ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ, ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ವಸತಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಆಡಿಯೋ ಕ್ಲಿಪ್ ಶುಕ್ರವಾರ ಬಹಿರಂಗಗೊಂಡಿದೆ. ಆಡಿಯೋ ಕ್ಲಿಪ್‌ನಲ್ಲಿ, ಶಾಸಕ ಪಾಟೀಲ್ ತಮ್ಮಲ್ಲಿರುವ ಮಾಹಿತಿಯನ್ನು ಬಹಿರಂಗಪಡಿಸಿದರೆ, ಕಾಂಗ್ರೆಸ್ ನೇತೃತ್ವದ ಸರ್ಕಾರದ ಅಡಿಪಾಯವೇ ಅಲುಗಾಡುತ್ತದೆ ಎಂದು ಹೇಳಿದ್ದಾರೆ. ವಸತಿ ಯೋಜನೆಯಲ್ಲಿ
ಆರೋಪಗಳ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ರಾಜ್ಯ ಬಿಜೆಪಿ ಒತ್ತಾಯಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ರಾಜೀನಾಮೆಯನ್ನು ಖಚಿತಪಡಿಸಿಕೊಳ್ಳುವಂತೆಯೂ ಒತ್ತಾಯಿಸಿದೆ.
ದೂರವಾಣಿ ಸಂಭಾಷಣೆಯ ಆಡಿಯೋ ಕ್ಲಿಪ್‌ನಲ್ಲಿ ಕಲಬುರಗಿ ಜಿಲ್ಲೆಯ ಆಳಂದ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕ ಪಾಟೀಲ್ ಮತ್ತು ಸಚಿವ ಜಮೀರ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಅವರೊಂದಿಗೆ ಮಾತನಾಡುತ್ತಿರುವುದು ಕೇಳಿಬಂದಿದೆ ಎಂದು ವರದಿಯಾಗಿದೆ. ತಮ್ಮ ಕ್ಷೇತ್ರದೊಳಗಿನ ಹಳ್ಳಿಗಳಲ್ಲಿ ಮನೆ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಲಂಚದ ಬಗ್ಗೆ ಪಾಟೀಲ್ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಾ, ಈ ಬಗ್ಗೆ ಕಾರ್ಯದರ್ಶಿಯನ್ನು ಪ್ರಶ್ನಿಸಿದ್ದಾರೆ.
“ಲಂಚ ನೀಡಿದವರಿಗೆ ಮಾತ್ರ ಮನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ. ನನ್ನ ಸ್ವಂತ ಸರ್ಕಾರದ ವಿರುದ್ಧ ಈ ದೂರು ನೀಡಲು ನನಗೆ ಬೇಸರವಾಗುತ್ತಿದೆ. ವಿವಿಧ ಗ್ರಾಮಗಳಲ್ಲಿ ಒಟ್ಟು 950 ಮನೆಗಳನ್ನು ಫಲಾನುಭವಿಗಳಿಂದ ಹಣ ಪಡೆದು ಹಂಚಿಕೆ ಮಾಡಲಾಗಿದೆ. ನನ್ನ ಶಿಫಾರಸು ಪತ್ರಗಳನ್ನು ನಿರ್ಲಕ್ಷಿಸಲಾಗುತ್ತಿದೆ. ಬದಲಾಗಿ, ಗ್ರಾಮ ಪಂಚಾಯತ್ ಅಧ್ಯಕ್ಷರು ಸಲ್ಲಿಸಿದ ಪಟ್ಟಿಗೆ ಆದ್ಯತೆ ನೀಡಲಾಗಿದೆ” ಎಂದು ಶಾಸಕ ಪಾಟೀಲ್ ಆಡಿಯೊದಲ್ಲಿ ಹೇಳಿದ್ದಾರೆ ಎಂದು ವರದಿಯಾಗಿದೆ.
Karnataka Congress MLA B.R. Patil drops a bombshell 🔥
He slams his own party, alleging that bribes decide who gets houses under the Rajiv Gandhi Housing Scheme..
Notably, he’s speaking in Hindi with peaceful community member🤲🏻😹pic.twitter.com/ZkZfPl0L2O
— Akshay Akki ಅಕ್ಷಯ್🇮🇳 (@FollowAkshay1) June 20, 2025
ಆಡಿಯೊದಲ್ಲಿ, ಜಮೀರ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಅವರು ಶಾಸಕ ಪಾಟೀಲ್ ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸುತ್ತಿದ್ದಾರೆ. ತಮ್ಮ ಫಲಾನುಭವಿಗಳ ಪಟ್ಟಿಯನ್ನು ಸಲ್ಲಿಸುವಂತೆ ಕೇಳಿದ್ದು, ಅವರಿಗೂ ಮನೆಗಳನ್ನು ಹಂಚಿಕೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಆಡಿಯೋ ಕ್ಲಿಪ್ ಬಿಡುಗಡೆಯಾದ ನಂತರ, ಶಾಸಕ ಪಾಟೀಲ್ ಯಾವುದೇ ಸಾರ್ವಜನಿಕ ಪ್ರತಿಕ್ರಿಯೆಯನ್ನು ನೀಡಿಲ್ಲ. ಕಾಂಗ್ರೆಸ್ ಪಕ್ಷದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ಈ ಮಧ್ಯೆ, ರಾಜ್ಯದ ಬಿಜೆಪಿ ಆಡಿಯೋ ಕ್ಲಿಪ್ ಬಗ್ಗೆ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರವನ್ನು ಬೆಂಬಲಿಸುತ್ತದೆ ಎಂದು ಹೇಳಿದೆ.
“ಕಾಂಗ್ರೆಸ್ ಸರ್ಕಾರದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ 1 ಆಗಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಕಾಂಗ್ರೆಸ್ ಶಾಸಕ ಶ್ರೀ ಬಸವರಾಜ ರಾಯರೆಡ್ಡಿ ಅವರು ನೀಡಿದ್ದ ಹೇಳಿಕೆಗೆ ಪುಷ್ಟಿ ನೀಡುವಂತೆ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರು ವಸತಿ ಸಚಿವ ಝಮೀರ್ ಅಹ್ಮದ್ ಅವರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.” ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
“ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 950 ಮನೆಗಳನ್ನು ಲಂಚ ಪಡೆದು ಹಂಚಿಕೆ ಮಾಡಲಾಗಿದೆ ಎಂದು ಆರೋಪ ಮಾಡಿರುವ ಶಾಸಕ ಬಿ.ಆರ್.ಪಾಟೀಲ್ ಅವರು ತಮ್ಮಲ್ಲಿರುವ ಭ್ರಷ್ಟಾಚಾರದ ಮಾಹಿತಿಯನ್ನು ಬಹಿರಂಗ ಪಡಿಸಿದರೆ ಸರ್ಕಾರವೇ ಅಲ್ಲಾಡುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಶಾಸಕ ಬಿ.ಆರ್. ಪಾಟೀಲ್ ಅವರು ವಸತಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಲಂಚಗುಳಿತನದ ಬಗ್ಗೆ ತಮಗಿರುವ ಮಾಹಿತಿಯನ್ನು ಬಹಿರಂಗ ಪಡಿಸಬೇಕು ಮತ್ತು ಲೋಕಾಯುಕ್ತಕ್ಕೆ ದೂರು ಸಲ್ಲಿಸಬೇಕು ಎಂದು ಆಗ್ರಹಿಸುತ್ತೇನೆ. ಅವರಿಗೆ ಈ ವಿಷಯದಲ್ಲಿ ರಾಜ್ಯ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ.” ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ = ಭ್ರಷ್ಟ ಸರ್ಕಾರ
ಕಾಂಗ್ರೆಸ್ ಸರ್ಕಾರದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ 1 ಆಗಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಕಾಂಗ್ರೆಸ್ ಶಾಸಕ ಶ್ರೀ ಬಸವರಾಜ ರಾಯರೆಡ್ಡಿ ಅವರು ನೀಡಿದ್ದ ಹೇಳಿಕೆಗೆ ಪುಷ್ಟಿ ನೀಡುವಂತೆ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರು ವಸತಿ ಸಚಿವ @BZZameerAhmedK ಅವರ ಮೇಲೆ ಗಂಭೀರ… pic.twitter.com/JriT3vkM6E
— R. Ashoka (@RAshokaBJP) June 20, 2025
“ಸ್ಪಪಕ್ಷದ ಶಾಸಕರೇ ಭ್ರಷ್ಟಾಚಾರದ ಆರೋಪ ಮಾಡುತ್ತಿರುವಾಗ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ತಮ್ಮ ಸ್ಥಾನದಲ್ಲಿ ಮುಂದುವರೆಯುವ ಯಾವ ನೈತಿಕತೆ ಉಳಿದಿದೆ? ಸಿಎಂ ಸಿದ್ದರಾಮಯ್ಯ ಅವರ. ಈ ಕೂಡಲೇ ಸಚಿವ ಜಮೀರ್ ಅಹ್ಮದ್ ಖಾನ್ ಅವರ ರಾಜೀನಾಮೆ ಪಡೆದು ಶಾಸಕ ಬಿ.ಆರ್.ಪಾಟೀಲ್ ಅವರ ಮೊಬೈಲ್ ಕರೆ ಆಡಿಯೋ ಆಧಾರದ ಮೇಲೆ ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶ ನೀಡಿ” ಎಂದು ಅಶೋಕ್ ಅವರು ಆಗ್ರಹಿಸಿದ್ದಾರೆ. ವಸತಿ ಯೋಜನೆಯಲ್ಲಿ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಮತದಾನದ ವೀಡಿಯೊ, ಫೋಟೋ ಸಂಗ್ರಹ ಸಮಯವನ್ನು 45 ದಿನಗಳಿಗೆ ಕಡಿತಗೊಳಿಸಿದ ಚುನಾವಣಾ ಆಯೋಗ
ಮತದಾನದ ವೀಡಿಯೊ, ಫೋಟೋ ಸಂಗ್ರಹ ಸಮಯವನ್ನು 45 ದಿನಗಳಿಗೆ ಕಡಿತಗೊಳಿಸಿದ ಚುನಾವಣಾ ಆಯೋಗ

