Homeಮುಖಪುಟಮಹಾರಾಷ್ಟ್ರ| ಕಿಕ್ಕಿರಿದ ರೈಲಿನಿಂದ ಬಿದ್ದು 6 ಪ್ರಯಾಣಿಕರು ಸಾವು, ಹಲವರಿಗೆ ಗಾಯ

ಮಹಾರಾಷ್ಟ್ರ| ಕಿಕ್ಕಿರಿದ ರೈಲಿನಿಂದ ಬಿದ್ದು 6 ಪ್ರಯಾಣಿಕರು ಸಾವು, ಹಲವರಿಗೆ ಗಾಯ

- Advertisement -
- Advertisement -

ಮಹಾರಾಷ್ಟ್ರದ ಥಾಣೆ ಬಳಿಯ ದಿವಾದಲ್ಲಿ ಕಿಕ್ಕಿರಿದ ಲೋಕಲ್ ರೈಲಿನಿಂದ ಬಿದ್ದು ಆರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ.

ದಿವಾ ಮತ್ತು ಕೋಪರ್ ರೈಲು ನಿಲ್ದಾಣಗಳ ನಡುವೆ ಈ ಘಟನೆ ಸಂಭವಿಸಿದ್ದು, ಕಿಕ್ಕಿರಿದ ರೈಲು ಕಸರಾ ಕಡೆಗೆ ಹೋಗುತ್ತಿತ್ತು ಎಂದು ವರದಿಯಾಗಿದೆ.

ಪೀಕ್ ಅವರ್‌ನಲ್ಲಿ ಭಾರೀ ಜನದಟ್ಟಣೆ ಇದ್ದುದರಿಂದ, ಅನೇಕ ಜನರು ರೈಲಿನ ಬಾಗಿಲುಗಳ ಬಳಿ ನಿಂತಿದ್ದರು. ರೈಲು ಚಲಿಸುತ್ತಿರುವಾಗ 10ಕ್ಕಿಂತ ಹೆಚ್ಚು ಪ್ರಯಾಣಿಕರು ಕೆಳಗೆ ಬಿದ್ದಿದ್ದಾರೆ ಎಂದು ವರದಿಗಳು ಹೇಳಿವೆ.

ಪ್ರಯಾಣಿಕರಲ್ಲಿ ಆರು ಮಂದಿ ಸಾವನ್ನಪ್ಪಿದರೆ, ಉಳಿದವರು ಗಾಯಗೊಂಡು ಹತ್ತಿರದ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಮೃತರೆಲ್ಲರು 30 ರಿಂದ 35 ವರ್ಷ ವಯಸ್ಸಿನವರು ಎಂದು ತಿಳಿದು ಬಂದಿದೆ.

ಇದು ರೈಲು ಡಿಕ್ಕಿಯಲ್ಲ. ಎರಡು ರೈಲುಗಳು ವಿರುದ್ಧ ದಿಕ್ಕಿನಲ್ಲಿ ಸಂಚರಿಸುವಾಗ ಮೆಟ್ಟಿಲ ಬಳಿ ನಿಂತಿದ್ದ ಪ್ರಯಾಣಿಕರಿಗೆ ಪರಸ್ಪರ ತಾಗಿದೆ. ಪ್ರಯಾಣಿಕರೊಬ್ಬರು ಹೇಳಿದಂತೆ ಇದು ಘಟನೆಗೆ ಒಂದು ಶಂಕಿತ ಕಾರಣವಾಗಿದೆ. ಎರಡು ರೈಲುಗಳ ನಡುವಿನ ಅಂತರವು 1.5-2 ಮೀಟರ್. ಆದರೆ ತಿರುವುಗಳಲ್ಲಿ ಸ್ವಲ್ಪ ವಾಲುವಿಕೆ ಸಂಭವಿಸುತ್ತದೆ. ಇದು ಘಟನೆಗೆ ಮತ್ತೊಂದು ಕಾರಣವಾಗಿರಬಹುದು” ಎಂದು ಸೆಂಟ್ರಲ್ ರೈಲ್ವೆಯ ಸಿಪಿಆರ್‌ಒ ಸ್ವಪ್ನಿಲ್ ಧನರಾಜ್ ನಿಲಾ ಹೇಳಿದ್ದಾರೆ.

ಪ್ರಯಾಣಿಕರು ಕೈ ತಪ್ಪಿ ಕೆಳಗೆ ಬಿದ್ದಿದ್ದಾರೆಯೇ, ಬ್ಯಾಗ್‌ಗಳು ತಾಗಿ ಬಿದ್ದಿದ್ದಾರೆಯೇ ಅಥವಾ ಯಾರಾದರೂ ಅವರನ್ನು ತಳ್ಳಿದ್ದಾರೆಯೇ ಎಂಬುದನ್ನು ಕಂಡುಹಿಡಿಯುವ ಮೂಲಕ ಘಟನೆಗೆ ಕಾರಣವಾದ ಸಂದರ್ಭಗಳನ್ನು ತನಿಖೆ ಮಾಡಬೇಕು ಎಂದು ಶಿವಸೇನಾ ಸಂಸದ ನರೇಶ್ ಮಾಸ್ಕೆ ಒತ್ತಾಯಿಸಿದ್ದಾರೆ.

ಇದು ಅತ್ಯಂತ ದುರದೃಷ್ಟಕರ ಘಟನೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ಗಾಯಾಳುಗಳಿಗೆ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯ ಬಗ್ಗೆ ರೈಲ್ವೆ ತನಿಖೆ ಆರಂಭಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಅದರ ರೈಲ್ವೆ ಇಲಾಖೆಯು ರೈಲು ಪ್ರಯಾಣಿಕರಿಗೆ ಮೂಲಭೂತ ಸೇವೆಗಳನ್ನು ನೀಡುವಲ್ಲಿ ವಿಫಲವಾಗಿದೆ ಎಂದು ಎನ್‌ಸಿಪಿ ಎಸ್‌ಪಿ ನಾಯಕಿ ವಿದ್ಯಾ ಚವಾಣ್ ಹೇಳಿದ್ದಾರೆ.

ರೈಲ್ವೆ ರೈಲುಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ರೈಲುಗಳ ಬಾಗಿಲುಗಳು ಸ್ವಯಂಚಾಲಿತವಾಗಿ ಮುಚ್ಚಲ್ಪಡುವಂತೆ ನೋಡಿಕೊಳ್ಳಬೇಕು ಇದರಿಂದ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಬಹುದು ಎಂದಿದ್ದಾರೆ.

ಬಂಧಿತ 7 ಮಾವೋವಾದಿಗಳನ್ನು ದಿನಕ್ಕೊಬ್ಬರಂತೆ ಹತ್ಯೆ: ಮಾನವ ಹಕ್ಕುಗಳ ಸಂಘಟನೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...