Homeಕರ್ನಾಟಕಶ್ರೀರಾಮನ ಅವಹೇಳನ ಆರೋಪ: ಚಿಂತಕ ಕೆ.ಎಸ್ ಭಗವಾನ್‌ ಖುಲಾಸೆ

ಶ್ರೀರಾಮನ ಅವಹೇಳನ ಆರೋಪ: ಚಿಂತಕ ಕೆ.ಎಸ್ ಭಗವಾನ್‌ ಖುಲಾಸೆ

- Advertisement -
- Advertisement -

‘ರಾಮ ಮಂದಿರ ಏಕೆ ಬೇಡ’ ಎಂಬ ತಮ್ಮ ಪುಸ್ತಕದಲ್ಲಿ ಶ್ರೀರಾಮನನ್ನು ಹೀಯಾಳಿಸಿದ್ದಾರೆ, ಅವಹೇಳನಕಾರಿ ಪದಗಳ ಬಳಕೆ ಮಾಡಿದ್ದಾರೆ. ಆ ಮೂಲಕ ಹಿಂದೂಗಳ ಧಾರ್ಮಿಖಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ’ಎಂದು ಆರೋಪಿಸಿ ವಕೀಲೆ ಮೀರಾ ರಾಘವೇಂದ್ರ ಅವರು ಲೇಖಕ ಕೆ.ಎಸ್ ಭಗವಾನ್‌ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣವನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಸೋಮವಾರ (ಜೂ.9) ವಜಾಗೊಳಿಸಿದೆ ಎಂದು ವರದಿಯಾಗಿದೆ.

ಮೀರಾ ರಾಘವೇಂದ್ರ ಅವರು ಐಪಿಸಿ ಸೆಕ್ಷನ್‌ 298 ಮತ್ತು 505ರ ಅಡಿ ದಾಖಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ 37ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಎಂ. ಸೈಯದ್‌ ಅರಾಫತ್‌ ಇಬ್ರಾಹಿಂ ಅವರು ಭಗವಾನ್‌ ಅವರನ್ನು ಖುಲಾಸೆಗೊಳಿಸಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಇಂತಹುದೇ ಮತ್ತೊಂದು ಪ್ರಕರಣದಲ್ಲಿ ನ್ಯಾಯಾಲಯ ಇತ್ತಿಚೆಗೆಷ್ಟೇ ಕೆ.ಎಸ್ ಭಗವಾನ್ ಅವರನ್ನು ಖುಲಾಸೆಗೊಳಿಸಿತ್ತು. ಎರಡೂ ಪ್ರಕರಣಗಳಲ್ಲಿ ಹಿರಿಯ ವಕೀಲ ಸಿ.ಎಚ್ ಹನುಮಂತರಾಯ ಅವರು ಭಗವಾನ್‌ ಪರ ವಾದ ಮಂಡಿಸಿದ್ದರು.

ಕೋರ್ಟ್‌ ಆವರಣದಲ್ಲಿ ಭಗವಾನ್‌ ಅವರ ಮುಖಕ್ಕೆ ಮಸಿ ಬಳಿಯುವ ಮೂಲಕ ವಕೀಲೆ ಮೀರಾ ರಾಘವೇಂದ್ರ ಅವರು ವೃತ್ತಿ ದುರ್ನಡತೆ ತೋರಿದ್ದು, ವಕೀಲರ ಶಿಷ್ಟಾಚಾರಗಳಿಗೆ ಅವಮಾನ ಉಂಟು ಮಾಡಿದ್ದಾರೆ. ಈ ಕಾರಣಕ್ಕಾಗಿ ಅವರು ಮೂರು ತಿಂಗಳ ಕಾಲ ದೇಶದ ಯಾವುದೇ ಕೋರ್ಟ್‌ಗಳಲ್ಲಿ ವಕೀಲಿಕೆ ನಡೆಸಬಾರದು ಎಂದು ರಾಜ್ಯ ವಕೀಲರ ಪರಿಷತ್‌ ಇತ್ತೀಚೆಗಷ್ಟೇ ಆದೇಶಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ವಿಚಾರಣೆಗೆ ಹಾಜರಾಗಿದ್ದ ಸಮಯದಲ್ಲಿ ಕೋರ್ಟ್‌ ಆವರಣದಲ್ಲಿ ತಮ್ಮ ಮುಖಕ್ಕೆ ಮೀರಾ ಮಸಿ ಬಳಿದಿದ್ದಾರೆ ಎಂದು ಆರೋಪಿಸಿ ಭಗವಾನ್‌ ಅವರು ದಾಖಲಿಸಿದ್ದ ದೂರನ್ನು ರಾಜ್ಯ ವಕೀಲರ ಪರಿಷತ್ತಿನ ಶಿಸ್ತುಪಾಲನಾ ಸಮಿತಿಯ ಅಧ್ಯಕ್ಷ ಎಸ್‌. ಮಹೇಶ್‌ ಮತ್ತು ಪರಿಷತ್‌ ಸದಸ್ಯ ಎಸ್‌. ಹರೀಶ್‌ ನೇತೃತ್ವದ ಸಮಿತಿ ವಿಚಾರಣೆ ನಡೆಸಿ ಆದೇಶ ನೀಡಿತ್ತು.

‘ರಾಮ ಮಂದಿರ ಏಕೆ ಬೇಡ’ ಎಂಬ ತಮ್ಮ ಪುಸ್ತಕದಲ್ಲಿ ‘ಶ್ರೀರಾಮನನ್ನು ಹೀಯಾಳಿಸಿದ್ದಾರೆ. ಅವಹೇಳನಕಾರಿ ಪದಗಳ ಬಳಕೆ ಮಾಡಿದ್ದಾರೆ. ಈ ಮೂಲಕ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ’ ಎಂದು ಆರೋಪಿಸಿ ವಕೀಲೆ ಮೀರಾ ರಾಘವೇಂದ್ರ ಅವರು ಕೆ.ಎಸ್.ಭಗವಾನ್‌ ವಿರುದ್ಧ 2ನೇ ಎಸಿಎಂಎಂ ನ್ಯಾಯಾಲಯದಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲಿಸಿದ್ದರು.

2021ರ ಫೆಬ್ರವರಿ 4ರಂದು ಕೋರ್ಟ್‌ಗೆ ಹಾಜರಾಗಿ ಷರತ್ತುಬದ್ಧ ಜಾಮೀನು ಪಡೆದು ಹೊರಬರುತ್ತಿದ್ದ  ಭಗವಾನ್‌ ಅವರ ಮುಖಕ್ಕೆ ಮೀರಾ ರಾಘವೇಂದ್ರ ಮಸಿ ಬಳಿದಿದ್ದರು ಮತ್ತು ಎಂ.ಎಂ ಕಲ್ಬುರ್ಗಿ ಹಾಗೂ ಗೌರಿ ಲಂಕೇಶ್‌ ಅವರಂತೆ ನಿಮ್ಮನ್ನೂ ಹತ್ಯೆ ಮಾಡಲಾಗುವುದು ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವನ್ನು ಮೀರಾ ಎದುರಿಸುತ್ತಿದ್ದರು. ಮೀರಾ ಅವರು ತಮ್ಮ ಮುಖಕ್ಕೆ ಮಸಿ ಬಳಿದಿದ್ದ ನಡವಳಿಕೆಯನ್ನು ಆಕ್ಷೇಪಿಸಿ ಭಗವಾನ್‌ ಅವರು ರಾಜ್ಯ ವಕೀಲರ ಪರಿಷತ್‌ನಲ್ಲಿ ದೂರು ದಾಖಲಿಸಿದ್ದರು.

ದಲಿತ ಚಳವಳಿಯಲ್ಲಿ ಬಿ.ಕೃಷ್ಣಪ್ಪ ನಮ್ಮ ಕೈಹಿಡಿದು ನಡೆಸಿದರು: ಮಾವಳ್ಳಿ ಶಂಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....