Homeಕರ್ನಾಟಕಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಆಡಳಿತದಲ್ಲಿ ವಿಪರೀತ ಭ್ರಷ್ಟಾಚಾರ, ಶಾಸಕ ರಾಜೇಗೌಡ ವಿರುದ್ಧ ಪ್ರತಿಭಟನೆ; ಕೆ.ಎಲ್.ಅಶೋಕ್

ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಆಡಳಿತದಲ್ಲಿ ವಿಪರೀತ ಭ್ರಷ್ಟಾಚಾರ, ಶಾಸಕ ರಾಜೇಗೌಡ ವಿರುದ್ಧ ಪ್ರತಿಭಟನೆ; ಕೆ.ಎಲ್.ಅಶೋಕ್

- Advertisement -
- Advertisement -

ಚಿಕ್ಕಮಗಳೂರು: ಜಿಲ್ಲೆಯ ಮುತ್ತಿನಕೊಪ್ಪ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ‘ಡಾ.ಬಿ ಆರ್ ಅಂಬೇಡ್ಕರ್ ರವರ ಪ್ರತಿಮೆ ಸ್ಥಾಪಿಸಲು ಸ್ಥಳವಕಾಶಕ್ಕಾಗಿ ಅನುಮತಿ ಕೋರಿ ಆರು ತಿಂಗಳು ಕಳೆದರು ಸಂಬಂಧಿಸಿದ ಅಧಿಕಾರಿ ನಿರ್ಲಕ್ಷ್ಯವಹಿಸಿದ್ದಾರೆಂದು ಕರ್ನಾಟಕ ಜನಶಕ್ತಿ ರಾಜ್ಯ ಮುಖಂಡರಾದ ಕೆ.ಎಲ್.ಅಶೋಕ್ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿಯೂ ಅಂಬೇಡ್ಕರ್ ಪ್ರತಿಮೆಗೆ ಸಂಬಂಧಿಸಿದ ಸ್ಥಳವಕಾಶಕ್ಕೆ ನಿರ್ಲಕ್ಷ್ಯ ತೋರಿದೆ ಎಂದು ಅವರು ಹೇಳಿದ್ದಾರೆ.

ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದಲ್ಲಿ ಹಿರಿಯ ಮೇಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರಿಗೆ, ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸೂಕ್ತ ಸ್ಥಳವಕಾಶವನ್ನು ಗುರುತಿಸಿಕೊಟ್ಟು, ಸಂವಿಧಾನ ಶಿಲ್ಪಿ ‘ಡಾ ಬಿ ಆರ್ ಅಂಬೇಡ್ಕರ್”ರವರ ಗೌರವಾರ್ಥವಾಗಿ ಪ್ರತಿಮೆಯನ್ನು ಸ್ಥಾಪಿಸಲು ಸ್ಥಳವಕಾಶ ಮಾಡಿ ಕೊಡಿ ಎಂದು ಮನವಿ ಮಾಡಿ ಆರು ತಿಂಗಳು ಕಳೆದರು ಇಲ್ಲಿಯವರೆಗೂ ಜಾಗವನ್ನು ಗುರುತಿಸಲು ಅಧಿಕಾರಿಗಳು ನಿರ್ಲಕ್ಷಿಸಿದ್ದಾರೆ ಎಂದು ಕೆ.ಎಲ್.ಅಶೋಕ್ ಅವರು ಮಾಹಿತಿ ನೀಡಿದರು.

ಇಷ್ಟು ಮಾತ್ರವಲ್ಲದೇ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಆಡಳಿತದಲ್ಲಿ ವಿಪರೀತ ಭ್ರಷ್ಟಾಚಾರ ಕಂಡು ಬರುತ್ತಿದ್ದು, ಅಭಿವೃದ್ಧಿ ಮರೀಚಿಕೆಯಾಗಿದೆ. ಇದನ್ನು ವಿರೋಧಿಸಿ ಮುಂದಿನ ದಿನಗಳಲ್ಲಿ ಶಾಸಕ ಟಿ.ಡಿ.ರಾಜೇಗೌಡರ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಕೆ.ಎಲ್.ಆಶೋಕ್ ತಿಳಿಸಿದ್ದಾರೆ.

‘ಬಿಜೆಪಿಯ ಭ್ರಷ್ಟಾಚಾರ ನೋಡಿ ಜನ ಕಾಂಗ್ರೆಸ್‌ಗೆ ಅಧಿಕಾರ ನೀಡಿದ್ದಾರೆ. ಈಗ ಕಾಂಗ್ರೆಸ್ ಕೂಡ ಅದೇ ಹಾದಿಯಲ್ಲಿದೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಮುತ್ತಿನಕೊಪ್ಪದಲ್ಲಿ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸುವ ಉದ್ದೇಶದಿಂದ ಎಲ್ಲಾ ಮುಖಂಡರೊಂದಿಗೆ ಮಾತುಕತೆ ನಡೆಸಲಾಗಿತ್ತು. ಆದರೆ, ಶಾಸಕ ಟಿ.ಡಿ. ರಾಜೇಗೌಡ ಅದನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ. ಇದನ್ನು ವಿರೋಧಿಸಿ ಕಲ್ಕುಳಿ ವಿಠಲ ಹೆಗಡೆ ಸೇರಿದಂತೆ ಹಲವು ಜನರೊಂದಿಗೆ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದೆ’ ಎಂದರು.

ಕ್ಷೇತ್ರದಲ್ಲಿ ಶಾಸಕರು ಹಾಗೂ ಅವರ ಹಿಂಬಾಲಕರು ಎಲ್ಲರೂ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಹಾಗಲಗಂಚಿಗೆ ಸಂಪರ್ಕ ಕಲ್ಪಿಸುವ ರಸ್ತೆ ಡಾಂಬರೀಕರಣ ಮಾಡುವುದಾಗಿ ಆಶ್ವಾಸನೆ ನೀಡಿ, ಆರು ತಿಂಗಳು ಕಳೆದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ಈ ಕುರಿತು ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು, ವಿವಿಧ ಸಂಘಟನೆಗಳು, ಚುನಾಯಿತ ಪ್ರತಿನಿಧಿಗಳು, ನೌಕರ ಸಂಘದವರು ಹಾಗೂ ಇನ್ನಿತರರು ಸೇರಿ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದರು  ನಿರ್ಲಕ್ಷ್ಯವಹಿಸಿದ್ದಾರೆ ಎಂದು ಗ್ರಾಮದ ಕೃಷ್ಣ ಅವರು ಹೇಳಿದ್ದಾರೆ.

ಕೇದಾರನಾಥ ಹೆಲಿಕಾಪ್ಟರ್ ದುರಂತ: ಖಾಸಗಿ ಸಂಸ್ಥೆಯ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...