Homeಮುಖಪುಟಒಂದೇ ಒಂದು ಚಾಕೊಲೇಟ್ ಕದ್ದ ಆರೋಪ: ಐವರು ಬಾಲಕರ ಬೆತ್ತಲೆ ಮೆರವಣಿಗೆ!

ಒಂದೇ ಒಂದು ಚಾಕೊಲೇಟ್ ಕದ್ದ ಆರೋಪ: ಐವರು ಬಾಲಕರ ಬೆತ್ತಲೆ ಮೆರವಣಿಗೆ!

- Advertisement -
- Advertisement -

ಒಂದೇ ಒಂದು ಚಾಕೊಲೇಟ್ ಕದ್ದ ಆರೋಪದ ಮೇಲೆ ಐವರು ಬಾಲಕರನ್ನು ಅಂಗಡಿ ಮಾಲೀಕನೋರ್ವ ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ ಅಮಾನವೀಯ ಘಟನೆ ಬಿಹಾರದ ಗ್ರಾಮವೊಂದರಲ್ಲಿ ನಡೆದಿದೆ.

ವರದಿಗಳ ಪ್ರಕಾರ, ಸೀತಾಮರ್ಹಿ ಜಿಲ್ಲೆಯ ಮಲ್ಲಾಹಿ ಗ್ರಾಮದ ಅಂಗಡಿ ಮಾಲೀಕ ದುಷ್ಕೃತ್ಯವೆಸಗಿದ್ದಾರೆ. ಬಾಲಕರನ್ನು ಬಲವಂತವಾಗಿ ವಿವಸ್ತ್ರಗೊಳಿಸಿ, ಒಂದೇ ಹಗ್ಗಕ್ಕೆ ಅವರೆಲ್ಲರನ್ನು ಕಟ್ಟಿ, ಕತ್ತಿಗೆ ಚಪ್ಪಲಿಯ ಹಾರಹಾಕಿ ಗ್ರಾಮದ ಮಾರುಕಟ್ಟೆ ಪ್ರದೇಶದಲ್ಲಿ ಮೆರವಣಿಗೆ ನಡೆಸಿದ್ದಾರೆ.

ಬಿಳಿ ಸೀಮೆಸುಣ್ಣದಿಂದ ಮಕ್ಕಳ ಮೈಮೇಲೆ ಗೆರೆಗಳನ್ನು ಹಾಕಿ ವಿಕೃತಿ ಮೆರೆಯಲಾಗಿತ್ತು. ಮಕ್ಕಳತ್ತ ಗುರಿ ಮಾಡಿ ಕೈಯಲ್ಲಿ ಬಡಿಗೆ ಹಿಡಿದಿದ್ದ ಅಂಗಡಿ ಮಾಲೀಕ, “ಎಲ್ಲ ಮಕ್ಕಳನ್ನು ನನ್ನ ಅಂಗಡಿಯಿಂದ ಕಳವು ಮಾಡಿದಾಗ ಹಿಡಿಯಲಾಗಿದೆ” ಎಂದು ಹೇಳಿದ್ದಾರೆ. ಅವಮಾನದಿಂದ ಮಕ್ಕಳು ಮುಖಮುಚ್ಚಿಕೊಂಡಿದ್ದರೆ, ಅವರ ಸುತ್ತಲೂ ಗ್ರಾಮಸ್ಥರು ಅಣಕವಾಡುತ್ತಿದ್ದರು ಎಂದು ವರದಿಗಳು ವಿವರಿಸಿವೆ.

ಇಷ್ಟೇ ಅಲ್ಲದೆ, ಅಂಗಡಿ ಮಾಲೀಕ ಕ್ಯಾಮರಾ ಮುಂದೆ ಮಕ್ಕಳು ತಮ್ಮ ಹಾಗೂ ತಮ್ಮ ತಂದೆಯಂದಿರ ಹೆಸರು ಹೇಳುವಂತೆ ಬಲವಂತಪಡಿಸಿದ್ದಾರೆ. ಬಾಲಕರ ಪೈಕಿ ಒಬ್ಬನ ತಲೆಯನ್ನು ಜಜ್ಜಿ ಕ್ಯಾಮರಾ ನೋಡು ಎಂದು ದೌರ್ಜನ್ಯ ನಡೆಸಿದ್ದಾರೆ ಎಂದಿವೆ.

ದೌರ್ಜನ್ಯದ ವೇಳೆ “ನಾನು ಒಂದೇ ಒಂದು ಸ್ನಿಕ್ಕರ್ಸ್ (ಚಾಕೊಲೇಟ್) ತೆಗೆದಿದ್ದೆ” ಎಂದು ಒಬ್ಬ ಬಾಲಕ ಹೇಳಿದ್ದಾನೆ. ಜನನಿಬಿಡ ಮಾರುಕಟ್ಟೆಯಲ್ಲಿ ಮಕ್ಕಳನ್ನು ಬೆತ್ತಲು ಮೆರವಣಿಗೆ ಮಾಡಿದರೂ, ದೌರ್ಜನ್ಯ ತಡೆಯಲು ಯಾರೂ ಮಧ್ಯಪ್ರವೇಶಿಸಿಲ್ಲ. ಬದಲಾಗಿ, ಅವರು ದುಷ್ಕೃತ್ಯ ವಿಡಿಯೋ ಸೆರೆ ಹಿಡಿಯುವುದರಲ್ಲಿ ನಿರತರಾಗಿದ್ದರು. ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಘಟನೆ ಸಂಬಂಧ ಪೊಲೀಸರು ಅಂಗಡಿ ಮಾಲೀಕ ಮತ್ತು ಇತರ ಇಬ್ಬರನ್ನು ಬಂಧಿಸಿದ್ದಾರೆ. ವಿಡಿಯೋ ಚಿತ್ರೀಕರಿಸಿದ ಮಾಧ್ಯಮ ಪ್ರತಿನಿಧಿಯ ವಿರುದ್ಧವೂ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಸೀತಾಮರ್ಹಿ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರೋಹಿತ್ ವೇಮುಲ ಕಾಯ್ದೆಯ ಕರಡು ಪ್ರತಿಯನ್ನು ಮತ್ತಷ್ಟು ಬಲಪಡಿಸಲು ವಿಶ್ವಸಂಸ್ಥೆಯಿಂದ ಸರಕಾರಕ್ಕೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...