Homeಅಂತರಾಷ್ಟ್ರೀಯನೆರವು ಹೊತ್ತು ಗಾಝಾದತ್ತ ತೆರಳಿದ್ದ 'ಮದ್ಲೀನ್' ಹಡಗನ್ನು ವಶಕ್ಕೆ ಪಡೆದ ಇಸ್ರೇಲಿ ಪಡೆ: ಅಪಹರಿಸಲಾಗಿದೆ ಎಂದ...

ನೆರವು ಹೊತ್ತು ಗಾಝಾದತ್ತ ತೆರಳಿದ್ದ ‘ಮದ್ಲೀನ್’ ಹಡಗನ್ನು ವಶಕ್ಕೆ ಪಡೆದ ಇಸ್ರೇಲಿ ಪಡೆ: ಅಪಹರಿಸಲಾಗಿದೆ ಎಂದ ಹೋರಾಟಗಾರರು

- Advertisement -
- Advertisement -

ಗಾಝಾ ಜನತೆಗೆ ಮಾನವೀಯ ನೆರವು ಹೊತ್ತು ತೆರಳಿದ್ದ  ‘ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ (FFC)’ದ ನೆರವು ಹಡಗು ‘ಮದ್ಲೀನ್‌’ ಅನ್ನು ಇಸ್ರೇಲ್ ವಶಕ್ಕೆ ಪಡೆದಿದೆ ಎಂದು ವರದಿಯಾಗಿದೆ.

ಗಾಝಾ ಕಡಲ ತೀರಕ್ಕೆ ತಲುಪಲು ಕೇವಲ 100 ಮೈಲಿ (161 ಕಿ.ಮೀ) ದೂರ ಇರುವಾಗ, ಅಂತಾರಾಷ್ಟ್ರೀಯ ಜಲ ಪ್ರದೇಶದಲ್ಲಿ ಇಸ್ರೇಲಿ ಕಮಾಂಡೋಗಳು ಮದ್ಲೀನ್ ಹಡಗನ್ನು ವಶಕ್ಕೆ ಪಡೆದಿದ್ದು, ಸಿಬ್ಬಂದಿ ಸಹಿತ ಹಡಗನ್ನು ಇಸ್ರೇಲ್‌ನತ್ತ ಕರೆದೊಯ್ಯಲಾಗಿದೆ ಎಂದು ಸುದ್ದಿ ಸಂಸ್ಥೆ aljazeera.com ಸೋಮವಾರ (ಜೂ.9) ವರದಿ ಮಾಡಿದೆ.

ಗಾಝಾಗೆ ಅಗತ್ಯ ಸಾಮಗ್ರಿಗಳನ್ನು ಹೊತ್ತ ಟ್ರಕ್‌ಗಳು ಪ್ರವೇಶಿಸದಂತೆ ಇಸ್ರೇಲ್ ತಡೆಯೊಡ್ಡಿದೆ. ಇದರಿಂದ ಅಲ್ಲಿನ ಜನರು ಆಹಾರ, ನೀರು ಸಿಗದೆ ಪರದಾಡುತ್ತಿದ್ದಾರೆ. ಹಾಗಾಗಿ, ಸಮುದ್ರ ಮಾರ್ಗದ ಮೂಲಕ ಆಹಾರ, ನೀರು, ವೈದ್ಯಕೀಯ ಸಾಮಗ್ರಿಗಳು ಸೇರಿದಂತೆ ಅಗತ್ಯ ಮಾನವೀಯ ನೆರವು ಹೊತ್ತು ಮದ್ಲೀನ್ ಹಡಗು ಜೂನ್ 1ರಂದು ಇಟಲಿಯ ಸಿಸಿಲಿಯಿಂದ ಹೊರಟಿತ್ತು.

ಅಂತಾರಾಷ್ಟ್ರೀಯ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್, ಫ್ರೆಂಚ್ ಸಂಸದೆ ರಿಮಾ ಹಸನ್ ಸೇರಿದಂತೆ ಇತರರು ಹಡಗಿನಲ್ಲಿ ಇದ್ದರು.

ಮದ್ಲೀನ್ ಹಡಗನ್ನು ಇಸ್ರೇಲಿ ಪಡೆ ಅಪಹರಣ ಮಾಡಿದೆ ಎಂದು ಫ್ರೀಡಂ ಫ್ಲೋಟಿಲ್ಲಾ ಆರೋಪಿಸಿದೆ. ಫೇಸ್‌ಬುಕ್‌ನಲ್ಲಿ ಗ್ರೆಟಾ ಥನ್‌ಬರ್ಗ್, ರಿಮಾ ಹಸನ್ ಸೇರಿದಂತೆ ಹಡಗಿನಲ್ಲಿದ್ದವರ ಹೇಳಿಕೆಗಳ ವಿಡಿಯೋಗಳನ್ನು ಸರಣಿಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಪ್ರತಿಯೊಬ್ಬರ ವಿಡಿಯೋದಲ್ಲಿಯೂ ಅವರ ದೇಶವನ್ನು ಉಲ್ಲೇಖಿಸಿ, ಆಯಾ ದೇಶದ ವಿದೇಶಾಂಗ ಇಲಾಖೆ ಮೂಲಕ ನಮಗೆ ಸಹಾಯ ಮಾಡಿ ಎಂದು ಕೋರಿದೆ.

ವಿಡಿಯೋಗಳಲ್ಲಿ ಮಾತನಾಡಿದವರೂ ಕೂಡ “ನಾನು ನಿರ್ದಿಷ್ಟ ದೇಶದ ಪ್ರಜೆ, ನನ್ನನ್ನು ಇಸ್ರೇಲಿ ಪಡೆ ಅಪಹರಣ ಮಾಡಿದೆ. ಇಸ್ರೇಲ್ ಸರ್ಕಾರದ ಮೇಲೆ ಒತ್ತಡ ಹಾಕಿ ನನ್ನನ್ನು ಬಿಡುಗಡೆ ಮಾಡಿಸಲು ನಮ್ಮ ಸರ್ಕಾರಕ್ಕೆ ಹೇಳಿ ಎಂದು ಕೋರಿದ್ದಾರೆ.

ಬಿಬಿಸಿ, ಅಲ್‌-ಜಝೀರಾ ಸೇರಿದಂತೆ ಅಂತಾರಾಷ್ಟ್ರೀಯ ಮಾಧ್ಯಮಗಳ ವರದಿಗಳಲ್ಲಿ, ಲೈಫ್ ಜಾಕೆಟ್ ತೊಟ್ಟ ಹಲವು ಜನರು ತಮ್ಮ ಕೈಗಳನ್ನು ಮೇಲೆತ್ತಿ ಕುಳಿತಿರುವ ಫೋಟೋ ಇದೆ. ಇದು ಇಸ್ರೇಲಿ ಪಡೆ ಮದ್ಲೀನ್ ಹಡಗಿನಲ್ಲಿದ್ದವರನ್ನು ವಶಕ್ಕೆ ಪಡೆದ ಫೋಟೋ ಎಂದು ಹೇಳಲಾಗ್ತಿದೆ.

ಮದ್ಲೀನ್ ಹಡಗನ್ನು ಇಸ್ರೇಲಿ ಪಡೆ ವಶಕ್ಕೆ ಪಡೆದಿದೆ ಎಂದು ಆರೋಪಿಸಿದ್ದ ಫ್ರೀಡಂ ಫ್ಲೋಟಿಲ್ಲಾ ಭಾನುವಾರ ಟೆಲಿಗ್ರಾಂನಲ್ಲಿ ಈ ಫೋಟೋ ಹಂಚಿಕೊಂಡಿತ್ತು ಎಂದು ವರದಿಯಾಗಿದೆ.

ಎಲ್ಲರೂ ಸುರಕ್ಷಿತ ಎಂದ ಇಸ್ರೇಲ್ 

ಹಡಗಿನಲ್ಲಿದ್ದ ಎಲ್ಲ ಯಾತ್ರಿಕರು ಸುರಕ್ಷಿತರಾಗಿದ್ದಾರೆ. ಯಾವುದೇ ಹಾನಿಗೊಳಗಾಗಿಲ್ಲ. ಅವರಿಗೆ ಸ್ಯಾಂಡ್‌ವಿಚ್ ಮತ್ತು ನೀರು ಕೊಡಲಾಗಿದೆ ಎಂದು ಸೋಮವಾರ ಮುಂಜಾನೆ (ಭಾರತೀಯ ಕಾಲಮಾನ) ಇಸ್ರೇಲ್ ವಿದೇಶಾಂಗ ಇಲಾಖೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದೆ.

ಗ್ರೆಟಾ ಥನ್‌ಬರ್ಗ್ ಅವರ ಫೋಟೋ ಹಂಚಿಕೊಂಡಿರುವ ವಿದೇಶಾಂಗ ಇಲಾಖೆ, ಗ್ರೆಟಾ ಇಸ್ರೇಲ್ ಕಡೆ ಪ್ರಯಾಣಿಸುತ್ತಿದ್ದಾರೆ. ಅವರು ಸುರಕ್ಷಿತರಾಗಿದ್ದಾರೆ ಮತ್ತು ಉತ್ಸಾಹದಲ್ಲಿದ್ದಾರೆ ಎಂದು ಬರೆದುಕೊಂಡಿದೆ.

ಅಕ್ರಮ ವಲಸಿಗರೆಂದು ಭಾರತೀಯರ ಗಡಿಪಾರು?..ಅಸ್ಸಾಂನಲ್ಲಿ ಆಗುತ್ತಿರುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...