ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಗೆಲುವಿನ ಹಿನ್ನಲೆ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಒಬ್ಬ ಮಹಿಳೆ ಸೇರಿದಂತೆ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ಬುಧವಾರ ವರದಿಯಾಗಿದೆ. ಸುಮಾರು 15ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ
ಇಬ್ಬರು ವ್ಯಕ್ತಿಗಳು ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಮೃತಪಟ್ಟರೆ ನಾಲ್ವರು ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಗಳು ಸೂಚಿಸಿವೆ. ಅಲ್ಲದೆ, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ ಎಂದು ವರದಿಗಳು ಸೂಚಿಸಿವೆ.
ಆರ್‌ಸಿಬಿ ತಂಡದ ಸದಸ್ಯರನ್ನು ವೀಕ್ಷಿಸಲು ಬುಧವಾರ ಮಧ್ಯಾಹ್ನ ತಂಡದ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ನಗರವು ಕೆಂಪು ಬಣ್ಣದಿಂದ ತುಂಬಿತ್ತು. ಅನೇಕ ಸ್ಥಳಗಳಲ್ಲಿ, ಮಧ್ಯಾಹ್ನದಿಂದಲೆ ನಗರದಾದ್ಯಂತ ಆರ್‌ಸಿಬಿ, ವಿರಾಟ್ ಕೊಹ್ಲಿ ಮತ್ತು ತಂಡದ ನಾಯಕ ರಜತ್ ಪಾಟಿದಾರ್ ಅವರ ಹೆಸರಿನಲ್ಲಿ ಜೋರಾಗಿ ಜಯಘೋಷಗಳು ಕೇಳಿಬಂದಿದ್ದವು.
ತಂಡವು ಬುಧವಾರ ಮಧ್ಯಾಹ್ನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದು ಮುಖ್ಯಮಂತ್ರಿಯನ್ನು ಭೇಟಿ ಮಾಡಲು ತಮ್ಮ ತಂಡದ ಬಸ್‌ನಲ್ಲಿ ವಿಧಾನಸೌಧಕ್ಕೆ ತೆರಳಿತು. ವಿಧಾನಸೌಧದ ಭವ್ಯ ಮೆಟ್ಟಿಲುಗಳಲ್ಲಿ ವೇದಿಕೆ ಕಾರ್ಯಕ್ರಮ ಮತ್ತು ಸನ್ಮಾನವನ್ನು ಏರ್ಪಡಿಸಲಾಗಿತ್ತು, ಅಲ್ಲಿ ಕೂಡಾ ದೊಡ್ಡ ಜನಸಮೂಹ ಸೇರಿತ್ತು.ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಹಬ್ಬದಂದು ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ ತಪ್ಪಿಸುವಂತೆ ಜಾಮಾ ಮಸೀದಿ ಶಾಹಿ ಇಮಾಮ್ ಮನವಿ
ಹಬ್ಬದಂದು ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ ತಪ್ಪಿಸುವಂತೆ ಜಾಮಾ ಮಸೀದಿ ಶಾಹಿ ಇಮಾಮ್ ಮನವಿ

