Homeಮುಖಪುಟವಿಚಾರಣೆ ಇಲ್ಲದೆ 1,000 ದಿನ ಜೈಲಿನಲ್ಲಿ ಪಿಎಫ್‌ಐ ಮಾಜಿ ಅಧ್ಯಕ್ಷ ಅಬೂಬಕರ್: ಆರೋಗ್ಯದ ಬಗ್ಗೆ ಕುಟುಂಬದ...

ವಿಚಾರಣೆ ಇಲ್ಲದೆ 1,000 ದಿನ ಜೈಲಿನಲ್ಲಿ ಪಿಎಫ್‌ಐ ಮಾಜಿ ಅಧ್ಯಕ್ಷ ಅಬೂಬಕರ್: ಆರೋಗ್ಯದ ಬಗ್ಗೆ ಕುಟುಂಬದ ಕಳವಳ

- Advertisement -
- Advertisement -

ಹೊಸದಿಲ್ಲಿ: ಭಾರತ ಸರ್ಕಾರದಿಂದ ಈಗ ನಿಷೇಧಿಸಲ್ಪಟ್ಟಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯ ಸ್ಥಾಪಕ ಅಧ್ಯಕ್ಷ ಎರಾಪ್ಪಂಗಲ್ ಅಬೂಬಕರ್ ಅವರು ಯಾವುದೇ ವಿಚಾರಣೆ ಇಲ್ಲದೆ 1000 ದಿನಗಳನ್ನು ಜೈಲಿನಲ್ಲಿ ಕಳೆದಿದ್ದಾರೆ. ಅವರ ಕುಟುಂಬವು ಅವರ ಆರೋಗ್ಯ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ ಎಂದು ತೀವ್ರ ಆತಂಕ ವ್ಯಕ್ತಪಡಿಸಿದೆ.

ಅಬೂಬಕರ್ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) 2022ರ ಸೆ.22ರಂದು ಅವರ ಮನೆಯಿಂದ ಬಂಧಿಸಿತ್ತು. ಆ ಸಮಯದಲ್ಲಿ ಅವರು ಅನ್ನನಾಳದ ಕ್ಯಾನ್ಸರ್ ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಾ ವಿಶ್ರಾಂತಿಯಲ್ಲಿದ್ದರು. ಅಂದೇ, 10 ರಾಜ್ಯಗಳಲ್ಲಿ ಸುಮಾರು 100 ಪಿಎಫ್‌ಐ ಕಾರ್ಯಕರ್ತರನ್ನು ಬಂಧಿಸಲಾಗಿತ್ತು ಅಥವಾ ವಶಕ್ಕೆ ತೆಗೆದುಕೊಳ್ಳಲಾಗಿತ್ತು.

ನಂತರ, ಅದೇ ವರ್ಷ ಸೆಪ್ಟೆಂಬರ್ 28ರಂದು ಸರಕಾರವು ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳಾದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ, ರೆಹಬ್ ಇಂಡಿಯಾ ಫೌಂಡೇಶನ್, ಅಖಿಲ ಭಾರತ ಇಮಾಮ್ಸ್ ಕೌನ್ಸಿಲ್, ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್ಸ್, ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ಕೇರಳದ ರೆಹಬ್ ಫೌಂಡೇಶನ್‌ಗಳನ್ನು ನಿಷೇಧಿಸಿತು.

73 ವರ್ಷದ ಈ ಮುಸ್ಲಿಂ ನಾಯಕ ಪ್ರಸ್ತುತ ದೆಹಲಿಯ ತಿಹಾರ್ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿ ಉಳಿದಿದ್ದಾರೆ. ಅವರ ವಿರುದ್ಧದ ತನಿಖೆ ಇನ್ನೂ ಬಾಕಿಯಿದೆ. ದೆಹಲಿ ಹೈಕೋರ್ಟ್ ಮತ್ತು ಭಾರತದ ಸರ್ವೋಚ್ಚ ನ್ಯಾಯಾಲಯಗಳು ಈ ಹಿಂದೆ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿವೆ.

ಅವರಿಗೆ ಸೂಕ್ತವಾದ ಆಹಾರ ಲಭ್ಯವಿಲ್ಲದ ಕಾರಣ ದಿನದಿಂದ ದಿನಕ್ಕೆ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಅವರಿಗೆ ನೆನಪಿನ ಶಕ್ತಿಯೂ ಕಡಿಮೆಯಾಗುತ್ತಿದೆ ಎಂದು ಅಬೂಬಕರ್ ಅವರ ಪತ್ನಿ ಅಮಿನಾ ಅವರು ಮಕ್ತೂಬ್‌ಗೆ ನೀಡಿದ ಹೇಳಿಕೆಯಲ್ಲಿ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.

ಅಬೂಬಕರ್ ಅವರ ಆರೋಗ್ಯ ಸ್ಥಿತಿಯನ್ನು ವಿವರವಾಗಿ ಪರಿಶೀಲಿಸಲು ಏಮ್ಸ್‌ನ 10 ವೈದ್ಯರನ್ನೊಳಗೊಂಡ ವೈದ್ಯಕೀಯ ಮಂಡಳಿಯನ್ನು ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ರಚಿಸಲಾಗಿತ್ತು. ಆದರೆ, ಕೇಂದ್ರ ಸಂಸ್ಥೆಗಳ ಹಸ್ತಕ್ಷೇಪದಿಂದಾಗಿ ಅವರ ನಿಜವಾದ ಆರೋಗ್ಯ ಸ್ಥಿತಿಯನ್ನು ಮರೆಮಾಚಿ ವರದಿಯನ್ನು ಸಲ್ಲಿಸಲಾಗಿದೆ ಎಂದು ಕುಟುಂಬವು ಆರೋಪಿಸಿದೆ.

ಕೇಂದ್ರ ಸಂಸ್ಥೆಗಳ ಈ ಪ್ರಭಾವದಿಂದಲೇ ಸುಪ್ರೀಂ ಕೋರ್ಟ್ ನಮ್ಮ ಪತಿಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಇದೇ ಕಾರಣಕ್ಕೆ, ಈ ವೈದ್ಯಕೀಯ ಮಂಡಳಿಯ ವರದಿಯನ್ನು ನಾವು ಒಪ್ಪುವುದಿಲ್ಲ ಎಂದು ಅಬೂಬಕರ್ ಅವರ ಪತ್ನಿ ಜೈಲು ಅಧಿಕಾರಿಗಳಿಗೆ ಪತ್ರವನ್ನು ಬರೆದಿದ್ದಾರೆ. ಅಲ್ಲದೇ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವಂತೆ ಕೋರಿ ಕೆಳ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದಾರೆ.

2020ರಲ್ಲಿ ಅಬೂಬಕರ್ ಅವರಿಗೆ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ನಡೆದ ನಂತರ, ಅವರು ತಮ್ಮ ಕುಟುಂಬ ಸದಸ್ಯರ ತೀವ್ರ ಆರೈಕೆಯಲ್ಲಿ ಮನೆಯಲ್ಲೇ ಉಳಿದಿದ್ದರು.

ಪ್ರಸ್ತುತ, ಅವರು ಅಧಿಕ ರಕ್ತದೊತ್ತಡ, ಇಡಿಯೋಪಥಿಕ್ ಪಾರ್ಕಿನ್ಸನ್ ರೋಗ, ಕರೋನರಿ ಆರ್ಟರಿ ಡಿಸೀಸ್, ಅನ್ನನಾಳದ ಕ್ಯಾನ್ಸರ್‌ನ ಶಸ್ತ್ರಚಿಕಿತ್ಸೆ ನಂತರದ ಸ್ಥಿತಿ ಮತ್ತು ಹಾನಿಕರವಲ್ಲದ ಪ್ರಾಸ್ಟಾಟಿಕ್ ಹೈಪರ್ಪ್ಲಾಸಿಯಾದಂತಹ ವಿವಿಧ ಗಂಭೀರ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ಅವರ ಪತ್ನಿ ಮಾಹಿತಿ ಹೇಳಿದ್ದಾರೆ.

ಜೈಲಿನಲ್ಲಿಯೇ ಮರಣ ಹೊಂದಿದ ಫಾದರ್ ಸ್ಟಾನ್ ಸ್ವಾಮಿಯವರ ದುರಂತ ಪರಿಸ್ಥಿತಿ ನನ್ನ ಪತಿಗೂ ಬರಬಹುದು ಎಂದು ನಾವೆಲ್ಲರೂ ಭಯಪಡುತ್ತಿದ್ದೇವೆ. ಅವರ ಹದಗೆಟ್ಟ ಆರೋಗ್ಯ ಸ್ಥಿತಿ ಮತ್ತು ಮಾನವೀಯ ನೆಲೆಯ ಮೇಲೆ ಅವರಿಗೆ ಜಾಮೀನು ನೀಡುವುದು ಅತ್ಯಗತ್ಯವಾಗಿದೆ ಎಂದು ಅಮಿನಾ ಒತ್ತಾಯಿಸಿದ್ದಾರೆ.

ಏರ್‌ ಇಂಡಿಯಾ ಪತನ: ತಾನು ಬದುಕುಳಿದಿದ್ದು ಹೇಗೆಂದು ತಿಳಿಸಿದ ವಿಶ್ವಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...