ಅಹಿತಕರ ಘಟನೆಗಳನ್ನು ತಡೆಗಟ್ಟುವ ಉದ್ದೇಶದಿಂದ ಬೃಹತ್ ಕಾರ್ಯಕ್ರಮಗಳು, ಸಭೆಗಳು ಮತ್ತು ಆಚರಣೆಗಳಿಗಾಗಿ ಹೊಸ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ (SOP) ವನ್ನು ಕರ್ನಾಟಕ ಸರ್ಕಾರವು ರೂಪಿಸಲಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಗುರುವಾರ ತಿಳಿಸಿದ್ದಾರೆ. ಬುಧವಾರ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದ ಬಳಿ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ ನಂತರ ಈ ಉಪಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಬೆಂಗಳೂರು ಕಾಲ್ತುಳಿತ ಹಿನ್ನಲೆ
ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ ಅವರು, ಆರ್‌ಸಿಬಿ ತಂಡದ ಐಪಿಎಲ್ ವಿಜಯೋತ್ಸವದಲ್ಲಿ ಭಾಗವಹಿಸಲು ಹೆಚ್ಚಿನ ಸಂಖ್ಯೆಯ ಜನರು ಸೇರಿದ್ದ ಕ್ರೀಡಾಂಗಣದ ಬಳಿ ಕಾಲ್ತುಳಿತಕ್ಕೆ ಕಾರಣವಾದ ಲೋಪಗಳನ್ನು ಗುರುತಿಸಲು ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.
ಘಟನೆಯಲ್ಲಿ ಹನ್ನೊಂದು ಜನರು ಸಾವನ್ನಪ್ಪಿದ್ದಾರೆ ಮತ್ತು 56 ಜನರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ಗಾಯಾಳುಗಳಲ್ಲಿ 46 ಜನರು ಚಿಕಿತ್ಸೆಯ ನಂತರ ಮನೆಗೆ ಮರಳಿದ್ದಾರೆ, ಆದರೆ 10 ಜನರು ಆಸ್ಪತ್ರೆಯಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಅವರ ಸ್ಥಿತಿ ಗಂಭೀರವಾಗಿಲ್ಲ ಎಂದು ವೈದ್ಯರು ಹೇಳಿದ್ದಾರೆ.
“ಇಂತಹ ಘಟನೆಗಳನ್ನು ತಡೆಗಟ್ಟುವ ಉದ್ದೇಶದಿಂದ, ಸರ್ಕಾರ, ಗೃಹ ಇಲಾಖೆ ಹೊಸ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ (SOP) ಅನ್ನು ರೂಪಿಸಲಿವೆ. ಇನ್ನು ಮುಂದೆ ಯಾವುದೇ ಬೃಹತ್ ಕಾರ್ಯಕ್ರಮಗಳು, ಸಭೆಗಳು ಮತ್ತು ಆಚರಣೆಗಳನ್ನು ಪೊಲೀಸ್ ಇಲಾಖೆ ಹೊರಡಿಸಿದ ನಿರ್ದೇಶನಗಳ ಚೌಕಟ್ಟಿನೊಳಗೆ ನಡೆಸಬೇಕೆಂದು ನಾವು ಸೂಚನೆಗಳನ್ನು ನೀಡುತ್ತೇವೆ” ಎಂದು ಪರಮೇಶ್ವರ ಹೇಳಿದ್ದಾರೆ.
ಭವಿಷ್ಯದಲ್ಲಿ ಇಂತಹ ಘಟನೆಗಳು ಎಂದಿಗೂ ಸಂಭವಿಸದಂತೆ ನೋಡಿಕೊಳ್ಳಲು ಹೊಸ SOP ಅನ್ನು ರೂಪಿಸಲಾಗುವುದು ಎಂದು ಅವರು ಹೇಳಿದ್ದಾರೆ
“ಇಂತಹ ಸಾವುಗಳು ಸಂಭವಿಸಬಾರದು, ಅಮಾಯಕರು ಸಾಯಬಾರದು, ಮೃತ ದೇಹಗಳನ್ನು ನೋಡುವುದು ಯಾರಿಗೂ ನೋವುಂಟು ಮಾಡುತ್ತದೆ….ಅವರಲ್ಲಿ ಹಲವರು 20-25 ವರ್ಷ ವಯಸ್ಸಿನ ಯುವಕರು. ಅವರು ಸಂತೋಷದಿಂದ ಸಂಭ್ರಮಾಚರಿಸಲು ಬಂದರು. ಅಲ್ಲಿ ಅವರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಾರೆಂದು ನಿರೀಕ್ಷಿಸಿರಲಿಲ್ಲ. ಲೋಪಗಳನ್ನು ಗುರುತಿಸಿ ನಾವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ” ಎಂದು ಅವರು ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಸಭೆ ನಡೆಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಘಟನೆಯ ಬಗ್ಗೆ ಸಮಗ್ರ ತನಿಖೆಗೆ ಆದೇಶಿಸಿದ್ದಾರೆ ಎಂದು ಪರಮೇಶ್ವರ ಹೇಳಿದ್ದಾರೆ. “ಯಾವುದೇ ಲೋಪಗಳು ಕಂಡುಬಂದರೆ, ಜವಾಬ್ದಾರರಾಗಿರುವವ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು. ತನಿಖೆಗೆ ಆದೇಶಿಸಲಾಗಿರುವುದರಿಂದ ವಿವರಗಳಿಗೆ ಹೋಗಲು ಬಯಸುವುದಿಲ್ಲ” ಎಂದು ಅವರು ಹೇಳಿದ್ದಾರೆ. ಬೆಂಗಳೂರು ಕಾಲ್ತುಳಿತ ಹಿನ್ನಲೆ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಪೊಲೀಸ್ ಕಿರುಕುಳದ ಆರೋಪ ಮಾಡಿದ ಪತ್ರಕರ್ತರು: ಮಧ್ಯಂತರ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್ ನಕಾರ
ಪೊಲೀಸ್ ಕಿರುಕುಳದ ಆರೋಪ ಮಾಡಿದ ಪತ್ರಕರ್ತರು: ಮಧ್ಯಂತರ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್ ನಕಾರ

