Homeಕರ್ನಾಟಕಸಚಿವ ಸ್ಥಾನಮಾನ ಮತ್ತೆ ನೀಡಿ : ಮುಖ್ಯಮಂತ್ರಿಗೆ ಪತ್ರ ಬರೆದ ಮಹೇಶ್‌ ಜೋಶಿ

ಸಚಿವ ಸ್ಥಾನಮಾನ ಮತ್ತೆ ನೀಡಿ : ಮುಖ್ಯಮಂತ್ರಿಗೆ ಪತ್ರ ಬರೆದ ಮಹೇಶ್‌ ಜೋಶಿ

- Advertisement -
- Advertisement -

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಿಗೆ ನೀಡಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನು ಮತ್ತೆ ನೀಡಬೇಕು. ಜತೆಗೆ ಅಧ್ಯಕ್ಷರ ಘನತೆ, ಗೌರವಗಳನ್ನು ಮರಳಿ ಸ್ಥಾಪಿಸಬೇಕು ಎಂದು ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಶಿ ಕೋರಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಮಹೇಶ್ ಜೋಶಿ, ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನು ಮರಳಿ ನೀಡುವ ಮೂಲಕ ಕನ್ನಡ ಸಾಹಿತ್ಯ ಪರಿಷತ್ ಮತ್ತು ಸರಕಾರದ ನಡುವಿನ ಸೌಹಾರ್ದವನ್ನು ಕಾಪಾಡಬೇಕೆಂದು ಏಳು ಕೋಟಿ ಕನ್ನಡಿಗರ ಪರವಾಗಿ ವಿನಂತಿಸುತ್ತಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪರಿಷತ್ ಅಧ್ಯಕ್ಷರಿಗೆ ಇತಿಹಾಸದಲ್ಲಿಯೇ ಮೊದಲ ಬಾರಿ ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನು ನೀಡಲಾಗಿದೆ. ಸಚಿವ ಸ್ಥಾನಮಾನಕ್ಕೆ ದೊರಕುವ ಇಂಧನ ಭತ್ಯೆ, ನೀರು, ವಿದ್ಯುತ್ ಸೌಲಭ್ಯ, ಸಿಬ್ಬಂದಿ ನೇಮಕಾತಿ ಮುಂತಾದ ಸೌಲಭ್ಯಗಳನ್ನು ಬಳಸಿಕೊಳ್ಳದೇ, ಕೇವಲ ಶಿಷ್ಟಾಚಾರ ಹಾಗೂ ಕನ್ನಡದ ಹಿತದೃಷ್ಠಿಯಿಂದ ಅನಿವಾರ್ಯತೆ ಬಂದಾಗ ಮಾತ್ರ ಕೆಲವು ಸೌಲಭ್ಯಗಳನ್ನು ಬಳಸಿಕೊಂಡಿದ್ದು, ಇದರಿಂದ ಕಸಾಪಗೆ ಯಾವುದೇ ಆರ್ಥಿಕ ಹೊರೆಯಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕಸಾಪ ಅಧ್ಯಕ್ಷರ ಚುನಾವಣೆಯ ಸಂದರ್ಭದಿಂದಲೂ, ಹಿರಿಯ ಸಾಹಿತಿಗಳಾದ ಪ್ರೊ.ಎಸ್.ಜಿ. ಸಿದ್ದರಾಮಯ್ಯ, ಜಾಣಗೆರೆ ವೆಂಕಟರಾಮಯ್ಯ, ಡಾ.ಬಂಜಗೆರೆ ಜಯಪ್ರಕಾಶ್, ಜಯಪ್ರಕಾಶ ಗೌಡ, ಮೀರಾ ಶಿವಲಿಂಗಯ್ಯ, ಸಿ.ಕೆ.ರಾಮೇಗೌಡ, ಆರ್.ಜಿ.ಹಳ್ಳಿ ನಾಗರಾಜ್, ವಿಮಲಾ ಕೆ.ಎಸ್., ಸುನಂದ ಜಯರಾಂ ಮುಂತಾದವರ ಒಂದು ಗುಂಪು ನನ್ನ ಬಗ್ಗೆ ಅಸಹನೆಯಿಂದ ಯಾವಾಗಲೂ ನನ್ನ ವಿರುದ್ಧ ವೈಯಕ್ತಿಕವಾಗಿ ವಿರೋಧ ಮಾಡುತ್ತಾ ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡುತ್ತಿದೆ ಎಂದು ಮಹೇಶ್ ಜೋಶಿ ದೂರಿದ್ದಾರೆ.

ಸಚಿವ ಸ್ಥಾನಮಾನವನ್ನು ಹಿಂಪಡೆಯುವಾಗ ರಾಜ್ಯ ಸರಕಾರ ಸೌಜನ್ಯಕ್ಕಾದರೂ ಕಸಾಪ ಅಧ್ಯಕ್ಷರ ಪ್ರತಿಕ್ರಿಯೆ ಕೇಳದೆ ಏಕಪಕ್ಷೀಯವಾಗಿ ಕ್ರಮಕೈಗೊಂಡಿದೆ ಎಂದು ತಿಳಿಸಿದ್ದಾರೆ.

ಸಚಿವ ಸ್ಥಾನಮಾನ ವಾಪಸ್‌ ಪಡೆದಿದ್ದ ಸರಕಾರ

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್‌ ಜೋಶಿ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಮತ್ತು ಸವಲತ್ತುಗಳನ್ನು ರಾಜ್ಯ ಸರ್ಕಾರವು ಮೇ 31ರಂದು ಹಿಂದಕ್ಕೆ ಪಡೆದಿತ್ತು.

ಮಹೇಶ್‌ ಜೋಶಿ ಅವರ ಕಾರ್ಯವೈಖರಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ, ಕೆಲ ಸಾಹಿತಿಗಳು ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು. ಸಾಹಿತ್ಯ ಪರಿಷತ್ತಿನ ಸ್ಥಾನದಿಂದ ಅವರನ್ನು ಇಳಿಸಬೇಕು ಎಂದು ಕೋರಿದ್ದರು. ಅದರ ಬೆನ್ನಲ್ಲೇ ರಾಜ್ಯ ಸರ್ಕಾರವು ಈ ಆದೇಶ ಹೊರಡಿಸಿತ್ತು.

ನಾಡೋಜ ಡಾ. ಮಹೇಶ್ ಜೋಶಿ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಾಗೂ ಸವಲತ್ತುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ-2 ಬಾಣದರಂಗಯ್ಯ ಎನ್.ಆರ್. ಅವರು ಈ ಆದೇಶ ಹೊರಡಿಸಿದ್ದರು.

ಇರಾನ್ ಮೇಲೆ ಇಸ್ರೇಲ್ ದಾಳಿ; ಭಾರತೀಯರಿಗೆ ತುರ್ತು ಪ್ರಯಾಣ ಸಲಹೆ ನೀಡಿದ ಭಾರತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...