ಡೆಹ್ರಾಡೂನ್: ನಿನ್ನೆ (ಜೂ.15) ಕೇದಾರನಾಥ ಬಳಿ ನಡೆದ ಹೆಲಿಕಾಪ್ಟರ್ ಅಪಘಾತಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ಆರೋಪದ ಮೇಲೆ ಹೆಲಿಕಾಪ್ಟರ್ ಸೇವಾ ನಿರ್ವಹಣಾ ಸಂಸ್ಥೆ ಆರ್ಯನ್ ಏವಿಯೇಷನ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಈ ದುರಂತದಲ್ಲಿ ಒಬ್ಬ ಪೈಲಟ್ ಮತ್ತು 2 ವರ್ಷದ ಮಗು ಸೇರಿದಂತೆ 7 ಜನ ಸಾವನ್ನಪ್ಪಿದ್ದರು. ಗೌರಿಕುಂಡ್ ಮತ್ತು ತ್ರಿಯುಗಿನಾರಾಯಣ ನಡುವಿನ ಗೌರಿ ಮಾಯ್ ಖಾರ್ಕ್ ಅರಣ್ಯದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಅಪಘಾತಕ್ಕೀಡಾದ ಈ ಹೆಲಿಕಾಪ್ಟರ್ ಆರ್ಯನ್ ಏವಿಯೇಷನ್ ಪ್ರೈವೇಟ್ ಲಿಮಿಟೆಡ್‌ಗೆ ಸೇರಿದೆ.
ಆರ್ಯನ್ ಏವಿಯೇಷನ್‌ನ ವ್ಯವಸ್ಥಾಪಕ ಕೌಶಿಕ್ ಪಾಠಕ್ ಮತ್ತು ವ್ಯವಸ್ಥಾಪಕ ವಿಕಾಸ್ ತೋಮರ್ ವಿರುದ್ಧ ಸೋನ್‌ಪ್ರಯಾಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಅಪಘಾತಕ್ಕೆ ಸಂಬಂಧಿಸಿ ಉತ್ತರಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. 407 ಹೆಲಿಕಾಪ್ಟರ್‌ನ ಆಪರೇಟರ್ ಆರ್ಯನ್ ಏವಿಯೇಷನ್‌ನ ಎಲ್ಲಾ ಚಾರ್ ಧಾಮ್ ಯಾತ್ರಾ ಕಾರ್ಯಾಚರಣೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಮತ್ತು “ಸೂಕ್ತವಲ್ಲದ ಹವಾಮಾನ ಪರಿಸ್ಥಿತಿಗಳಲ್ಲಿ” ಹಾರಾಟ ನಡೆಸಿದಕ್ಕಾಗಿ ಇಬ್ಬರು ಹೆಲಿಕಾಪ್ಟರ್ ಪೈಲಟ್‌ಗಳನ್ನು ಆರು ತಿಂಗಳ ಕಾಲ ಅಮಾನತುಗೊಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.


