ಧಾರವಾಡದಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಆರ್‌ಟಿಐ ಕಾರ್ಯಕರ್ತರೊಬ್ಬರು ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಗುರುವಾರ ಕ್ಯಾಂಪ್ ಪೊಲೀಸ್ ಠಾಣೆಗೆ ಸಲ್ಲಿಸಿರುವ ದೂರಿನಲ್ಲಿ, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಜನರ ಧ್ವನಿಯಾಗಬೇಕು ಮತ್ತು ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಪ್ರೇರೇಪಿಸಬೇಕಿತ್ತು ಎಂದು ಹೇಳಿದ್ದಾರೆ. ಪೊಲೀಸರ ಮೇಲೆ ಹಲ್ಲೆಗೆ
ಕೇಂದ್ರ ಸರ್ಕಾರದ ಅಡಿಯಲ್ಲಿ ಏರುತ್ತಿರುವ ಬೆಲೆ ಏರಿಕೆಯನ್ನು ವಿರೋಧಿಸಿ ಏಪ್ರಿಲ್ 28, 2025 ರಂದು ಧಾರವಾಡದ ಸಿಪಿಇಡಿ ಮೈದಾನದಲ್ಲಿ ಕಾಂಗ್ರೆಸ್ ಪಕ್ಷ ನಡೆಸಿದ್ದ ಪ್ರತಿಭಟನೆಯ ವೇಳೆ ಘಟನೆ ಸಂಭವಿಸಿತ್ತು. ಈ ವೇಳೆ ಸಿದ್ದರಾಮಯ್ಯ ಅವರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ನಾರಾಯಣ್ ಬಾರಾಮಣಿ ಅವರ ಮೇಲೆ ಕೋಪಗೊಂಡು ಹಲ್ಲೆಗೆ ಮುಂದಾಗಿದ್ದಾರೆ ಎಂದು ಆರೋಪಿಸಿ ಮಾಹಿತಿ ಹಕ್ಕು (ಆರ್‌ಟಿಐ) ಕಾರ್ಯಕರ್ತ ಭೀಮಪ್ಪ ಗಡಾದ ದೂರು ದಾಖಲಿಸಿದ್ದಾರೆ.
ಭೀಮಪ್ಪ ತನ್ನ ದೂರಿನಲ್ಲಿ, ಸಿದ್ದರಾಮಯ್ಯ ಅವರು ಕೀಳು ಮಟ್ಟದ ಭಾಷೆಯನ್ನು ಬಳಸುತ್ತಿದ್ದು, ಸಮವಸ್ತ್ರ ಧರಿಸಿದ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆಗೆ ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಸಿಎಂ ಅವರ ಈ ನಡವಳಿಕೆಯನ್ನು ಅಸಂವಿಧಾನಿಕ ಎಂದು ಕರೆದಿರು ದೂರುದಾರ, “ಈ ಘಟನೆಯು ಸರ್ಕಾರಿ ಅಧಿಕಾರಿಗಳಲ್ಲಿ ಭಯವನ್ನು ಹುಟ್ಟುಹಾಕಿದೆ” ಎಂದು ಹೇಳಿದ್ದಾರೆ.
ಭಾರತೀಯ ನ್ಯಾಯ ಸಂಹಿತದ ಸೆಕ್ಷನ್ 132 ಅನ್ನು ಉಲ್ಲೇಖಿಸಿ, ಸಾರ್ವಜನಿಕ ಸೇವಕರು ತಮ್ಮ ಕರ್ತವ್ಯವನ್ನು ನಿರ್ವಹಿಸದಂತೆ ತಡೆಯಲು ಅವರ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲಪ್ರಯೋಗ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಭೀಮಪ್ಪ ಹೇಳಿದ್ದಾರೆ. ಭಾರತೀಯ ನ್ಯಾಯ ಸಂಹಿತದ ಸೆಕ್ಷನ್ 132 ಎರಡು ವರ್ಷಗಳವರೆಗೆ ಜೈಲು ಶಿಕ್ಷೆ, ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶ ನೀಡುತ್ತದೆ.
ದೂರಿನಲ್ಲಿ ಘಟನೆಗೆ ಸಂಬಂಧಿಸಿದ ವೀಡಿಯೊ ದೃಶ್ಯಾವಳಿಗಳು ಮತ್ತು ಮಾಧ್ಯಮ ವರದಿಗಳನ್ನು ಸೇರಿಸಲಾಗಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಭೀಮಪ್ಪ ಅವರು ಒತ್ತಾಯಿಸಿದ್ದಾರೆ.
ಅಷ್ಟೆ ಅಲ್ಲದೆ, ಮುಖ್ಯಮಂತ್ರಿಯವರ ಕ್ರಮಗಳ ಬಗ್ಗೆ ತನಿಖೆ ನಡೆಸುವಂತೆ ಆಯೋಗವನ್ನು ಒತ್ತಾಯಿಸಿ ದೆಹಲಿಯಲ್ಲಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ (NHRC) ಪ್ರತ್ಯೇಕ ದೂರು ಸಲ್ಲಿಸಿರುವುದಾಗಿ ಅವರು ಉಲ್ಲೇಖಿಸಿದ್ದಾರೆ. ಪೊಲೀಸರ ಮೇಲೆ ಹಲ್ಲೆಗೆ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಎಫ್‌ಐಆರ್ ಗಳ ಮಾಹಿತಿಗೆ ಸೂಚನೆ: ಕೆಲ ಪ್ರಕರಣಗಳ ಸಂಕ್ಷಿಪ್ತ ಮಾಹಿತಿ
ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಎಫ್‌ಐಆರ್ ಗಳ ಮಾಹಿತಿಗೆ ಸೂಚನೆ: ಕೆಲ ಪ್ರಕರಣಗಳ ಸಂಕ್ಷಿಪ್ತ ಮಾಹಿತಿ

