Homeಮುಖಪುಟಜುಲೈ 1 ರಿಂದ ಆಧಾರ್ ದೃಢೀಕೃತ ಬಳಕೆದಾರರಿಗೆ ಮಾತ್ರ ತತ್ಕಾಲ್ ರೈಲು ಟಿಕೆಟ್‌!

ಜುಲೈ 1 ರಿಂದ ಆಧಾರ್ ದೃಢೀಕೃತ ಬಳಕೆದಾರರಿಗೆ ಮಾತ್ರ ತತ್ಕಾಲ್ ರೈಲು ಟಿಕೆಟ್‌!

- Advertisement -
- Advertisement -

ಜುಲೈ 1 ರಿಂದ ಆಧಾರ್-ದೃಢೀಕೃತ ಬಳಕೆದಾರರು ಮಾತ್ರ ತತ್ಕಾಲ್ ರೈಲು ಟಿಕೆಟ್‌ಗಳನ್ನು ಬುಕ್ ಮಾಡಲು ಸಾಧ್ಯವಾಗುತ್ತದೆ ಎಂದು ಕೇಂದ್ರ ರೈಲ್ವೆ ಸಚಿವಾಲಯ ಬುಧವಾರ ಪ್ರಕಟಿಸಿದೆ. ಜುಲೈ 15 ರಿಂದ ಆನ್‌ಲೈನ್‌ನಲ್ಲಿ ತತ್ಕಾಲ್ ಟಿಕೆಟ್‌ಗಳನ್ನು ಬುಕ್ ಮಾಡಲು ಆಧಾರ್ ಆಧಾರಿತ OTP ದೃಢೀಕರಣವು ಕಡ್ಡಾಯವಾಗಲಿದೆ. ಜುಲೈ 1 ರಿಂದ ಆಧಾರ್

ಪ್ರಯಾಣದ ದಿನಾಂಕಕ್ಕಿಂತ ಒಂದು ದಿನ ಮೊದಲು ರೈಲು ಟಿಕೆಟ್‌ಗಳನ್ನು ಬುಕ್ ಮಾಡುವ ವ್ಯವಸ್ಥೆಯಾಗಿದೆ ತತ್ಕಾಲ್. ಈ ವ್ಯವಸ್ಥೆಯು ಕೊನೆ ಕ್ಷಣದಲ್ಲಿ ಪ್ರಯಾಣವನ್ನು ಯೋಜಿಸುವವರಿಗೆ ಸಹಾಯ ಮಾಡುತ್ತದೆ.

“ಸಿಸ್ಟಮ್-ರಚಿತ OTP ಯ ದೃಢೀಕರಣದ ನಂತರವೇ ಭಾರತೀಯ ರೈಲ್ವೆಗಳು/ಅಧಿಕೃತ ಏಜೆಂಟ್‌ಗಳ ಗಣಕೀಕೃತ PRS (ಪ್ಯಾಸೆಂಜರ್ ರಿಸರ್ವೇಶನ್ ಸಿಸ್ಟಮ್) ಕೌಂಟರ್‌ಗಳ ಮೂಲಕ ಬುಕಿಂಗ್ ಮಾಡಲು ತತ್ಕಾಲ್ ಟಿಕೆಟ್‌ಗಳು ಲಭ್ಯವಿರುತ್ತವೆ. ಇದನ್ನು ಬಳಕೆದಾರರು ಬುಕಿಂಗ್ ಸಮಯದಲ್ಲಿ ಒದಗಿಸಿದ ಮೊಬೈಲ್ ಸಂಖ್ಯೆಯ ಮೂಲಕ ಕಳುಹಿಸಲಾಗುತ್ತದೆ.” ಎಂದು ರೈಲ್ವೆ ಸಚಿವಾಲಯದ ಪತ್ರಿಕಾ ಪ್ರಕಟಣೆಯು ಹೇಳಿದೆ. ಈ ನಿಬಂಧನೆಯು ಜುಲೈ 15 ರಿಂದ ಜಾರಿಗೆ ಬರಲಿದೆ.

ಎಸಿ ಮತ್ತು ಎಸಿ ಅಲ್ಲದ ಎರಡೂ ಕ್ಲಾಸ್‌ಗಳಿಗೆ ತತ್ಕಾಲ್ ಬುಕಿಂಗ್ ಪ್ರಾಂಭವಾದ ಮೊದಲ 30 ನಿಮಿಷಗಳಲ್ಲಿ ಯಾವುದೇ ಏಜೆಂಟ್‌ಗೆ ಬುಕಿಂಗ್‌ಗಳನ್ನು ಅನುಮತಿಸಲಾಗುವುದಿಲ್ಲ ಎಂದು ರೈಲ್ವೆ ನಿರ್ಧರಿಸಿದೆ. ನಿರ್ಧಾರವನ್ನು ದೃಢೀಕರಿಸಿರುವ ರೈಲ್ವೆ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು, ತತ್ಕಾಲ್ ಟಿಕೆಟ್ ಬುಕಿಂಗ್ ವ್ಯವಸ್ಥೆಯಲ್ಲಿನ ಮಾರ್ಪಾಡುಗಳು ಬಳಕೆದಾರರ ದೃಢೀಕರಣವನ್ನು ಹೆಚ್ಚಿಸುವ ಮತ್ತು ಮೋಸದ ಏಜೆಂಟ್‌ಗಳಿಂದ ದುರುಪಯೋಗವನ್ನು ತಡೆಯುವ ಗುರಿಯನ್ನು ಹೊಂದಿವೆ ಎಂದು ಹೇಳಿದ್ದಾರೆ.

ಸಚಿವಾಲಯವು ಹೊಸ ಕಾರ್ಯವಿಧಾನವನ್ನು ವಿವರಿಸುತ್ತಾ, “ಈ ವರ್ಷ ಜುಲೈ 15 ರಿಂದ ಆನ್‌ಲೈನ್‌ನಲ್ಲಿ ಮಾಡುವ ತತ್ಕಾಲ್ ಬುಕಿಂಗ್‌ಗಳಿಗೆ ಆಧಾರ್ ಆಧಾರಿತ OTP ದೃಢೀಕರಣ ಕಡ್ಡಾಯವಾಗಲಿದೆ.” ಎಂದು ಹೇಳಿದೆ. ಹವಾನಿಯಂತ್ರಿತ ಕ್ಲಾಸ್‌ಗಳಿಗೆ ಬೆಳಿಗ್ಗೆ 10 ರಿಂದ ಬೆಳಿಗ್ಗೆ 10.30 ರವರೆಗೆ ಮತ್ತು ಹವಾನಿಯಂತ್ರಿತವಲ್ಲದ ಕ್ಲಾಸ್‌ಗಳಿಗೆ ಬೆಳಿಗ್ಗೆ 11 ರಿಂದ ಬೆಳಿಗ್ಗೆ 11.30 ರವರೆಗೆ ನಿರ್ಬಂಧಗಳು ಅನ್ವಯಿಸುತ್ತವೆ.

ಬುಕಿಂಗ್ ವಿಂಡೋ ತೆರೆದ ತಕ್ಷಣದ ಅವಧಿಯಲ್ಲಿ ಬೃಹತ್ ಬುಕಿಂಗ್‌ಗಳನ್ನು ತಡೆಯುವುದು ನಿರ್ಬಂಧಗಳ ಉದ್ದೇಶವಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಅದಾಗ್ಯೂ, ಕೇಂದ್ರ ಸರ್ಕಾರದ ಈ ತೀರ್ಮಾನಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದು ಇದು ಅಪ್ರಬುದ್ಧ ನಡೆ ಎಂದು ಹೇಳಿದ್ದಾರೆ. “ತತ್ಕಾಲ್ ಟಿಕೆಟ್ ಪ್ರಾರಂಭವಾದ ಐದು ನಿಮಿಷಗಳಲ್ಲಿ ಮುಗಿದು ಹೋಗುತ್ತದೆ. ಅಂತದ್ದರಲ್ಲಿ ಒಟಿಪಿ ಬಂದು ಬುಕ್ ಮಾಡುವಷ್ಟರಲ್ಲಿ ಇದು ಇನ್ನಷ್ಟು ಅಧ್ವಾನ ಸೃಷ್ಟಿಯಾಗುತ್ತದೆ. ವಂಚನೆ ಮಾಡುವವರು ಎಲ್ಲದಕ್ಕೂ ಒಂದು ದಾರಿಯನ್ನು ಸೃಷ್ಟಿ ಮಾಡಿಕೊಂಡಿರುತ್ತಾರೆ. ಆದರೆ ಇದರಿಂದ ತೊಂದರೆಗೆ ಒಳಗಾಗುವುದು ಸಾಮಾನ್ಯ ಜನರು ಮಾತ್ರವೆ” ಎಂದು ಹೇಳಿದ್ದಾರೆ.

ಈಗಾಗಲೆ ಸರ್ಕಾರಿ ವ್ಯವಸ್ಥೆಯಲ್ಲಿ ಒಂದೊಂದು ಒಟಿಪಿ ಬರಲು ಕೆಲವೊಮ್ಮ ಗಂಟೆಗಟ್ಟಲೆ ಕಾಯುವ ಪರಿಸ್ಥಿತಿಯಿದೆ. ಅಂತದ್ದರಲ್ಲಿ ಟಿಕೆಟ್ ಬುಕ್‌ ಮಾಡಲು ಕೂಡಾ ಒಟಿಪಿ ಕೇಳುವುದು ಅನ್ಯಾಯ. ಅಷ್ಟಕ್ಕೂ ಈ ದೇಶದ 93% ಜನರಿಗಷ್ಟೆ ಆಧಾರ್ ಇವೆ. ಇಲ್ಲದವರಿಗೆ ತತ್ಕಾಲ್ ಬುಕ್‌ ಮಾಡಲು ಅವಕಾಶ ನೀಡದಿರುವುದು ಅಸಮಾನತೆ ಅಲ್ಲವೆ? ಸರ್ಕಾರದ ಈ ಕ್ರಮವು ಜನಸಾಮಾನ್ಯರನ್ನು ರೈಲ್ವೆಯಿಂದ ದೂರ ಸರಿಸುವ ಅದರ ಅಜೆಂಡಾದ ಭಾಗ ಎಂದು ಸಾಮಾಜಿಕ ಮಾದ್ಯಮ ಬಳಕೆದಾರರೊಬ್ಬರು ಹೇಳಿದ್ದಾರೆ. ಜುಲೈ 1 ರಿಂದ ಆಧಾರ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಾಕಿಸ್ತಾನ ಪರ ಬೇಹುಗಾರಿಕೆ | ಬಂಧಿತ ಯೂಟ್ಯೂಬರ್‌ ಜ್ಯೋತಿ ಜಾಮೀನು ಅರ್ಜಿ ತಿರಸ್ಕೃತ

ಪಾಕಿಸ್ತಾನ ಪರ ಬೇಹುಗಾರಿಕೆ | ಬಂಧಿತ ಯೂಟ್ಯೂಬರ್‌ ಜ್ಯೋತಿ ಜಾಮೀನು ಅರ್ಜಿ ತಿರಸ್ಕೃತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...