪ್ಯಾಕೇಜ್‌ಗೆ ಸಂಬಂಧಿಸಿದ ಬೆಳವಣಿಗೆಯನ್ನು ದೃಢಪಡಿಸಿದ್ದಾರೆ. 300 ಮಿಲಿಯನ್ ಡಾಲರ್‌ ನೀತಿ ಆಧಾರಿತ ಸಾಲ (PBL) ಮತ್ತು 500 ಮಿಲಿಯನ್ ಡಾಲರ್‌ ಕಾರ್ಯಕ್ರಮ ಆಧಾರಿತ ಗ್ಯಾರಂಟಿ (PBG) ಅನ್ನು ಪ್ಯಾಕೇಜ್ ಒಳಗೊಂಡಿದೆ ಎಂದು ಅವರು ಹೇಳಿದ್ದಾರೆ.

ಬ್ಯಾಂಕಿನ ಪ್ಯಾಕೇಜ್ ಪಾಕಿಸ್ತಾನದ ಹಣಕಾಸಿನ ಸುಸ್ಥಿರತೆಯನ್ನು ಬಲಪಡಿಸುವ ಮತ್ತು ಸಮಗ್ರ ಸುಧಾರಣೆಗಳ ಮೂಲಕ ಸಾರ್ವಜನಿಕ ಹಣಕಾಸು ನಿರ್ವಹಣೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಪಾಕಿಸ್ತಾನದ ADB ನಿರ್ದೇಶಕಿ ಎಮ್ಮಾ ಫ್ಯಾನ್ ಅವರ ಹೇಳಿಕೆಯನ್ನು ಪಿಟಿಐ ಉಲ್ಲೇಖಿಸಿದೆ.

ಸಾರ್ವಜನಿಕ ಖರ್ಚು ಮತ್ತು ನಗದು ನಿರ್ವಹಣೆಯನ್ನು ಹೆಚ್ಚಿಸುವಾಗ ತೆರಿಗೆ ನೀತಿ, ಆಡಳಿತ ಮತ್ತು ಅನುಸರಣೆಯನ್ನು ಸುಧಾರಿಸಲು ದೂರಗಾಮಿ ಸುಧಾರಣೆಗಳನ್ನು ಕಾರ್ಯಕ್ರಮದ ಅಡಿಯಲ್ಲಿ ನಡೆಸಲಾಗುತ್ತದೆ. ಇದು ಡಿಜಿಟಲೀಕರಣ, ಹೂಡಿಕೆ ಸೌಲಭ್ಯ ಮತ್ತು ಖಾಸಗಿ ವಲಯದ ಅಭಿವೃದ್ಧಿಯನ್ನು ಸಹ ಉತ್ತೇಜಿಸುತ್ತದೆ ಎಂದು ವರದಿ ಹೇಳಿದೆ.

ಅಲ್ಲದೆ, ಇದು ಪಾಕಿಸ್ತಾನದ ಹಣಕಾಸಿನ ಕೊರತೆ ಮತ್ತು ಸಾರ್ವಜನಿಕ ಸಾಲವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದ್ದು, ಸಾಮಾಜಿಕ ಮತ್ತು ಅಭಿವೃದ್ಧಿ ವೆಚ್ಚಗಳಿಗೆ ಸ್ಥಳಾವಕಾಶವನ್ನು ಸೃಷ್ಟಿಸುತ್ತವೆ ಎಂದು ವರದಿ ಹೇಳಿದೆ. ದೇಶೀಯ ಸಂಪನ್ಮೂಲ ಕ್ರೋಢೀಕರಣವನ್ನು ಹೆಚ್ಚಿಸುವುದು ಮತ್ತು ಹಣಕಾಸು ಸುಧಾರಣೆಗಳ ಮೂಲಕ ಆರ್ಥಿಕತೆಯನ್ನು ಸ್ಥಿರಗೊಳಿಸುವ ಗುರಿಯನ್ನು ಇದು ಹೊಂದಿದೆ ಎಂದು ಸಚಿವಾಲಯದ ಅಧಿಕಾರಿಗಳನ್ನು ಉಲ್ಲೇಖಿಸಿ ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ.

ತೆರಿಗೆ ವ್ಯವಸ್ಥೆಯನ್ನು ಸುಧಾರಿಸಲು, ಆದಾಯವನ್ನು ಹೆಚ್ಚಿಸಲು ಮತ್ತು ಹಣಕಾಸಿನ ಶಿಸ್ತನ್ನು ಉತ್ತೇಜಿಸಲು ಬ್ಯಾಂಕ್‌ನ ಈ ಬೆಂಬಲವು ಸಹಾಯ ಮಾಡುತ್ತದೆ. ಅಲ್ಲದೆ, ಇದು ದೇಶದ ಆದಾಯದ ಮೂಲವನ್ನು ವಿಸ್ತರಿಸುವ ನಿರೀಕ್ಷೆಯಿದ್ದು, ಆರ್ಥಿಕ ಸ್ವಾವಲಂಬನೆಯತ್ತ ಪ್ರಮುಖ ಹೆಜ್ಜೆಯಿಡುವಂತೆ ಮಾಡುತ್ತದೆ ಎಂದು ಹೇಳಿದೆ. ಭಾರತದ ಆಕ್ಷೇಪಗಳ ಹೊರತಾಗಿಯೂ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಭೋಪಾಲ್ ಅನಿಲ ದುರಂತ: ತ್ಯಾಜ್ಯ ವಿಲೇವಾರಿ ವಿರುದ್ಧದ ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

ಭೋಪಾಲ್ ಅನಿಲ ದುರಂತ: ತ್ಯಾಜ್ಯ ವಿಲೇವಾರಿ ವಿರುದ್ಧದ ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...