Homeಮುಖಪುಟಕಾರ್ಯಾಂಗ ಏಕಕಾಲದಲ್ಲಿ ನ್ಯಾಯಾಧೀಶ, ತೀರ್ಪುಗಾರ ಮತ್ತು ಶಿಕ್ಷೆ ಜಾರಿಗೊಳಿಸುವವರಾಗಲು ಅಸಾಧ್ಯ: ಬುಲ್ಡೋಜರ್ ನ್ಯಾಯ ಉಲ್ಲೇಖಿಸಿ ಸಿಜೆಐ...

ಕಾರ್ಯಾಂಗ ಏಕಕಾಲದಲ್ಲಿ ನ್ಯಾಯಾಧೀಶ, ತೀರ್ಪುಗಾರ ಮತ್ತು ಶಿಕ್ಷೆ ಜಾರಿಗೊಳಿಸುವವರಾಗಲು ಅಸಾಧ್ಯ: ಬುಲ್ಡೋಜರ್ ನ್ಯಾಯ ಉಲ್ಲೇಖಿಸಿ ಸಿಜೆಐ ಗವಾಯಿ ಹೇಳಿಕೆ

- Advertisement -
- Advertisement -

”ಬುಲ್ಡೋಜರ್ ನ್ಯಾಯ” ಎಂದು ಕರೆಯಲ್ಪಡುವ ನ್ಯಾಯವನ್ನು ಸುಪ್ರೀಂಕೋರ್ಟ್ ಕಾನೂನುಬಾಹಿರ ಎಂದು ಪರಿಗಣಿಸಿದೆ ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಬುಧವಾರ ಎತ್ತಿ ತೋರಿಸಿದ್ದು, “ಕಾರ್ಯಾಂಗವು ಏಕಕಾಲದಲ್ಲಿ ನ್ಯಾಯಾಧೀಶರು, ತೀರ್ಪುಗಾರರು ಮತ್ತು ಶಿಕ್ಷೆಯನ್ನು ಜಾರಿಗೊಳಿಸುವವರಾಗಲು ಸಾಧ್ಯವಿಲ್ಲ.” ಎಂದು ಅವರು ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಕಾರ್ಯಾಂಗ ಏಕಕಾಲದಲ್ಲಿ ನ್ಯಾಯಾಧೀಶ

ಇಟಲಿಯಲ್ಲಿ ನಡೆದ ನ್ಯಾಯಾಧೀಶರ ಸಭೆಯಲ್ಲಿ ಸಾಮಾಜಿಕ-ಆರ್ಥಿಕ ನ್ಯಾಯವನ್ನು ನೀಡುವಲ್ಲಿ ಸಂವಿಧಾನದ ಪಾತ್ರದ ಬಗ್ಗೆ ಮಾತನಾಡಿದ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರು, ಆಶ್ರಯ ಪಡೆಯುವ ಹಕ್ಕು ಮೂಲಭೂತ ಹಕ್ಕು ಎಂದು ಹೇಳಿದ್ದಾರೆ.

ಆರೋಪಿಗಳಿಗೆ ಶಿಕ್ಷೆ ನೀಡುವ ಕ್ರಮವಾಗಿ ಅವರ ಆಸ್ತಿಯನ್ನು ಕೆಡವುವ ಯಾವುದೇ ಅವಕಾಶ ಭಾರತೀಯ ಕಾನೂನಿನಲ್ಲಿ ಇಲ್ಲ. ಆದಾಗ್ಯೂ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಈ ಪದ್ಧತಿ ಸಾಮಾನ್ಯವಾಗಿದೆ. ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ಹಲವಾರು ಜನರ, ಅದರಲ್ಲೂ ಮುಖ್ಯವಾಗಿ ಮುಸ್ಲಿಮರ ಮನೆ ಮತ್ತು ಆಸ್ತಿಗಳನ್ನು ಕೆಡವುವ ಹಲವಾರು ಘಟನೆ ಇತ್ತೀಚೆಗೆ ನಡೆದಿದೆ.

ಪ್ರಕರಣಗಳಲ್ಲಿ ಆರೋಪ ಹೊತ್ತಿರುವ ವ್ಯಕ್ತಿಗಳ ಆಸ್ತಿಗಳನ್ನು ಕೆಡವುವ ಪದ್ಧತಿಯನ್ನು ಕಾನೂನುಬಾಹಿರ ಎಂದು ನವೆಂಬರ್‌ನಲ್ಲಿ ಸುಪ್ರೀಂಕೋರ್ಟ್ ಹೇಳಿದ್ದು, ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕುವ ಮೊದಲು ಪ್ರಕ್ರಿಯೆಗಳನ್ನು ಅನುಸರಿಸಬೇಕು ಎಂದು ತಿಳಿಸಿತ್ತು.

ಬುಧವಾರ ಈ ತೀರ್ಪನ್ನು ಉಲ್ಲೇಖಿಸಿದ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರು, “… ಕಾನೂನು ಪ್ರಕ್ರಿಯೆಗಳನ್ನು ಬೈಪಾಸ್ ಮಾಡುವ ಇಂತಹ ಅನಿಯಂತ್ರಿತ ಧ್ವಂಸಗಳು ಕಾನೂನಿನ ನಿಯಮ ಮತ್ತು ಆರ್ಟಿಕಲ್ 21 ರ ಅಡಿಯಲ್ಲಿ ಆಶ್ರಯ ಪಡೆಯುವ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ” ಎಂದು ಹೇಳಿದ್ದಾರೆ.

ಸಾಮಾನ್ಯ ನಾಗರಿಕರೊಬ್ಬರಿಗೆ ಮನೆ ಕಟ್ಟುವುದು ಎನ್ನುವುದು ವರ್ಷಗಳ ಕಾಲದ ಕಠಿಣ ಪರಿಶ್ರಮ, ಕನಸುಗಳ ಮತ್ತು ಆಕಾಂಕ್ಷೆಗಳ ಪರಾಕಾಷ್ಠೆಯಾಗಿದೆ ಎಂದು ಗವಾಯಿ ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. “ಮನೆ ಎಂದರೆ ಕೇವಲ ಆಸ್ತಿಯಲ್ಲ, ಅದು ಸ್ಥಿರತೆ, ಭದ್ರತೆ ಮತ್ತು ಭವಿಷ್ಯಕ್ಕಾಗಿ ಕುಟುಂಬ ಅಥವಾ ವ್ಯಕ್ತಿಗಳ ಸಾಮೂಹಿಕ ಭರವಸೆಯನ್ನು ಸಾಕಾರಗೊಳಿಸುತ್ತದೆ” ಎಂದು ಮುಖ್ಯ ನ್ಯಾಯಾಮೂರ್ತಿ ಹೇಳಿದ್ದಾರೆ.  ಕಾರ್ಯಾಂಗ ಏಕಕಾಲದಲ್ಲಿ ನ್ಯಾಯಾಧೀಶ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಸತಿ ಯೋಜನೆಯಲ್ಲಿ ಭಾರಿ ಲಂಚದ ಆರೋಪ ಮಾಡಿರುವ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್; ಆಡಿಯೋ ವೈರಲ್

ವಸತಿ ಯೋಜನೆಯಲ್ಲಿ ಭಾರಿ ಲಂಚದ ಆರೋಪ ಮಾಡಿರುವ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್; ಆಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೇಸಿಗೆ ಎದುರಿಸಲು ಸಿದ್ಧತೆ: ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಮಿನಿ ವಾಟರ್ ಟ್ಯಾಂಕ್‌ ಸ್ಥಾಪನೆಗೆ ಮುಂದಾದ ಬಿಡಬ್ಲ್ಯೂಎಸ್ಎಸ್ಬಿ

ಬೆಂಗಳೂರು: ಬೇಸಿಗೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ನಗರದ ನಿರ್ದಿಷ್ಟ ಪ್ರದೇಶಗಳಲ್ಲಿ ನೀರಿನ ಬೇಡಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ಸಂಭಾವ್ಯ ಕೊರತೆಯನ್ನು ನೀಗಿಸಲು ಸಿದ್ಧತೆಗಳನ್ನು ಹೆಚ್ಚಿಸಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...

ಸೋನಮ್ ವಾಂಗ್‌ಚುಕ್ ಆರೋಗ್ಯವಾಗಿದ್ದಾರೆ, ವೈದ್ಯಕೀಯ ಕಾರಣಕ್ಕೆ ಬಿಡುಗಡೆ ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರನ್ನು ವೈದ್ಯಕೀಯ ಆಧಾರದ ಮೇಲೆ ಬಂಧನದಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ (ಫೆ.11) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. "ವೈದ್ಯಕೀಯ ಆಧಾರದಲ್ಲಿ ಸೋನಮ್ ವಾಂಗ್‌ಚುಕ್ ಅವರ...

ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ಗುಂಡಿನ ದಾಳಿ; ಶಂಕಿತನ ಸೇರಿದಂತೆ 10 ಜನರು ಸಾವು

ಬ್ರಿಟಿಷ್ ಕೊಲಂಬಿಯಾದಲ್ಲಿ ಮಂಗಳವಾರ ನಡೆದ ಗುಂಡಿನ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಕೆನಡಾದ ಅಧಿಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಶಂಕಿತ ಬಂದೂಕುಧಾರಿ ಮಹಿಳೆಯೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲೆಯ ಹತ್ತಿರದ ನಿವಾಸದಲ್ಲಿ...

‘ನನ್ನ ಗಡ್ಡ ಎಳೆದು ಟೋಪಿ ಕಿತ್ತೆಸೆದರು..’; ಶಿರಡಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮುಸ್ಲಿಂ ಪ್ರಯಾಣಿಕನ ಮೇಲೆ ಗುಂಪುದಾಳಿ

ಮನ್ಮಾಡ್ ಕಾಕಿನಾಡ ಶಿರಡಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸುಮಾರು 20 ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಫೀಜ್‌ಪೇಟೆ ರೈಲು ನಿಲ್ದಾಣದ ಬಳಿ ಘಟನೆ ನಡೆದಿದ್ದು, ಮೊಹಮ್ಮದ್...

ಪ್ರಧಾನಿ ಮೋದಿ ಕುರಿತ ‘ದಿ ವೈರ್’ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

ಸುದ್ದಿ ಸಂಸ್ಥೆ 'ದಿ ವೈರ್' ಪೋಸ್ಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ವಿಡಂಬನಾತ್ಮಕ ಅನಿಮೇಷನ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ನಿರ್ಬಂಧಿಸಿವೆ. ಸೋಮವಾರ (ಫೆ.10) ಸಂಜೆ ಸುಮಾರು ಎರಡು...

‘ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ?’; ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದೊಂದಿಗೆ ಇತ್ತೀಚೆಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಲೋಕಸಭೆಯಲ್ಲಿ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ತೀವ್ರ ದಾಳಿ ಮಾಡಿದ...

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...