ಇರಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಗಳ ಹಿನ್ನಲೆ ಪ್ರಾದೇಶಿಕ ಉದ್ವಿಗ್ನತೆ ತೀವ್ರವಾಗಿ ಹೆಚ್ಚಾಗಿದ್ದು, ಭಾರತವು ಶುಕ್ರವಾರ ಇರಾನ್ ಮತ್ತು ಇಸ್ರೇಲ್‌ನಲ್ಲಿರುವ ತನ್ನ ನಾಗರಿಕರಿಗೆ ತುರ್ತು ಪ್ರಯಾಣ ಸಲಹೆಗಳನ್ನು ನೀಡಿದೆ. ಅದಾಗ್ಯೂ, ಇರಾನ್ ತನ್ನ ವಾಯುಪ್ರದೇಶವನ್ನು ಮುಚ್ಚಿದ್ದು, ಅದರ ನಂತರ ಏರ್ ಇಂಡಿಯಾ ತನ್ನ 15 ಕ್ಕೂ ಹೆಚ್ಚು ಅಂತರರಾಷ್ಟ್ರೀಯ ವಿಮಾನಗಳನ್ನು ಬೇರೆಡೆಗೆ ತಿರುಗಿಸಿದೆ.ಇರಾನ್ ಮೇಲೆ ಇಸ್ರೇಲ್
ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಎಲ್ಲಾ ಭಾರತೀಯ ಪ್ರಜೆಗಳು ಮತ್ತು ಇರಾನ್‌ನಲ್ಲಿರುವ ಭಾರತೀಯ ಮೂಲದ ವ್ಯಕ್ತಿಗಳು ತೀವ್ರ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದೆ.
“ಇರಾನ್‌ನಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಎಲ್ಲಾ ಭಾರತೀಯ ಪ್ರಜೆಗಳು ಮತ್ತು ಇರಾನ್‌ನಲ್ಲಿರುವ ಭಾರತೀಯ ಮೂಲದ ವ್ಯಕ್ತಿಗಳು ಜಾಗರೂಕರಾಗಿರಲು, ಎಲ್ಲಾ ಅನಗತ್ಯ ಚಲನೆಗಳನ್ನು ತಪ್ಪಿಸಲು, ರಾಯಭಾರ ಕಚೇರಿಯ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಅನುಸರಿಸಲು ಮತ್ತು ಸ್ಥಳೀಯ ಅಧಿಕಾರಿಗಳ ಸಲಹೆಯಂತೆ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸಲು ವಿನಂತಿಸಲಾಗಿದೆ” ಎಂದು ರಾಯಭಾರ ಕಚೇರಿ ಎಕ್ಸ್‌ನಲ್ಲಿ ತಿಳಿಸಿದೆ.
ಅದೇ ವೇಳೆ, ಪ್ರದೇಶದಲ್ಲಿ ಉದ್ವಿಗ್ನತೆ ಮತ್ತಷ್ಟು ಉಲ್ಬಣಗೊಳ್ಳುವ ಭೀತಿಯ ನಡುವೆ ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾರತೀಯ ಪ್ರಜೆಗಳಿಗೆ ಇದೇ ರೀತಿಯ ಎಚ್ಚರಿಕೆಯನ್ನು ನೀಡಿದೆ, .
“ಪ್ರದೇಶದಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್‌ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ಜಾಗರೂಕರಾಗಿರಲು ಮತ್ತು ಇಸ್ರೇಲ್ ಅಧಿಕಾರಿಗಳು ಮತ್ತು ಹೋಮ್ ಫ್ರಂಟ್ ಕಮಾಂಡ್ ಸೂಚಿಸಿದಂತೆ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಪಾಲಿಸಲು ಸೂಚಿಸಲಾಗಿದೆ” ಎಂದು ಅದು ಹೇಳಿದೆ.
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ‘ಆಪರೇಷನ್ ರೈಸಿಂಗ್ ಲಯನ್’ ಅನ್ನು ಪ್ರಾರಂಭಿಸುವುದಾಗಿ ಘೋಷಿಸಿದ ನಂತರ ಈ ಎರಡು ಸಲಹೆಗಳನ್ನು ನೀಡಲಾಗಿದೆ. ಈ ಆಪರೇಷನ್ ಇರಾನ್‌ನ ಪರಮಾಣು ಸಾಮರ್ಥ್ಯಗಳನ್ನು ದುರ್ಬಲಗೊಳಿಸುವ ಗುರಿಯನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ.
ಇಸ್ರೇಲ್ ದಾಳಿಗಳು ನಟಾಂಜ್‌ನಲ್ಲಿರುವ ಯುರೇನಿಯಂ ಪುಷ್ಟೀಕರಣ ಸೌಲಭ್ಯ ಸೇರಿದಂತೆ ಪ್ರಮುಖ ಪರಮಾಣು ಮೂಲಸೌಕರ್ಯದ ಮೇಲೆ ಪರಿಣಾಮ ಬೀರಿವೆ ಎಂದು ನೆತನ್ಯಾಹು ಹೇಳಿದ್ದಾರೆ.
ಇಸ್ರೇಲ್ ದಾಳಿಯಿಂದಾಗಿ ಇರಾನ್ ತನ್ನ ವಾಯುಪ್ರದೇಶದ ಕೆಲವು ಭಾಗಗಳನ್ನು ಮುಚ್ಚಿದ್ದು, ವಾಣಿಜ್ಯ ವಾಯು ಸಂಚಾರಕ್ಕೂ ಅಡ್ಡಿಯಾಗಿದೆ. ಏರ್ ಇಂಡಿಯಾದ ಹಲವಾರು ದೀರ್ಘ-ಪ್ರಯಾಣದ ವಿಮಾನಗಳನ್ನು ಮಾರ್ಗಮಧ್ಯದಲ್ಲಿ ತಿರುಗುವಂತೆ ಅಥವಾ ಹಿಂತಿರುಗುವಂತೆ ಆಯಿದೆ.
ಭಾರತೀಯ ಪ್ರಜೆಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕವನ್ನು ಕಾಯ್ದುಕೊಳ್ಳುವಾಗ, ಪ್ರದೇಶದಲ್ಲಿನ ತನ್ನ ಕಾರ್ಯಾಚರಣೆಗಳ ಮೂಲಕ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಭಾರತ ಸರ್ಕಾರ ಹೇಳಿದೆ. ಇರಾನ್ ಮೇಲೆ ಇಸ್ರೇಲ್
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಏರ್ ಇಂಡಿಯಾ ಪತನ: ಮೃತಪಟ್ಟ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ, ಸಾವಿನ ಸಂಖ್ಯೆ ಕನಿಷ್ಠ 265
ಏರ್ ಇಂಡಿಯಾ ಪತನ: ಮೃತಪಟ್ಟ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ, ಸಾವಿನ ಸಂಖ್ಯೆ ಕನಿಷ್ಠ 265

