Homeಮುಖಪುಟನ್ಯಾಯಾಂಗ ಆಕ್ಟಿವಿಸಂ ನ್ಯಾಯಾಂಗ ಭಯೋತ್ಪಾದನೆಯಾಗಿ ಬದಲಾಗಬಾರದು: ಸಿಜೆಐ ಗವಾಯಿ

ನ್ಯಾಯಾಂಗ ಆಕ್ಟಿವಿಸಂ ನ್ಯಾಯಾಂಗ ಭಯೋತ್ಪಾದನೆಯಾಗಿ ಬದಲಾಗಬಾರದು: ಸಿಜೆಐ ಗವಾಯಿ

- Advertisement -
- Advertisement -

ನ್ಯಾಯಾಂಗ ಕಾರ್ಯಚಟುವಟಿಕೆ (ಆಕ್ವಿವಿಸಂ) ಮುಂದುವರಿಯಲೇಬೇಕು ಎಂದು ಒತ್ತಿ ಹೇಳಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು, ಆದರೆ ಅದನ್ನು ನ್ಯಾಯಾಂಗ ಭಯೋತ್ಪಾದನೆಯಾಗಿ ಪರಿವರ್ತಿಸಬಾರದು ಎಂದು ಎಚ್ಚರಿಸಿದ್ದಾರೆ. ನ್ಯಾಯಾಂಗ ಆಕ್ಟಿವಿಸಂ ನ್ಯಾಯಾಂಗ

ನ್ಯಾಯಾಂಗ ಪರಿಶೀಲನೆಯ ಅಧಿಕಾರವನ್ನು ಮಿತವಾಗಿ ಬಳಸಬೇಕು ಮತ್ತು ಕಾನೂನುಗಳು ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸಿದರೆ ಮಾತ್ರ ಅದನ್ನು ಬಳಸಬೇಕು ಎಂದು ಅವರು ಹೇಳಿದ್ದಾರೆ.

“ನ್ಯಾಯಾಂಗ ಕ್ರಿಯಾಶೀಲತೆ ಮುಂದುವರಿಯಲೇಬೇಕು. ಅದೇ ಸಮಯದಲ್ಲಿ, ನ್ಯಾಯಾಂಗ ಕ್ರಿಯಾಶೀಲತೆಯನ್ನು ನ್ಯಾಯಾಂಗ ಭಯೋತ್ಪಾದನೆಯಾಗಿ ಪರಿವರ್ತಿಸಬಾರದು. ಆದ್ದರಿಂದ, ಕೆಲವೊಮ್ಮೆ, ನೀವು ಮಿತಿ ಮೀರಲು ಪ್ರಯತ್ನಿಸುತ್ತೀರಿ ಮತ್ತು ಸಾಮಾನ್ಯವಾಗಿ ನ್ಯಾಯಾಂಗವು ಪ್ರವೇಶಿಸಬಾರದ ಪ್ರದೇಶಕ್ಕೆ ಪ್ರವೇಶಿಸಲು ಪ್ರಯತ್ನಿಸುತ್ತೀರಿ” ಎಂದು ಅವರು ಕಾನೂನು ಸುದ್ದಿ ಪೋರ್ಟಲ್‌ನ ಪ್ರಶ್ನೆಗೆ ಉತ್ತರಿಸಿದ್ದಾರೆ.

ಸಂವಿಧಾನವನ್ನು “ಶಾಯಿಯಲ್ಲಿ ಕೆತ್ತಿದ ಶಾಂತ ಕ್ರಾಂತಿ” ಮತ್ತು ಅದು ಹಕ್ಕುಗಳನ್ನು ಖಾತರಿಪಡಿಸುವುದು ಮಾತ್ರವಲ್ಲದೆ ಐತಿಹಾಸಿಕವಾಗಿ ತುಳಿತಕ್ಕೊಳಗಾದವರನ್ನು ಸಕ್ರಿಯವಾಗಿ ಮೇಲಕ್ಕೆತ್ತುವ ಪರಿವರ್ತಕ ಶಕ್ತಿ ಎಂದು ಗವಾಯಿ ಅವರು ಬಣ್ಣಿಸಿದ್ದಾರೆ.

ಮಂಗಳವಾರ ಲಂಡನ್‌ನ ಆಕ್ಸ್‌ಫರ್ಡ್ ಯೂನಿಯನ್‌ನಲ್ಲಿ ‘ಪ್ರಾತಿನಿಧ್ಯದಿಂದ ಸಾಕಾರಕ್ಕೆ: ಸಂವಿಧಾನದ ವಾಗ್ದಾನವನ್ನು ಸಾಕಾರಗೊಳಿಸುವುದು’ ಎಂಬ ವಿಷಯದ ಕುರಿತು ಅವರು ಮಾತನಾಡುತ್ತಿದ್ದರು.

ಭಾರತದ ಅತ್ಯುನ್ನತ ನ್ಯಾಯಾಂಗ ಹುದ್ದೆಯನ್ನು ಅಲಂಕರಿಸಿದ ಎರಡನೇ ದಲಿತ ಮತ್ತು ಮೊದಲ ಬೌದ್ಧ ಅನುಯಾಯಿ ಆಗಿರುವ ಗವಾಯಿ ಅವರು, ತಳ ಸಮುದಾಯಗಳ ಮೇಲೆ ಸಂವಿಧಾನದ ಸಕಾರಾತ್ಮಕ ಪರಿಣಾಮವನ್ನು ಎತ್ತಿ ತೋರಿಸಿದ್ದು ಮತ್ತು ಈ ಅಂಶವನ್ನು ಒತ್ತಿ ಹೇಳಿದ್ದಾರೆ.

“ಹಲವು ದಶಕಗಳ ಹಿಂದೆ, ಭಾರತದ ಲಕ್ಷಾಂತರ ನಾಗರಿಕರನ್ನು ‘ಅಸ್ಪೃಶ್ಯರು’ ಎಂದು ಕರೆಯಲಾಗುತ್ತಿತ್ತು. ಅವರನ್ನು ಅಶುದ್ಧರು ಎಂದು ಹೇಳಲಾಗುತ್ತಿತ್ತು. ಅವರು ಸೇರಬಾರದು ಎಂದು ಅವರಿಗೆ ಹೇಳಲಾಗುತ್ತಿತ್ತು. ಅವರು ತಮಗಾಗಿ ಮಾತನಾಡಲು ಸಾಧ್ಯವಿಲ್ಲ ಎಂದು ಅವರಿಗೆ ಹೇಳಲಾಗುತ್ತಿತ್ತು.

ಆದರೆ ಇಂದು ನಾವು ಇಲ್ಲಿದ್ದೇವೆ, ಅದೇ ಜನರಿಗೆ ಸೇರಿದ ವ್ಯಕ್ತಿಯೊಬ್ಬ ದೇಶದ ನ್ಯಾಯಾಂಗದ ಅತ್ಯುನ್ನತ ಹುದ್ದೆಯನ್ನು ಹೊಂದಿರುವವರಾಗಿ ಬಹಿರಂಗವಾಗಿ ಮಾತನಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ. ನ್ಯಾಯಾಂಗ ಆಕ್ಟಿವಿಸಂ ನ್ಯಾಯಾಂಗ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಒಪ್ಪಿಗೆ: 1 ಸಮೀಕ್ಷೆಗೆ 10 ವರ್ಷ ಅವಧಿ ಎಂದ ಸಿಎಂ

ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಒಪ್ಪಿಗೆ: 1 ಸಮೀಕ್ಷೆಗೆ 10 ವರ್ಷ ಅವಧಿ ಎಂದ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...