Homeಮುಖಪುಟಏರ್ ಇಂಡಿಯಾ ಪತನ: ವಿಮಾನದಲ್ಲಿದ್ದ 242 ಪ್ರಯಾಣಿಕರಲ್ಲಿ ಬಹುತೇಕರ ಸಾವಿನ ಶಂಕೆ

ಏರ್ ಇಂಡಿಯಾ ಪತನ: ವಿಮಾನದಲ್ಲಿದ್ದ 242 ಪ್ರಯಾಣಿಕರಲ್ಲಿ ಬಹುತೇಕರ ಸಾವಿನ ಶಂಕೆ

- Advertisement -
- Advertisement -

ಅಹಮದಾಬಾದ್: ಅಹಮದಾಬಾದ್​ನಲ್ಲಿ ಸಂಭವಿಸಿದ ವಿಮಾನ ಪತನದಲ್ಲಿ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ವಿಜಯ್​ ರೂಪಾನಿ ಸೇರಿದಂತೆ 242 ಪ್ರಯಾಣಿಕರಲ್ಲಿ 241 ಜನರು ಮೃತಪಟ್ಟಿರುವ ಶಂಕೆಯಿದೆ. ಒಬ್ಬ ಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿರುವುದು ದೃಢವಾಗಿದೆ. ಆತನನ್ನು ಅಸ್ಪತ್ರೆಗೆ ಸೇರಿಸಲಾಗಿದೆ ಎಂದು ಅಹಮದಾಬಾದ್ ನಗರ ಪೊಲೀಸ್ ಕಮಿಷನರ್​​​ ಮಾಹಿತಿ ನೀಡಿದ್ದಾರೆ.

ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ದೃಢಪಟ್ಟಿರುವ ವ್ಯಕ್ತಿಯನ್ನು 40 ವರ್ಷದ ರಮೇಶ್ ವಿಶ್ವಾಸ್ ಕುಮಾರ್ ಎಂದು ಗುರುತಿಸಲಾಗಿದೆ. ಅವರಿಗೆ ಅಹಮದಾಬಾದ್‌ನ ಅಸರ್ವಾ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕೆಲವರು ಚಿಕಿತ್ಸೆ ಪಡೆಯುತ್ತಿದ್ದು ಸಾವಿನ ಸಂಖ್ಯೆಯನ್ನು ನಿಖರವಾಗಿ ಈಗ ಹೇಳಲು ಸಾಧ್ಯವಿಲ್ಲವೆಂದು ಉನ್ನತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

2009ರ ಸೆಪ್ಟೆಂಬರ್​ 2ರಂದು ಬೆಲ್​ 430 ಹೆಲಿಕಾಪ್ಟರ್​ ಪತನವಾಗಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ
ವೈ. ಎಸ್​ ರಾಜಶೇಖರ್​ ರೆಡ್ಡಿ ಮೃತಪಟ್ಟಿದ್ದರು. ಗುರುವಾರ (ಜೂ.12) ಅಹಮದಾಬಾದ್​ ವಿಮಾನ ನಿಲ್ದಾಣದಿಂದ 242 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್​ ಇಂಡಿಯಾ ವಿಮಾನ ಟೇಕ್​ ಆಫ್​ ಆದ ಐದೇ ನಿಮಿಷಕ್ಕೆ ಅಪಘತಕ್ಕೀಡಾಗಿದೆ.

ಮಾಜಿ ಸಿಎಂ ವಿಜಯ್​ ರೂಪಾನಿಯವರು ತಮ್ಮ ಮಗಳನ್ನು ಭೇಟಿ ಮಾಡಲು ಇದೇ ವಿಮಾನದಲ್ಲಿ ಲಂಡನ್​ಗೆ ತೆರಳುತ್ತಿದ್ದರು. ವಿಜಯ್​ ರೂಪಾನಿಯವರು ಗುಜರಾತ್​ನ 16ನೇ ಮುಖ್ಯಮಂತ್ರಿಯಾಗಿದ್ದರು. ಇವರ ಕುರಿತು ಇನ್ನೂ ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, ಏಳು ಪೋರ್ಚುಗೀಸ್ ಮತ್ತು ಒಬ್ಬ ಕೆನಡಾದ ಪ್ರಜೆ ವಿಮಾನದಲ್ಲಿದ್ದರು. ಸಂಜೆ ನಂತರ, ವಿಮಾನದಲ್ಲಿದ್ದ 242 ಪ್ರಯಾಣಿಕರಲ್ಲಿ 241 ಪ್ರಯಾಣಿಕರು ಅಪಘಾತದಲ್ಲಿ ಸಾವನ್ನಪ್ಪಿರುವ ಶಂಕೆಯಿದೆ ಎಂದು ಪೊಲೀಸರು ಹೇಳಿದ್ದಾರೆ.

ಅಪಘಾತದ ಬಗ್ಗೆ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ಈ ಘಟನೆ “ಎಲ್ಲರನ್ನೂ ದಿಗ್ಭ್ರಮೆಗೊಳಿಸಿದೆ ಮತ್ತು ದುಃಖಿಸಿದೆ” ಎಂದು ಹೇಳಿದರು. ವಿಮಾನ ಟೇಕ್ ಆಫ್‌ಗೆ ಅನುಮತಿ ಪಡೆದ ಸುಮಾರು ಒಂಬತ್ತು ನಿಮಿಷಗಳ ನಂತರ ಅಪಘಾತ ಸಂಭವಿಸಿದೆ ಎಂದು ರಾಜ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಏರ್ ಇಂಡಿಯಾ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, “ನಾವು ವಿವರಗಳನ್ನು ಖಚಿತಪಡಿಸಿಕೊಳ್ಳುತ್ತಿದ್ದೇವೆ ಮತ್ತು ಸಾಧ್ಯವಾದಷ್ಟು ಬೇಗ ಹೆಚ್ಚಿನ ಮಾಹಿತಿಯನ್ನು ಹಂಚಿಕೊಳ್ಳುತ್ತೇವೆ. ಇದಕ್ಕಾಗಿ ಏರ್ ಇಂಡಿಯಾವು 1800 5691 444 ಎಂಬ ಮೀಸಲಾದ ಪ್ರಯಾಣಿಕರ ಹಾಟ್‌ಲೈನ್ ಸಂಖ್ಯೆಯನ್ನು ಸಹ ಸ್ಥಾಪಿಸಿದೆ.

ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದಲ್ಲಿ ಇದ್ದ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ 

ಗುಜರಾತ್ | 200 ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...