Homeಮುಖಪುಟಅಸ್ಸಾಂ | 600 ಕ್ಕೂ ಹೆಚ್ಚು ಮನೆಗಳನ್ನು ಕೆಡವಲು ಪ್ರಾರಂಭಿಸಿದ ಬಿಜೆಪಿ ಸರ್ಕಾರ

ಅಸ್ಸಾಂ | 600 ಕ್ಕೂ ಹೆಚ್ಚು ಮನೆಗಳನ್ನು ಕೆಡವಲು ಪ್ರಾರಂಭಿಸಿದ ಬಿಜೆಪಿ ಸರ್ಕಾರ

- Advertisement -
- Advertisement -

ರಾಜ್ಯದ ಗೋಲ್ಪಾರ ಜಿಲ್ಲೆಯಲ್ಲಿ 667 ಕ್ಕೂ ಹೆಚ್ಚು ಮನೆಗಳನ್ನು ನೆಲಸಮಗೊಳಿಸುವ ಕಾರ್ಯಾಚರಣೆಯನ್ನು ಅಸ್ಸಾಂನ ಬಿಜೆಪಿ ಸರ್ಕಾರ ಪ್ರಾರಂಭಿಸಿದ್ದು, ತೊಂದರೆಗೊಳಗಾದ ಹೆಚ್ಚಿನವರು ಬಂಗಾಳಿ ಮೂಲದ ಮುಸ್ಲಿಮರು ಎಂದು ಸ್ಕ್ರಾಲ್.ಇನ್ ವರದಿ ಮಾಡಿದೆ. ಅಸ್ಸಾಂ | 600 ಕ್ಕೂ

ಹಸಿಲಾ ಬೀಲ್ ಪ್ರದೇಶದಲ್ಲಿ ಅತಿಕ್ರಮಣ ಮಾಡಲಾಗಿದೆ ಎಂದು ಹೇಳಲಾದ ಭೂಮಿಯಲ್ಲಿರುವ 45% ಮನೆಗಳನ್ನು ಸೋಮವಾರ ನೆಲಸಮ ಮಾಡಲಾಗಿದೆ ಎಂದು ಗೋಲ್‌ಪಾರ ಜಿಲ್ಲಾ ಆಯುಕ್ತ ಖಾನೀಂದ್ರ ಚೌಧರಿ ಸ್ಕ್ರೋಲ್‌ಗೆ ತಿಳಿಸಿದ್ದಾರೆ.

ಉಳಿದ ಕಟ್ಟಡಗಳನ್ನು ತೆರವುಗೊಳಿಸಲು ಮಂಗಳವಾರವೂ ನೆಲಸಮ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ. “ಅತಿಕ್ರಮಣಕಾರಿಂದ ಯಾವುದೇ ಪ್ರತಿರೋಧ ಬಂದಿಲ್ಲ ಮತ್ತು ಇಲ್ಲಿಯವರೆಗೆ ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ” ಎಂದು ಅವರು ಹೇಳಿದ್ದಾರೆ.

ಜಿಲ್ಲಾಡಳಿತವು 2023 ಮತ್ತು 2024 ರಲ್ಲಿ “ಜೌಗು ಪ್ರದೇಶ”ವನ್ನು ಖಾಲಿ ಮಾಡುವಂತೆ ಸೂಚಿಸಿ ಗ್ರಾಮಸ್ಥರಿಗೆ ತೆರವು ನೋಟಿಸ್‌ಗಳನ್ನು ನೀಡಿತ್ತು ಎಂದು ಅವರು ಹೇಳಿಕೊಂಡಿದ್ದಾರೆ. “ನಾವು ಶುಕ್ರವಾರ ಮತ್ತೆ ಅವರಿಗೆ ನೋಟಿಸ್ ನೀಡಿದ್ದೇವೆ ಮತ್ತು ಸೋಮವಾರ ಬೆಳಿಗ್ಗೆ ಅವರ ಮನೆಗಳನ್ನು ತೆರವುಗೊಳಿಸಲು ಕೇಳಿಕೊಂಡಿದ್ದೇವೆ” ಎಂದು ಚೌಧರಿ ಹೇಳಿದ್ದಾರೆ ಎಂದು ಪಿಟಿಐ ಉಲ್ಲೇಖಿಸಿದೆ.

ಅನೇಕ ನಿವಾಸಿಗಳು ತಮ್ಮ ಸಾಮಗ್ರಿಗಳೊಂದಿಗೆ ಗ್ರಾಮವನ್ನು ತೊರೆದಿದ್ದು, ಉಳಿದ ಕುಟುಂಬಗಳು ಜಿಲ್ಲಾಡಳಿತವು ಅವರಿಗೆ ಪುನರ್ವಸತಿ ಕಲ್ಪಿಸಬೇಕೆಂದು ವಿನಂತಿಸಿದ್ದಾರೆ.

2016 ರ ವೇಳೆ ಅಸ್ಸಾಂನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ 10,620 ಕ್ಕೂ ಹೆಚ್ಚು ಕುಟುಂಬಗಳು – ಅವರಲ್ಲಿ ಹೆಚ್ಚಿನವರು ಮುಸ್ಲಿಮರು – ಸರ್ಕಾರಿ ಭೂಮಿಯಿಂದ ಹೊರಹಾಕಲ್ಪಟ್ಟಿದ್ದಾರೆ ಎಂದು ಆಗಸ್ಟ್‌ನಲ್ಲಿ ರಾಜ್ಯದ ಕಂದಾಯ ಮತ್ತು ವಿಪತ್ತು ನಿರ್ವಹಣಾ ಇಲಾಖೆ ಮಾಹಿತಿ ನೀಡಿದೆ.

ಸೆಪ್ಟೆಂಬರ್‌ನಲ್ಲಿ ಕೂಡಾ ಗೋಲ್‌ಪಾರ ಜಿಲ್ಲಾಡಳಿತವು ನೆಲಸಮ ಕಾರ್ಯಾಚರಣೆಯನ್ನು ನಡೆಸಿತ್ತು. ಈ ವೇಳೆ ಅಲ್ಲಿ 450 ಕುಟುಂಬಗಳು ಅಥವಾ ಸುಮಾರು 2,000 ಜನರನ್ನು ಹೊರಹಾಕಲಾಗಿತ್ತು. ಬಂದರ್‌ಮಾಥ ಮೀಸಲು ಅರಣ್ಯದ 55 ಹೆಕ್ಟೇರ್ ಪ್ರದೇಶವನ್ನು ಈ ಕುಟುಂಬಗಳು ಅಕ್ರಮವಾಗಿ ಆಕ್ರಮಿಸಿಕೊಂಡಿದ್ದವು ಎಂದು ಅಧಿಕಾರಿಗಳು ಆರೋಪಿಸಿದ್ದರು. ಹೈಕೋರ್ಟ್ ಆದೇಶದ ಪ್ರಕಾರ ಈ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿತ್ತು.

ಮೋರೆಗಾಂವ್‌ನಲ್ಲಿ ನಡೆದ ತೆರವು ಕಾರ್ಯಾಚರಣೆಯ ಸಂದರ್ಭದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಗುಂಡಿಕ್ಕಿ ಕೊಂದ ಎರಡು ವಾರಗಳೊಳಗೆ ಇದು ಸಂಭವಿಸಿತ್ತು.

ಸೆಪ್ಟೆಂಬರ್ 9 ರಂದು, ಜಿಲ್ಲಾಡಳಿತ ಸುಮಾರು 240 ಮನೆಗಳನ್ನು ಬುಲ್ಡೋಜರ್‌ನಿಂದ ಕೆಡವಿತು, ಅವರಲ್ಲಿ ಹೆಚ್ಚಿನವರು ಮೋರಿಗಾಂವ್ ಜಿಲ್ಲೆಯ ಬಂಗಾಳಿ ಮೂಲದ ಮುಸ್ಲಿಮರಾಗಿದ್ದರು. ಈ ನಿವಾಸಿಗಳು ಹಲವಾರು ದಶಕಗಳಿಂದ ಆ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನಿರ್ಮಿಸಿದ್ದರು.

ಅದಾಗಿ ಮೂರು ದಿನಗಳ ನಂತರ, ಸೆಪ್ಟೆಂಬರ್ 12 ರಂದು, ಅಧಿಕಾರಿಗಳು ಮತ್ತೆ ಬಂದು ಎರಡು ಗಂಟೆಗಳಲ್ಲಿ ಭೂಮಿಯನ್ನು ಖಾಲಿ ಮಾಡುವಂತೆ ಅವರಿಗೆ ಅಂತಿಮ ಎಚ್ಚರಿಕೆ ನೀಡಿದ್ದರು. ಇದರ ನಂತರ ನಿವಾಸಿಗಳು ಮತ್ತು ಅಧಿಕಾರಿಗಳ ನಡುವೆ ಹಿಂಸಾತ್ಮಕ ಘರ್ಷಣೆ ಭುಗಿಲೆದ್ದು ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಗುಂಡು ಹಾರಿಸಿದರು.

ಘರ್ಷಣೆಯಲ್ಲಿ 22 ಸರ್ಕಾರಿ ಮತ್ತು ಪೊಲೀಸ್ ಅಧಿಕಾರಿಗಳು ಸೇರಿದಂತೆ ಮೂವತ್ಮೂರು ಜನರು ಗಾಯಗೊಂಡಿದ್ದರು. ಅಸ್ಸಾಂ | 600 ಕ್ಕೂ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಂಗಾಳಿ ಭಾಷಿಕರನ್ನು ಬಾಂಗ್ಲಾದೇಶಿಗಳು ಎಂದು ಬಿಜೆಪಿ ಹಣೆಪಟ್ಟಿ ಕಟ್ಟುತ್ತಿದೆ: ಸಿಎಂ ಮಮತಾ

ಬಂಗಾಳಿ ಭಾಷಿಕರನ್ನು ಬಾಂಗ್ಲಾದೇಶಿಗಳು ಎಂದು ಬಿಜೆಪಿ ಹಣೆಪಟ್ಟಿ ಕಟ್ಟುತ್ತಿದೆ: ಸಿಎಂ ಮಮತಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...