Homeಮುಖಪುಟಮೂರು ದಿನಗಳ ಇರಾನ್-ಇಸ್ರೇಲ್ ಸಂಘರ್ಷ: 238 ಜನರು ಸಾವು, 1,500ಕ್ಕೂ ಹೆಚ್ಚು ಜನರಿಗೆ ಗಾಯ

ಮೂರು ದಿನಗಳ ಇರಾನ್-ಇಸ್ರೇಲ್ ಸಂಘರ್ಷ: 238 ಜನರು ಸಾವು, 1,500ಕ್ಕೂ ಹೆಚ್ಚು ಜನರಿಗೆ ಗಾಯ

- Advertisement -
- Advertisement -

ಜೂನ್ 13ರಂದು ಟೆಹ್ರಾನ್ ಮೇಲೆ ಇಸ್ರೇಲ್ ನಡೆಸಿದ ಬೃಹತ್ ಅನಿರೀಕ್ಷಿತ ದಾಳಿಯ ನಂತರ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಸತತ ಮೂರನೇ ದಿನವೂ ಮುಂದುವರಿದಿದೆ.

ಇಸ್ರೇಲ್ ನಡೆಸಿದ ಆರಂಭದ ದಾಳಿಯಲ್ಲಿ ಇರಾನ್‌ನ ಉನ್ನತ ಮಿಲಿಟರಿ ಅಧಿಕಾರಿಗಳು, ಹಿರಿಯ ವಿಜ್ಞಾನಿಗಳು ಮತ್ತು 20 ಮಕ್ಕಳು ಸೇರಿದಂತೆ 60ಕ್ಕೂ ಹೆಚ್ಚು ನಾಗರಿರು ಬಲಿಯಾಗಿದ್ದರು.

1. ಇರಾನ್‌ನಲ್ಲಿ 220 ದಾಟಿದ ಸಾವಿನ ಸಂಖ್ಯೆ : ಶನಿವಾರ ಇರಾನ್‌ನ ತೈಲ ಕೇಂದ್ರಗಳು ಮತ್ತು ಟೆಹ್ರಾನ್‌ನ ಜನವಸತಿ ಪ್ರದೇಶಗಳನ್ನು ಗುರಿಯಾಗಿಸಿ ಇಸ್ರೇಲ್ ನಡೆಸಿದ ದಾಳಿಯಲ್ಲಿ 70 ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸಾವಿನ ಸಂಖ್ಯೆ 224ಕ್ಕೆ ಏರಿಕೆಯಾಗಿದೆ. 1,200ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.

ಕೊಲ್ಲಲ್ಪಟ್ಟವರಲ್ಲಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ)ನ ಗುಪ್ತಚರ ಸಂಸ್ಥೆಯ ಮುಖ್ಯಸ್ಥ ಮೊಹಮ್ಮದ್ ಕಜೆಮಿ ಮತ್ತು ಇತರ ಇಬ್ಬರು ಜನರಲ್‌ಗಳು ಸೇರಿದ್ದಾರೆ.

2. ಇಸ್ರೇಲ್‌ನಲ್ಲಿ 14 ಜನರ ಸಾವು: ಇರಾನ್ ಕ್ಷಿಪಣಿ ದಾಳಿಯ ಮೂಲಕ ಇಸ್ರೇಲ್ ವಿರುದ್ದ ಪ್ರತೀಕಾರ ತೀರಿಸಿಕೊಂಡಿದ್ದು, ಕ್ಷಿಪಣಿಯು ಟೆಲ್ ಅವೀವ್‌ನ ಮಧ್ಯಭಾಗಕ್ಕೆ ಅಪ್ಪಳಿಸಿ ಜನವಸತಿ ಪ್ರದೇಶಗಳಲ್ಲಿ ಹಾನಿಯುಂಟು ಮಾಡಿದೆ. ಇದರಿಂದ 14 ಜನರು ಸಾವನ್ನಪ್ಪಿದ್ದಾರೆ ಮತ್ತು 390 ಜನರು ಗಾಯಗೊಂಡಿದ್ದಾರೆ.

3. ಇರಾನ್-ಯುಎಸ್ ಪರಮಾಣು ಮಾತುಕತೆ ರದ್ದು: ಇರಾನ್‌ನ ಪರಮಾಣು ಯೋಜನೆಯ ಭವಿಷ್ಯದ ಕುರಿತು ಅಮೆರಿಕ ಮತ್ತು ಇರಾನ್ ನಡುವಿನ ನಿಗದಿತ ಮಾತುಕತೆಗೆ ಕೆಲವು ದಿನಗಳ ಮೊದಲು ಇಸ್ರೇಲ್ ಇರಾನ್‌ ಮೇಲೆ ಅನಿರೀಕ್ಷಿತ ದಾಳಿ ನಡೆಸಿದೆ. ಮಧ್ಯಪ್ರಾಚ್ಯದ ಏಕೈಕ, ಆದರೆ ಅಘೋಷಿತ ಪರಮಾಣು ಶಸ್ತ್ರಸಜ್ಜಿತ ರಾಷ್ಟ್ರವಾದ ಇಸ್ರೇಲ್, ಇರಾನ್ ಪರಮಾಣು ಕಾರ್ಯಕ್ರಮವನ್ನು ಅಭಿವೃದ್ಧಿಪಡಿಸುವುದನ್ನು ತಡೆಯಲು ಪೂರ್ವಭಾವಿಯಾ ದಾಳಿ ನಡೆಸಲಾಗಿದೆ ಎಂದು ಹೇಳಿಕೊಂಡಿದೆ.

4. ಖಮೇನಿ ಹತ್ಯೆಯ ಇಸ್ರೇಲ್‌ ಯೋಜನೆಗೆ ಟ್ರಂಪ್ ತಡೆ: ಸಂಘರ್ಷದ ಮುಂದುವರಿದ ಭಾಗವಾಗಿ ಇರಾನ್‌ನ ಸಶಸ್ತ್ರ ಪಡೆಗಳ ಕಮಾಂಡರ್-ಇನ್-ಚೀಫ್ ಆಗಿ ಸೇವೆ ಸಲ್ಲಿಸುತ್ತಿರುವ ಮತ್ತು ಪ್ರಬಲ ಕ್ರಾಂತಿಕಾರಿ ಗಾರ್ಡ್ ಅನ್ನು ನಿಯಂತ್ರಿಸುತ್ತಿರುವ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯನ್ನು ಕೊಲ್ಲುವ ಇಸ್ರೇಲ್ ಯೋಜನೆಗೆ ಅಮೆರಿಕ ಅಧ್ಯಕ್ಷ ಟ್ರಂಪ್ ತಡೆಯೊಡ್ಡಿದ್ದಾರೆ ಎಂದು ಅಮೆರಿಕದ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಅಸೋಸಿಯೇಟೆಡ್ ಪ್ರೆಸ್‌ ವರದಿ ಮಾಡಿದೆ.

5. ಇರಾನ್-ಇಸ್ರೇಲ್ ನಡುವೆ ಕದನ ವಿರಾಮ ಒಪ್ಪಂದಕ್ಕೆ ಟ್ರಂಪ್ ಕರೆ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ಇರಾನ್ ಮತ್ತು ಇಸ್ರೇಲ್‌ಗೆ ಕದನ ವಿರಾಮ ‘ಒಪ್ಪಂದ ಮಾಡಿಕೊಳ್ಳಿ’ ಎಂದು ಕರೆ ನೀಡಿದ್ದಾರೆ. ಶಾಂತಿ ಮಾತುಕತೆಗೆ ಮಧ್ಯಸ್ಥಿತಿಕೆ ವಹಿಸಲು ಅಮೆರಿಕ ಸಿದ್ದ ಎಂದಿದ್ದಾರೆ.

ಇಸ್ಫಹಾನ್ ತೈಲ ಸಂಸ್ಕರಣಾಗಾರದ ಮೇಲಿನ ದಾಳಿ ವರದಿ ನಿರಾಕರಿಸಿದ ಇರಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...