Homeಮುಖಪುಟಮಣಿಪುರ ಮತ್ತೆ ಉದ್ವಿಗ್ನ: ಐದು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ, ಇಂಟರ್ನೆಟ್ ಸ್ಥಗಿತ

ಮಣಿಪುರ ಮತ್ತೆ ಉದ್ವಿಗ್ನ: ಐದು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ, ಇಂಟರ್ನೆಟ್ ಸ್ಥಗಿತ

- Advertisement -
- Advertisement -

ಮೈತೇಯಿ ಸಂಘಟನೆ ಆರಂಬೈ ತೆಂಗೋಲ್‌ನ ನಾಯಕನ ಬಂಧನ ವಿರೋಧಿಸಿ ಮಣಿಪುರದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ಭುಗಿಲೆದ್ದಿವೆ. ಶನಿವಾರ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಭಾನುವಾರವೂ ಹಾಗೆಯೇ ಮುಂದುವರಿದಿದೆ. ಆಡಳಿತವು ಇಂಫಾಲ್ ಕಣಿವೆಯ ಐದು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ. ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ, ಇಂಫಾಲ್ ಪಶ್ಚಿಮ, ಇಂಫಾಲ್ ಪೂರ್ವ, ತೌಬಲ್, ಬಿಷ್ಣುಪುರ ಮತ್ತು ಕಾಕ್ಚಿಂಗ್ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಈ ಕಣಿವೆ ಪ್ರದೇಶಗಳಲ್ಲಿ VSAT ಮತ್ತು VPN ಸೌಲಭ್ಯಗಳು ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಕ್ವಾಕಿಥೆಲ್ ಮತ್ತು ಉರಿಪೋಕ್‌ನಲ್ಲಿ ಪ್ರತಿಭಟನಾಕಾರರು ರಸ್ತೆಗಳಲ್ಲಿ ಟೈರ್‌ಗಳು ಮತ್ತು ಹಳೆಯ ಪೀಠೋಪಕರಣಗಳನ್ನು ಸುಟ್ಟುಹಾಕಿದ್ದಾರೆ. ಮೈತೇಯಿ ನಾಯಕನ ಬಿಡುಗಡೆಗೆ ಒತ್ತಾಯಿಸಿದ್ದಾರೆ.

ಶನಿವಾರ ರಾತ್ರಿ ರಾಜ್ಯ ರಾಜಧಾನಿಯ ವಿವಿಧ ಸ್ಥಳಗಳಲ್ಲಿ ಪ್ರತಿಭಟನಾ ನಿರತರು ಮತ್ತು ಭದ್ರತಾ ಪಡೆಗಳ ನಡುವೆ ಘರ್ಷಣೆ ನಡೆದಿದೆ. ಇಂಫಾಲ್ ಪೂರ್ವ ಜಿಲ್ಲೆಯ ಖುರೈ ಲ್ಯಾಮ್ಲಾಂಗ್‌ನಲ್ಲಿ ಗುಂಪೊಂದು ಬಸ್‌ಗೆ ಬೆಂಕಿ ಹಚ್ಚಿದೆ ಎಂದು ವರದಿಯಾಗಿದೆ.

ರಾಜಭವನದಿಂದ ಸುಮಾರು 200 ಮೀಟರ್ ದೂರದಲ್ಲಿರುವ ಕಾಂಗ್ಲಾ ಗೇಟ್ ಮುಂದೆ ಪ್ರತಿಭಟನಾಕಾರರನ್ನು ಚದುರಿಸಲು ಭದ್ರತಾ ಪಡೆಗಳು ಹಲವಾರು ಸುತ್ತು ಅಶ್ರುವಾಯು ಶೆಲ್‌ಗಳನ್ನು ಹಾರಿಸಿವೆ. ರಾಜಭವನಕ್ಕೆ ಹೋಗುವ ರಸ್ತೆಗಳಲ್ಲಿ ಭದ್ರತೆಯನ್ನು ಬಲಪಡಿಸಲಾಗಿದ್ದು, ಹೆಚ್ಚುವರಿ ಕೇಂದ್ರ ಪಡೆಗಳನ್ನು ನಿಯೋಜಿಸಲಾಗಿದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್‌) ಸೆಕ್ಷನ್ 163 ರ ಉಪ-ವಿಭಾಗ 2 ರ ಅಡಿಯಲ್ಲಿ ಇಂಫಾಲ್ ಪಶ್ಚಿಮ ಜಿಲ್ಲಾಡಳಿತವು ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವುದನ್ನು ಮತ್ತು ಕೋಲು, ಕಲ್ಲು, ಬಂದೂಕುಗಳು ಅಥವಾ ಹರಿತವಾದ ಆಯುಧಗಳನ್ನು ಸಾಗಿಸುವುದನ್ನು ನಿಷೇಧಿಸಿದೆ.

ತೌಬಲ್ ಮತ್ತು ಕಕ್ಚಿಂಗ್ ಜಿಲ್ಲೆಗಳಲ್ಲಿ ಇದೇ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂಫಾಲ್ ಪೂರ್ವ ಮತ್ತು ಬಿಷ್ಣುಪುರ ಜಿಲ್ಲೆಗಳಲ್ಲಿ, ಶನಿವಾರ ರಾತ್ರಿ 10 ಗಂಟೆಯಿಂದ ಬಿಎನ್‌ಎಸ್‌ಎಸ್‌ನ ಸೆಕ್ಷನ್ 163 ರ ಉಪ-ವಿಭಾಗ 1 ರ ಅಡಿಯಲ್ಲಿ ಮುಂದಿನ ಆದೇಶದವರೆಗೆ ಜನರು ತಮ್ಮ ಮನೆಗಳಿಂದ ಹೊರಗೆ ಬರುವುದನ್ನು ನಿಷೇಧಿಸಲಾಗಿದೆ.

ಕ್ವಾಕಿಥೆಲ್‌ನಲ್ಲಿ ಹಲವು ಬಾರಿ ಗುಂಡಿನ ಸದ್ದುಗಳು ಕೇಳಿಬಂದಿವೆ. ಆದರೆ, ಗುಂಡು ಹಾರಿಸಿದವರು ಯಾರು ಎಂಬುವುದು ಖಚಿತವಾಗಿ ತಿಳಿದುಬಂದಿಲ್ಲ ಎಂದು ವರದಿಗಳು ಹೇಳಿವೆ.

ಆರಂಬೈಲ್ ತೆಂಗೋಲ್ ನಾಯಕನ ಬಂಧನದ ನಂತರ, ಪ್ರತಿಭಟನಾಕಾರರು ತುಲಿಹಾಲ್‌ನಲ್ಲಿರುವ ಇಂಫಾಲ್ ವಿಮಾನ ನಿಲ್ದಾಣದ ದ್ವಾರಕ್ಕೂ ಮುತ್ತಿಗೆ ಹಾಕಿದ್ದರು. ಬಂಧಿತ ನಾಯಕನನ್ನು ರಾಜ್ಯದ ಹೊರಗೆ ಕರೆದೊಯ್ಯುವ ಯಾವುದೇ ಸಂಭಾವ್ಯ ಪ್ರಯತ್ನವನ್ನು ತಡೆಯಲು ಅವರು ವಿಮಾನ ನಿಲ್ದಾಣದ ಬಳಿ ಹೆದ್ದಾರಿ ತಡೆ ನಡೆಸಿದ್ದರು.

ಬೇರೆಡೆ, ಬಂಧನವನ್ನು ವಿರೋಧಿಸಿ ನಡೆದ ಸಾಂಕೇತಿಕ ಪ್ರತಿಭಟನೆಯಲ್ಲಿ ಆರಂಬೈಲ್ ತೆಂಗೋಲ್ ಸದಸ್ಯರು ತಮ್ಮ ಮೇಲೆ ಪೆಟ್ರೋಲ್ ಸುರಿದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.

ಆಪರೇಷನ್ ಸಿಂದೂರ್ ಪೋಸ್ಟ್‌ಗೆ ಸಂಬಂಧಿಸಿ ಗುಜರಾತ್ ಕಾಂಗ್ರೆಸ್ ನಾಯಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...