Homeದಲಿತ್ ಫೈಲ್ಸ್'ನೀವು ಎಸ್‌ಸಿಯಾಗಿದ್ದರೆ ಅಲ್ಲಿಯೇ ನಿಂತುಕೊಳ್ಳಿ..'; ದಲಿತ ಸರಪಂಚ್‌ನನ್ನು ಸಾರ್ವಜನಿಕವಾಗಿ ಅಪಮಾನಿಸಿದ ಬಿಜೆಪಿ ಶಾಸಕ

‘ನೀವು ಎಸ್‌ಸಿಯಾಗಿದ್ದರೆ ಅಲ್ಲಿಯೇ ನಿಂತುಕೊಳ್ಳಿ..’; ದಲಿತ ಸರಪಂಚ್‌ನನ್ನು ಸಾರ್ವಜನಿಕವಾಗಿ ಅಪಮಾನಿಸಿದ ಬಿಜೆಪಿ ಶಾಸಕ

- Advertisement -
- Advertisement -

ಎನ್‌ಡಿಎ ಆಡಳಿತವಿರುವ ಆಂಧ್ರಪ್ರದೇಶ ಕರ್ನೂಲ್‌ನ ಅದೋನಿ ಕ್ಷೇತ್ರದಲ್ಲಿ ಬಿಜೆಪಿ ಶಾಸಕನೊಬ್ಬ ದಲಿತ ಸರಪಂಚ್‌ ಒಬ್ಬರನ್ನು ಸಾರ್ವಜನಿಕವಾಗಿ ಅಪಮಾನಿಸಿರುವ ವೀಡಿಯೊ ವೈರಲ್ ಆಗಿದೆ.

ಬಿಜೆಪಿ ಶಾಸಕರ ಈ ನಡೆಯು ಆಂಧ್ರಪ್ರದೇಶದಾದ್ಯಂತ ಆಕ್ರೋಶದ ಅಲೆಯನ್ನು ಹುಟ್ಟುಹಾಕಿದೆ. ಜೂನ್ 16 ರಂದು ನಡೆದಿರುವ ಈ ದೃಶ್ಯದಲ್ಲಿ, ಬಿಜೆಪಿ ಶಾಸಕ ಪಾರ್ಥಸಾರಥಿ ಸಾರ್ವಜನಿಕ ಸಭೆಯಲ್ಲಿ ದಲಿತ ಸರಪಂಚ್ ಒಬ್ಬರನ್ನು ಅವಮಾನಿಸಿದ್ದಾರೆ.

ವೇದಿಕೆಯಲ್ಲಿದ್ದ ಶಾಸಕರೊಂದಿಗೆ ವೇದಿಕೆ ಹಂಚಿಕೊಳ್ಳಲು ಸರಪಂಚ್ ಹಿಂಜರಿಯುತ್ತಿದ್ದಂತೆ, ಪಾರ್ಥಸಾರಥಿ ಅವರ ಜಾತಿ ಗುರುತಿನ ಬಗ್ಗೆ ಪ್ರಶ್ನಿಸಿದ್ದಾರೆ. ಸರಪಂಚ್ ಪರಿಶಿಷ್ಟ ಜಾತಿಗೆ ಸೇರಿದವರು ಎಂದು ತಿಳಿದ ನಂತರ, ಶಾಸಕರು ಅವರನ್ನು ವೇದಿಕೆಯ ಕೆಳಗೆ ಇರುವಂತೆ ಸೂಚಿಸುತ್ತಾರೆ.

ಈ ವಿಡಿಯೊ ಕ್ಲಿಪ್ ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಖಂಡನೆಗೆ ಗುರಿಯಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ, ಅದೋನಿ ಶಾಸಕ ಪಾರ್ಥಸಾರಥಿ ತಮ್ಮ ಕರ್ನೂಲ್ ಕ್ಷೇತ್ರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಿರುವುದು ಕಂಡುಬರುತ್ತದೆ. ಅವರು ಬಿಜೆಪಿಯ ಕೆಲಸಗಳನ್ನು ವಿವರಿಸಿದ್ದಾರೆ. ಕೇಂದ್ರ ಸರ್ಕಾರವು ಸರಪಂಚ್‌ಗಳಿಗೆ ಹಣವನ್ನು ವರ್ಗಾಯಿಸುತ್ತದೆ ಎಂದು ಹೇಳುತ್ತಾ, ಸ್ಥಳೀಯ ಸರಪಂಚ್ ಅವರನ್ನು ಕರೆದಿದ್ದಾರೆ.

“ಹೇ ಸರಪಂಚ್, ನೀವು ಬನ್ನಿ ಇಲ್ಲಿ, ನೀವು ಅಲ್ಲಿ ಏಕೆ ನಿಂತಿದ್ದೀರಿ” ಎಂದು ಶಾಸಕರು ಕೇಳುತ್ತಿರುವುದನ್ನು ಕಾಣಬಹುದು. ಸರಪಂಚ್ ಶಾಸಕರೊಂದಿಗೆ ವೇದಿಕೆಯಲ್ಲಿ ಸೇರಲು ಹಿಂಜರಿಯುತ್ತಿರುವುದನ್ನು ಗಮನಿಸಿದ ಅವರು, “ಅವರು ಕ್ರಿಶ್ಚಿಯನ್ನೇ?” ಎಂದು ಅವರು ತಮ್ಮ ಪಕ್ಕದಲ್ಲಿದ್ದ ಟಿಡಿಪಿ ಸದಸ್ಯರನ್ನು ಕೇಳಿದ್ದಾರೆ. “ಅವರು ಎಸ್‌ಸಿ, ಸರ್” ಎಂದು ಅವರು ಹಲವು ಬಾರಿ ಉತ್ತರಿಸಿದರು.

ಇದರ ನಂತರ, ಪಾರ್ಥಸಾರಥಿ ಮತ್ತು ಟಿಡಿಪಿ ನಾಯಕ ಇಬ್ಬರೂ ವೇದಿಕೆಯ ಕೆಳಭಾಗಕ್ಕೆ ನೋಡಿ, ಸರಪಂಚ್‌ಗೆ ಅಲ್ಲಿಯೇ ನಿಲ್ಲುವಂತೆ ಸೂಚಿಸುವುದನ್ನು ಕಾಣಬಹುದು. “ಸರಿ, ಹಾಗಾದರೆ ಇಲ್ಲಿಗೆ ಬಂದು ನಿಂತುಕೊಳ್ಳಿ” ಎಂದು ಸ್ವಲ್ಪಹೊತ್ತಿನ ಬಳಿಕ ಅವರು ಆದೇಶ ನೀಡಿದರು.

ಅಸ್ಪೃಶ್ಯತೆಯ ಆಚರಣೆ ಬಹಿರಂಗ ಪ್ರದರ್ಶನ

ಈ ವಿಡಿಯೋ ಆನ್‌ಲೈನ್‌ನಲ್ಲಿ ಹರಡುತ್ತಿದ್ದಂತೆ, ಹಲವಾರು ನಾಗರಿಕರಿಂದ ಟೀಕೆಗಳು ವ್ಯಕ್ತವಾಗಿವೆ. ಹೆಚ್ಚಿನವರು ಈ ಕೃತ್ಯವನ್ನು ಖಂಡಿಸಿ, ಇದನ್ನು ಅಸ್ಪೃಶ್ಯತೆಯ ಬಹಿರಂಗ ಪ್ರದರ್ಶನ ಎಂದು ಕರೆದಿದ್ದಾರೆ. ವೇದಿಕೆಯಲ್ಲಿರುವ ನಾಯಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕೆಂದು ಕೆಲವರು ಒತ್ತಾಯಿಸಿದರು.

“ಇದು ತುಂಬಾ ಮೂರ್ಖತನ. ಅಲ್ಲಿನ ಶಾಸಕರು ಇನ್ನೊಬ್ಬ ಮಹಿಳೆಗೆ ಎಚ್ಚರಿಕೆ ನೀಡಿ ಆ ವ್ಯಕ್ತಿಯನ್ನು ವೇದಿಕೆಗೆ ಕರೆಸಬೇಕಿತ್ತು. ಈಗ ಇದು ನಿಜವಾದ ಎಸ್‌ಸಿ-ಎಸ್‌ಟಿ ದೌರ್ಜನ್ಯ ಪ್ರಕರಣ. ಟಿಡಿಪಿ ಮತ್ತು ಬಿಜೆಪಿ ನಾಯಕರ ಈ ತಾರತಮ್ಯದ ಕೃತ್ಯದ ಮೇಲೆ ರಾಜ್ಯ ಸರ್ಕಾರ ಪ್ರಕರಣ ದಾಖಲಿಸಬಹುದೇ” ಎಂದು ಎಕ್ಸ್‌ ಬಳಕೆದಾರರೊಬ್ಬರು ಹೇಳಿದ್ದಾರೆ.

“ಒಬ್ಬ ಚುನಾಯಿತ ದಲಿತ ಸರಪಂಚ್‌ನನ್ನು ಶಾಸಕ ಪಾರ್ಥಸಾರಥಿ ಸಾರ್ವಜನಿಕವಾಗಿ ಅವಮಾನಿಸಿದ್ದಾರೆ; ಅದರೂ ಅವರ ಕಾರ್ಯಗಳಿಗಾಗಿ ಅಲ್ಲ, ಅವರ ಜಾತಿ ಕಾರಣಕ್ಕಾಗಿ. ಇದು ಮನು ಕಲ್ಪಿಸಿಕೊಂಡ ಭಾರತ. ಇದು ಮನು ಕನಸು ಕಂಡ ‘ವೈಭವದ’ ಭಾರತ. 2025 ರಲ್ಲಿಯೂ ಸಹ, ಜಾತಿವಾದ ಇನ್ನೂ ಅಭಿವೃದ್ಧಿ ಹೊಂದುತ್ತಿದೆ. ಹಲವರ ಮೌನವು ​​ವ್ಯವಸ್ಥಿತ ಮತ್ತು ನಾಚಿಕೆಗೇಡಿನ ಸಂಗತಿ. ನಾವು ಸ್ಮಾರ್ಟ್ ಸಿಟಿಗಳು ಮತ್ತು ಶಕ್ತಿಶಾಲಿ ರಾಕೆಟ್‌ಗಳನ್ನು ನಿರ್ಮಿಸಬಹುದು. ಆದರೆ, ನಾವು ಪ್ರತಿಯೊಬ್ಬ ಭಾರತೀಯನನ್ನು ಸಮಾನ ಘನತೆಯಿಂದ ನಡೆಸಿಕೊಳ್ಳಲು ಸಾಧ್ಯವಾಗದಿದ್ದರೆ, ಒಂದು ರಾಷ್ಟ್ರವಾಗಿ ವಿಫಲರಾಗುತ್ತಿದ್ದೇವೆ” ಎಂದು ನಾಗರಿಕ ಪತ್ರಕರ್ತ ಎಂದು ಹೇಳಿಕೊಳ್ಳುವ ವೀಣು ಕುಮಾರ್ ಎಂಬ ಮತ್ತೊಬ್ಬ ಬಳಕೆದಾರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕೆ.ಆರ್.ಪೇಟೆ ದಲಿತ ಯುವಕನ ಸಜೀವ ದಹನ ಪ್ರಕರಣ; ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ್ಯಾಯಾಂಗದ ವಿರುದ್ಧ ಟೀಕೆ ಆರೋಪ: ಸಿಜೆಪಿ ವಕ್ತಾರ ಸೌರವ್ ದಾಸ್ ವಿರುದ್ಧ ತನಿಖೆಗೆ ಮದ್ರಾಸ್ ಹೈಕೋರ್ಟ್‌ನಲ್ಲಿ ಪಿಐಎಲ್

ಚೆನ್ನೈ: ಭಾರತದ ನ್ಯಾಯಾಂಗ, ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್‌ನ ಇತರ ನ್ಯಾಯಮೂರ್ತಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್...

ಕರ್ನಾಟಕ ಎಸ್‌ಐಆರ್: 192 ಕ್ಷೇತ್ರಗಳಲ್ಲಿ ಗೆಲುವಿನ ಅಂತರಕ್ಕಿಂತ ಹೆಚ್ಚು ಮತಗಳು ಡಿಲೀಟ್; 2028ಕ್ಕೆ ಯಾರಿಗೆ ಅಧಿಕಾರ?

ಜನಪರ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ವಿರೋಧ, ಆತಂಕ ಹಾಗೂ ಆರೋಪಗಳ ಹೊರತಾಗಿಯೂ ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಗಿದಿದೆ. 2026ರ ಅಕ್ಟೋಬರ್ 27ರಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಅಂತಿಮ ಮತದಾರರ...

ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ಶಶಿಕುಮಾರ್‌ಗೆ ಕೊಕ್; ಚೇತನ್ ಸಿಂಗ್ ರಾಥೋಡ್‌ಗೆ ತನಿಖೆಯ ಹೊಣೆ

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೇತೃತ್ವದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಎಸ್‌ಐಟಿ ಮುಖ್ಯಸ್ಥರಾಗಿದ್ದ ಐಜಿಪಿ ಎನ್. ಶಶಿಕುಮಾರ್...

ಇಸ್ರೇಲ್ ಚುನಾವಣೆ: ನೆತನ್ಯಾಹು, ಐಸೆನ್‌ಕೋಟ್ ಬಣಗಳಿಗೆ ಬಹುಮತದ ಕೊರತೆ; ಸರ್ಕಾರ ರಚನೆಯಲ್ಲಿ ಅರಬ್ ಪಕ್ಷಗಳೇ ನಿರ್ಣಾಯಕ!

ಇಸ್ರೇಲ್‌ನ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಆಡಳಿತಾರೂಢ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಮಾಜಿ ಸೇನಾ ಮುಖ್ಯಸ್ಥ ಗಡಿ ಐಸೆನ್‌ಕೋಟ್ ನೇತೃತ್ವದ ವಿರೋಧ ಪಕ್ಷದ ಬಣಗಳೆರಡಕ್ಕೂ ಭಾರಿ ಸವಾಲು ತಂದೊಡ್ಡಿದೆ. 120 ಸದಸ್ಯ ಬಲದ...

ನ.1ರ ಇಂಡಿಯಾ ಒಕ್ಕೂಟದ ರ‍್ಯಾಲಿಗೆ ಬೆಂಬಲ ಘೋಷಿಸಿದ ‘ಪೀಪಲ್ ಅಗೆನ್ಸ್ಟ್ ಎಸ್‌ಐಆರ್’

ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಸಲಿರುವ ಬೃಹತ್ ರ‍್ಯಾಲಿಗೆ ಪೀಪಲ್ ಅಗೆನೆಸ್ಟ್ ಎಸ್‌ಐಆರ್‌ ಬೆಂಬಲ ಘೋಷಿಸಿದೆ. ಪ್ರಜಾಪ್ರಭುತ್ವವನ್ನು ಉಳಿಸಲು, ಎಸ್‌ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ...

‘ನುಸುಳುಕೋರರನ್ನು’ ಹೊರಹಾಕಲು SIR ಎಂದಿತ್ತು ಬಿಜೆಪಿ ಮತ್ತು ಚು. ಆಯೋಗ : ಆರು ರಾಜ್ಯಗಳಲ್ಲಿ ಪತ್ತೆಯಾಗಿದ್ದು ಕೇವಲ 1,600 ವಿದೇಶಿಯರು ಮಾತ್ರ

'ನುಸುಳುಕೋರರನ್ನು' ಪತ್ತೆ ಹಚ್ಚುವುದು ಅಥವಾ 'ವಿದೇಶಿ ಅಕ್ರಮ ವಲಸಿಗರನ್ನು' ಪತ್ತೆ ಹಚ್ಚುವುದು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಹೇಳಿತ್ತು....

ಸಂತ್ರಸ್ತೆ ಮತ್ತು ಆರೋಪಿ ನಡುವಿನ ‘ಒಪ್ಪಂದ’ವನ್ನಷ್ಟೇ ಆಧರಿಸಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಪಕ್ಷಕಾರರ (ಸಂತ್ರಸ್ತೆ ಮತ್ತು ಆರೋಪಿ) ನಡುವಿನ ರಾಜಿ ಸಂಧಾನದ ಆಧಾರದ ಮೇಲೆ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದ್ದ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕೇವಲ ಒಪ್ಪಂದದ ಆಧಾರದ ಮೇಲೆ ಗಂಭೀರ ಅಪರಾಧಗಳನ್ನು...

DELHI SIR : 2026ರ ಮತದಾರರ ಪಟ್ಟಿಯಲ್ಲಿದ್ದರೂ ಕೂಡ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸುವಂತೆ ಸೂಚಿಸಿದ್ದು ಏಕೆ? ಚು. ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಸಂಬಂಧಿಸಿದಂತೆ, 2026ರ ಮತದಾರರ ಪಟ್ಟಿಯಲ್ಲಿದ್ದರೂ ಸಹ ಗಣತಿ ನಮೂನೆಗಳನ್ನು (enumeration forms) ಭರ್ತಿ ಮಾಡದ ಕಾರಣಕ್ಕಾಗಿ ಕರಡು ಪಟ್ಟಿಯಿಂದ ಹೆಸರನ್ನು ಕಳೆದುಕೊಂಡಿರುವ ವ್ಯಕ್ತಿಗಳು,...

ಮರ್ಯಾದೆಗೇಡು ಹತ್ಯೆ ಶಂಕೆ: ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಪತ್ನಿಯ ಸಹೋದರ ಬಂಧನ

ಉತ್ತರ ಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನನ್ನು ಇಟ್ಟಿಗೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದು ಮರ್ಯಾದೆಗೇಡು ಹತ್ಯೆ ಶಂಕೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಪತ್ನಿಯ ಹಿರಿಯ...

Karnataka SIR | ಅಂತಿಮ ಮತದಾರರ ಪಟ್ಟಿಯನ್ನು ತಿರಸ್ಕರಿಸಿದ ಹೋರಾಟಗಾರರು : ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ಗೆ ಬಹಿರಂಗ ಸವಾಲು

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮಂಗಳವಾರ (ಅ.27) ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಹೋರಾಟಗಾರರು ತಿರಸ್ಕರಿಸಿದ್ದು, ಹೋರಾಟ ಮುಂದುವರಿಸುವ ಘೋಷಣೆ ಮಾಡಿದ್ದಾರೆ. ಬುಧವಾರ (ಅ.28) ಬೆಂಗಳೂರಿನ ಶಾಸಕರ ಭವನದಲ್ಲಿ...