ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ತಾಲೂಕಿನ ಕತ್ತರಘಟ್ಟದಲ್ಲಿ ದಲಿತ ಯುವಕ ಜಯಕುಮಾರ್ ಅವರ ಆಪಾದಿತ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಪರವಾಗಿ ಹಾಕಿದ್ದ ಜಾಮಿನು ಅರ್ಜಿಯನ್ನು ಮಂಡ್ಯ ಕೋರ್ಟ್ ಸೋಮವಾರ ತಿರಸ್ಕರಿಸಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಎಎಸ್‌ಐ ಕುಮಾರ್ ಅವರನ್ನು ಜೂನ್ 5ದಂದು ಅಮಾನತು ಮಾಡಿತ್ತು. ಕೆ.ಆರ್.ಪೇಟೆ ದಲಿತ
ಆರೋಪಿ ಅನಿಲ್ ಕುಮಾರ್ ಜಾಮೀನು ಅರ್ಜಿಯ ವಿಚಾರಣೆ ಸಂದರ್ಭದಲ್ಲಿ, ಹಿರಿಯ ವಕೀಲರಾದ ಬಿ.ಟಿ. ವೆಂಕಟೇಶ್ ಸವಿಸ್ತಾರವಾಗಿ ವಾದ ಮಂಡಿಸಿ, ನ್ಯಾಯಾಧೀಶರು ಮತ್ತು ಎದುರಾಳಿ ವಕೀಲರುಗಳಿಗೆ ಜಯಕುಮಾರ್ ಅವರನ್ನು ಸುಟ್ಟು ಕೊಲೆ ಮಾಡಿದ್ದ ವಿಡಿಯೊ ತೋರಿಸಿದ್ದರು.
ಮಂಡ್ಯದ ಕತ್ತರಘಟ್ಟದಲ್ಲಿ ದಲಿತ ಯುವಕ ಜಯಕುಮಾರ್ ಅವರನ್ನು ಹುಲ್ಲಿನ ಮೆದೆಗೆ ದೂಡಿ ಸಜೀವವಾಗಿ ಸುಟ್ಟಿರುವ ಆರೋಪವಿದೆ. ಜಯಕುಮಾರ್ ಜಮೀನಿನಲ್ಲಿ ಕಳೆದ ಐದಾರು ವರ್ಷಗಳಿಂದ ಅಕ್ರಮವಾಗಿ ಹುಲ್ಲುಮೆದೆ ಹಾಕಿದ್ದಲ್ಲದೆ ಮಾನಸಿಕವಾಗಿ, ದೈಹಿಕವಾಗಿ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ, ಮೇ 16ರಂದು ಜಯಕುಮಾರ್ ಕೆ.ರ್.ಪೇಟೆ ಪೊಲೀಸ್ ಠಾಣೆಯಲ್ಲಿ ಅನಿಲ್ ಕುಮಾರ್ ಎಂಬಾತನ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ದೂರು ನೀಡಿದ್ದರು. ಮರುದಿನವೇ ಅವರನ್ನು ಅಮಾನುಷವಾಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ರೌಡಿಶೀಟರ್ ಹಾಗೂ ಪೋಕ್ಸೋ ಕಾಯ್ದೆಯಡಿ ಸೆರೆವಾಸ ಕಂಡಿದ್ದ ಅನಿಲ್ ಕುಮಾರ್ ಬಗ್ಗೆ ಅರಿವಿದ್ದ ಸ್ಥಳೀಯ ಪೊಲೀಸರು ಸಕಾಲಿಕ ಮುನ್ನೆಚರಿಕೆ ವಹಿಸದ ಕಾರಣ ಅಮಾಯಕ ದಲಿತನೊಬ್ಬನ ದಾರುಣ ಹತ್ಯೆ ನಡೆದಿದೆ ಎಂದು ದಲಿತ, ಜನಪರ, ಪ್ರಗತಿಪರ ಸಂಘಟನೆಗಳು ಆರೋಪ ಮಾಡಿವೆ. ಜಯಕುಮಾರ್ ಅವರ ಸಾವಿನ ನ್ಯಾಯಕ್ಕೆ ಆಗ್ರಹಿಸಿ ಮೇ 27ರಂದು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ‘ಕೆ.ಆರ್ ಪೇಟೆ’ ಚಲೋ ಕೂಡ ನಡೆದಿತ್ತು.
ಮೃತ ಜಯಕುಮಾರ್ ಅವರಿಗೆ ಜೀವ ಬೆದರಿಕೆ ಇದೆ ಎಂಬ ಮಾಹಿತಿಯನ್ನು ಗಂಭೀರವಾಗಿ ಪರಿಗಣಿಸಿ ಮೇಲಾಧಿಕಾರಿಗಳ ಗಮನಕ್ಕೆ ತರದೆ ನಿರ್ಲಕ್ಷ್ಯ ಮಾಡಿದ ಕಾರಣಕ್ಕೆ ಎಎಸ್‌ಐ ಕುಮಾರ್ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಎಎಸ್‌ಪಿ ತಿಮ್ಮಯ್ಯ ನಾನುಗೌರಿ.ಕಾಂಗೆ ತಿಳಿಸಿದ್ದರು.
ಅದಾಗ್ಯೂ, ಹೋರಾಟಗಾರರು ಕೆಲ ಹಂತದ ಅಧಿಕಾರಿಯ ಅಮಾನತ್ತಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಸರ್ಕಲ್ ಇನ್‌ಸ್ಟೆಕ್ಟರ್ ಆನಂದೆಗೌಡ, ಸಬ್ ಇನ್‌ಸ್ಟೆಕ್ಟರ್ ಸುಬ್ಬಯ್ಯ ಮತ್ತು ಡಿವೈಎಸ್‌ಪಿ ಚೆಲುವರಾಜು ಅವರನ್ನು ಅಮಾನತು ಮಾಡುವಂತೆ ಆಗ್ರಹಿಸುತ್ತಿದ್ದಾರೆ. ಕೆ.ಆರ್.ಪೇಟೆ ದಲಿತ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಬಂಟ್ವಾಳ | ಭೂ ಕುಸಿತದ ಭೀತಿಯಲ್ಲಿ ಕುಟುಂಬ; ಬಾಳ್ತಿಲ ಗ್ರಾಮ ಪಂಚಾಯತ್ ಅಧಿಕಾರಿಗಳಿಂದ ನಿರ್ಲಕ್ಷ್ಯ
ಬಂಟ್ವಾಳ | ಭೂ ಕುಸಿತದ ಭೀತಿಯಲ್ಲಿ ಕುಟುಂಬ; ಬಾಳ್ತಿಲ ಗ್ರಾಮ ಪಂಚಾಯತ್ ಅಧಿಕಾರಿಗಳಿಂದ ನಿರ್ಲಕ್ಷ್ಯ

