Homeಕರ್ನಾಟಕನಿರೀಕ್ಷೆಗಿಂತ ಹೆಚ್ಚು ಜನರು ಬಂದಿರುವುದೇ ಕಾಲ್ತುಳಿತ ದುರಂತಕ್ಕೆ ಕಾರಣ: ಸಿಎಂ ಸಿದ್ದರಾಮಯ್ಯ

ನಿರೀಕ್ಷೆಗಿಂತ ಹೆಚ್ಚು ಜನರು ಬಂದಿರುವುದೇ ಕಾಲ್ತುಳಿತ ದುರಂತಕ್ಕೆ ಕಾರಣ: ಸಿಎಂ ಸಿದ್ದರಾಮಯ್ಯ

ಮ್ಯಾಜಿಸ್ಟ್ರೀಯಲ್ ತನಿಖೆ, ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ

- Advertisement -
- Advertisement -

ಬೆಂಗಳೂರು: ನಿರೀಕ್ಷೆಗಿಂತ ಹೆಚ್ಚು ಜನರು ಬಂದಿರುವುದೇ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಲು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅಧಿಕೃತ ನಿವಾಸ ಕಾವೇರಿಯಲ್ಲಿ ಬುಧವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಚಿನ್ನಸ್ವಾಮಿ ಸ್ಟೇಡಿಯಂಗೆ 35 ಸಾವಿರ ಜನರ ಸಾಮರ್ಥ್ಯವಿದೆ. ಆದರೆ, 2 ರಿಂದ 3 ಲಕ್ಷ ಜನರು ಬಂದಿದ್ದರು. ಇದರಿಂದ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಇಷ್ಟೊಂದು ಜನರು ಬರಬಹುದು ಎಂದು ನಾವು ನಿರೀಕ್ಷೆ ಮಾಡಿರಲಿಲ್ಲ ಎಂದರು.

ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ. ಅಲ್ಲಿ 1 ಲಕ್ಷಕ್ಕೂ ಅಧಿಕ ಜನರು ಸೇರಿದ್ದರು. ಯಾವುದೇ ಅವಘಡ ಸಂಭವಿಸಿಲ್ಲ ಎಂದು ಸ್ಪಷ್ಟಪಡಿಸಿದರು.

“ಅವಘಡದಲ್ಲಿ 11 ಜನರು ಸಾವಿಗೀಡಾಗಿದ್ದಾರೆ, ಒಟ್ಟು 47 ಜನರು ಗಾಯಗೊಂಡಿದ್ದಾರೆ. ಪ್ರಸ್ತುತ ತೀವ್ರವಾಗಿ ಗಾಯಗೊಂಡಿರುವ 33 ಜನರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಚಿಕಿತ್ಸೆ ಪಡೆದು ತೆರಳಿದ್ದಾರೆ. ಮೃತರಲ್ಲಿ ಹೆಚ್ಚಿನವರು ಯುವಜನರು ಎಂದು ತಿಳಿಸಿದರು.

ಮೃತರ ಕುಟುಂಬಸ್ಥರಿಗೆ ಸರ್ಕಾರ ತಲಾ 10 ಲಕ್ಷ ರೂಪಾಯಿ ಪರಿಹಾರ ಕೊಡಲಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡಲಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದವರ ವೆಚ್ಚವನ್ನೂ ಸರ್ಕಾರ ಭರಿಸಲಿದೆ. ಅಲ್ಲದೆ, ಗಾಯಾಳುಗಳಿಗೆ ಆಹಾರ, ಸಾರಿಗೆ ವ್ಯವಸ್ಥೆಯನ್ನೂ ಸರ್ಕಾರವೇ ಮಾಡಲಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮ್ಯಾಜಿಸ್ಟ್ರೀಯಲ್ ತನಿಖೆ

ದುರಂತದ ಬಗ್ಗೆ ಜಿಲ್ಲಾ ದಂಡಾಧಿಕಾರಿ ನೇತೃತ್ವದಲ್ಲಿ ಮ್ಯಾಜಿಸ್ಟ್ರೀಯಲ್ ತನಿಖೆ ಮಾಡಲಾಗುವುದು. 15 ದಿನಗಳಲ್ಲಿ ತನಿಖಾ ವರದಿ ನೀಡಲು ಸೂಚಿಸಲಾಗುವುದು. ವರದಿ ಬಂದ ಬಳಿಕ, ಅದನ್ನು ಆಧರಿಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದರು.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬಸ್ಥರಿಗೆ ಎಲ್ಲಾ ರೀತಿಯ ಸಾಂತ್ವನಗಳನ್ನು ಹೇಳುತ್ತೇನೆ. ದೇವರು ಅವರಿಗೆ ದುಖಃವನ್ನು ಭರಿಸುವ ಶಕ್ತಿ ನೀಡಲಿ ಎಂದರು.

ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ಸಾವಿನ ಸಂಖ್ಯೆ 10ಕ್ಕೆ ಏರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...