Homeಅಂತರಾಷ್ಟ್ರೀಯಇಸ್ರೇಲ್ ಮೇಲೆ ಇರಾನ್ ದಾಳಿ | ಶ್ಲಾಘಿಸಿದ ಪ್ಯಾಲೆಸ್ತೀನ್‌ ಹೋರಾಟಗಾರರ ಪಡೆ ಹಮಾಸ್

ಇಸ್ರೇಲ್ ಮೇಲೆ ಇರಾನ್ ದಾಳಿ | ಶ್ಲಾಘಿಸಿದ ಪ್ಯಾಲೆಸ್ತೀನ್‌ ಹೋರಾಟಗಾರರ ಪಡೆ ಹಮಾಸ್

- Advertisement -
- Advertisement -

ಪ್ಯಾಲೆಸ್ತೀನ್ ಆಕ್ರಮಿತ ಇಸ್ರೇಲ್ ಮೇಲೆ ಇರಾನ್‌ ನಡೆಸಿದ ಕ್ಷಿಪಣಿ ದಾಳಿಯನ್ನು ಪ್ಯಾಲೆಸ್ತೀನಿ ಪ್ರತಿರೋಧ ಪಡೆ ಹಮಾಸ್‌ ಶನಿವಾರ ಶ್ಲಾಘಿಸಿದ್ದು, ಇಸ್ರೇಲ್ ಭಾರಿ ಪ್ರಚಾರ ಮಾಡುವ ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳಾದ “ಐರನ್ ಡೋಮ್ ಮತ್ತು ಡೇವಿಡ್‌ನ ಸ್ಲಿಂಗ್”ನ ದೌರ್ಬಲ್ಯವನ್ನು ಈ ದಾಳಿ ಬಹಿರಂಗಪಡಿಸಿದೆ ಎಂದು ಹೇಳಿದೆ. ಇಸ್ರೇಲ್ ಮೇಲೆ ಇರಾನ್ ದಾಳಿ

ಇರಾನ್‌ನ ಪರಮಾಣು ಕೇಂದ್ರ ಮತ್ತು ಇತರ ಪ್ರದೇಶಗಳನ್ನು ಗುರಿಯಾಗಿಸಿ ಶುಕ್ರವಾರ ಇಸ್ರೇಲ್ ನಡೆಸಿದ್ದ ದಾಳಿಯಲ್ಲಿ ದೇಶದ ಪರಮಾಣು ವಿಜ್ಞಾನಿಗಳು, ಹಿರಿಯ ಸೇನಾಧಿಕಾರಿಗಳು ಹಾಗೂ ನಾಗರಿಕರ ಮೃತಪಟ್ಟಿದ್ದರು. ಇರಾನ್‌ ಇದಕ್ಕೆ ಪ್ರತಿಕಾರವಾಗಿ ಇಸ್ರೇಲ್ ಮೇಲೆ ಪ್ರತಿದಾಳಿ ನಡೆಸಿದ್ದು, ಈ ವರೆಗೆ ಇಬ್ಬರು ಮೃತಪಟ್ಟಿದ್ದು, 40 ಜನರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ಇರಾನ್‌ನ ದಾಳಿಯ ಬಗ್ಗೆ ಪ್ರತಿಕ್ರಿಯಿಸಿರುವ ಪ್ಯಾಲೆಸ್ತೀನ್‌ನ ಪರ ಹೋರಾಟಗಾರ ಸಂಘಟನೆ ಹಮಾಸ್‌ನ ನಾಯಕ ಇಜ್ಜತ್ ಅಲ್-ರಿಷೇಕ್ ಅವರು, “ಐರನ್ ಡೋಮ್ ಮತ್ತು ಡೇವಿಡ್‌ನ ಸ್ಲಿಂಗ್ ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳ ಬಗ್ಗೆಗಿನ ಇಸ್ರೇಲ್‌ನ ಎಲ್ಲಾ ಪ್ರಚಾರದ ಹೊರತಾಗಿಯೂ ಇರಾನ್ ಇಸ್ರೇಲ್‌ನಲ್ಲಿರುವ ತಾಣಗಳನ್ನು ಯಶಸ್ವಿಯಾಗಿ ಗುರಿಯಾಗಿಸಿಕೊಂಡಿದೆ” ಎಂದು ಶ್ಲಾಘಿಸಿದ್ದಾರೆ.

ಇಸ್ರೇಲ್‌ನ ಅತ್ಯಾಧುನಿಕ ರಕ್ಷಣಾ ವ್ಯವಸ್ಥೆಗಳು ವಿಫಲವಾಗಿವೆ ಮತ್ತು ದೇಶವು ಈ ಪ್ರದೇಶದ ಜನರಲ್ಲಿ ದೀರ್ಘಕಾಲದಿಂದ ಹೊತ್ತಿಸಿರುವ ಬೆಂಕಿಯಿಂದ ಅದು ಬಳಲುತ್ತದೆ ಎಂದು ಅಲ್-ರಿಷೇಕ್ ಅವರು ಹೇಳಿದ್ದಾರೆ ಎಂದು ಸ್ಥಳೀಯ ಪ್ಯಾಲೆಸ್ತೀನಿ ಸುದ್ದಿ ತಾಣಗಳು ತಿಳಿಸಿವೆ. “ಇರಾನ್‌ನ ಬಲವಾದ ಪ್ರತಿಕ್ರಿಯೆಯು ಇದನ್ನು ಸಾಬೀತುಪಡಿಸುತ್ತದೆ. ಇರಾನ್‌ನ ಕಾರ್ಯಾಚರಣೆಯು ಈ ಪ್ರದೇಶದಲ್ಲಿ ಇಸ್ರೇಲ್ ನಡೆಸುತ್ತಿರುವ ವರ್ಷಗಳ ಆಕ್ರಮಣದ ವಿರುದ್ಧದ ತೀವ್ರ ಮತ್ತು ನೇರ ಪ್ರತಿಕ್ರಿಯೆ” ಎಂದು ಅವರು ಹೇಳಿದ್ದಾರೆ.

ಇರಾನ್ ಇಸ್ರೇಲ್‌ನಾದ್ಯಂತ ಮಿಲಿಟರಿ ತಾಣಗಳನ್ನು ಗುರಿಯಾಗಿಸಿಕೊಂಡು ನೂರಾರು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಒಳಗೊಂಡ ದೊಡ್ಡ ಪ್ರಮಾಣದ ಪ್ರತೀಕಾರದ ದಾಳಿ ”ಆಪರೇಷನ್ ಟ್ರೂ ಪ್ರಾಮಿಸ್ III” ಅನ್ನು ಪ್ರಾರಂಭಿಸಿದ ನಂತರ ಹಮಾಸ್ ಈ ಹೇಳಿಕೆ ನೀಡಿದೆ.

ಇರಾನಿನ ಪ್ರತಿಕ್ರಿಯೆಯನ್ನು “ಕಾನೂನುಬದ್ಧ” ಎಂದು ಬಣ್ಣಿಸಿದ ಅಲ್-ರಿಷೇಕ್ ಅವರು, ಪ್ಯಾಲೆಸ್ತೀನ್‌ ಆಕ್ರಮಿತ ಪ್ರದೇಶಗಳಲ್ಲಿ ಮತ್ತು ಅದರಾಚೆ ನಡೆಸುತ್ತಿರುವ ತನ್ನ ನಿರಂತರ ಕೃತ್ಯಗಳಿಗೆ ಇಸ್ರೇಲ್ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

“ಇರಾನ್‌ನ ಈ ತೀವ್ರ ಪ್ರತಿಕ್ರಿಯೆಯು ಯಾವುದೇ ದುರಹಂಕಾರವನ್ನು ಪ್ರಶ್ನಿಸದೆ ಬಿಡುವುದಿಲ್ಲ ಮತ್ತು ಯಾವುದೇ ಆಕ್ರಮಣಕ್ಕೆ ಶಿಕ್ಷೆಯಿಲ್ಲದೆ ಇರುವುದಿಲ್ಲ ಎಂದು ಸಾಬೀತುಪಡಿಸುತ್ತದೆ” ಎಂದು ಅವರು ಹೇಳಿದ್ದಾರೆ.

ತಮ್ಮ ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳು ಒಳಬರುವ ಬಹುಪಾಲು ಸ್ಪೋಟಕಗಳನ್ನು ತಡೆದಿವೆ ಎಂದು ಇಸ್ರೇಲಿ ಅಧಿಕಾರಿಗಳು ಹೇಳಿಕೊಂಡಿದ್ದರೂ, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಇದನ್ನು ನಿರಾಕರಿಸಿದ್ದು, ತಮ್ಮ ಕ್ಷಿಪಣಿಗಳು ಹಲವಾರು ಸೇನಾ ಗುರಿಗಳನ್ನು ಯಶಸ್ವಿಯಾಗಿ ಹೊಡೆದುರುಳಿಸಿ ಬಹು-ಪದರದ ವಾಯು ರಕ್ಷಣಾ ಗುರಾಣಿಯನ್ನು ಭೇದಿಸಿದೆ ಎಂದು ಹೇಳಿದೆ.

ಇಸ್ರೇಲಿ ನೀತಿಗಳಿಗೆ ವಿರುದ್ಧವಾಗಿ ದೀರ್ಘಕಾಲದಿಂದ ಇರಾನ್‌ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿರುವ ಹಮಾಸ್, ಈ ಬಲಪ್ರದರ್ಶನವನ್ನು ಪ್ರಾದೇಶಿಕ ಅಧಿಕಾರ ಸಮತೋಲನದಲ್ಲಿ ಒಂದು ಮಹತ್ವದ ತಿರುವು ಎಂದು ಶ್ಲಾಘಿಸಿದೆ. ಇಸ್ರೇಲ್ ಮೇಲೆ ಇರಾನ್ ದಾಳಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಇರಾನ್‌ ಪ್ರತಿಕಾರ | ಇಸ್ರೇಲ್‌ನಾದ್ಯಂತ ಕ್ಷಿಪಣಿ ದಾಳಿ; 40 ಜನರಿಗೆ ಗಾಯ

ಇರಾನ್‌ ಪ್ರತಿಕಾರ | ಇಸ್ರೇಲ್‌ನಾದ್ಯಂತ ಕ್ಷಿಪಣಿ ದಾಳಿ; 40 ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...