Homeಮುಖಪುಟಬಿಹಾರ ಚುನಾವಣೆಗೂ ಮುನ್ನ ಸಾಮಾಜಿಕ ಭದ್ರತಾ ಪಿಂಚಣಿಯನ್ನು 1,100 ರೂ.ಗೆ ಹೆಚ್ಚಿಸಿದ ಸಿಎಂ ನಿತೀಶ್ ಕುಮಾರ್!

ಬಿಹಾರ ಚುನಾವಣೆಗೂ ಮುನ್ನ ಸಾಮಾಜಿಕ ಭದ್ರತಾ ಪಿಂಚಣಿಯನ್ನು 1,100 ರೂ.ಗೆ ಹೆಚ್ಚಿಸಿದ ಸಿಎಂ ನಿತೀಶ್ ಕುಮಾರ್!

- Advertisement -
- Advertisement -

ರಾಜ್ಯದ ವೃದ್ಧರು, ಅಂಗವಿಕಲರು ಮತ್ತು ವಿಧವೆಯರಿಗೆ ನೀಡಲಾಗುತ್ತಿದ್ದ ಮಾಸಿಕ ಸಾಮಾಜಿಕ ಭದ್ರತಾ ಪಿಂಚಣಿಯನ್ನು ಜುಲೈನಿಂದ 400 ರೂ.ಗಳಿಂದ 1,100 ರೂ.ಗಳಿಗೆ ಹೆಚ್ಚಿಸುವುದಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ಘೋಷಿಸಿದ್ದಾರೆ. ಬಿಹಾರ ಚುನಾವಣೆಗೂ

ಈ ಪಿಂಚಣಿಯಿಂದ ರಾಜ್ಯದ 1.09 ಕೋಟಿಗೂ ಹೆಚ್ಚು ಜನರಿಗೆ ಪ್ರಯೋಜನವಾಗಲಿದೆ ಎಂದು ಮುಖ್ಯಮಂತ್ರಿ ಹೇಳಿದ್ದು, ಪ್ರತಿ ತಿಂಗಳ 10ನೇ ತಾರೀಖಿನೊಳಗೆ ಎಲ್ಲಾ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಈ ಮೊತ್ತವನ್ನು ಜಮಾ ಮಾಡಲಾಗುವುದು ಎಂದು ಹೇಳಿದ್ದಾರೆ.

“ವೃದ್ಧರು ಸಮಾಜದ ಅಮೂಲ್ಯ ಭಾಗವಾಗಿದ್ದು, ಅವರ ಗೌರವಾನ್ವಿತ ಜೀವನವನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ. ರಾಜ್ಯ ಸರ್ಕಾರ ಈ ದಿಕ್ಕಿನಲ್ಲಿ ಪ್ರಯತ್ನಗಳನ್ನು ಮುಂದುವರಿಸುತ್ತದೆ.” ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

ಬಿಹಾರದಲ್ಲಿ ವಿಧಾನಸಭಾ ಚುನಾವಣೆಗಳು ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ನಡೆಯುವ ನಿರೀಕ್ಷೆಯಿದೆ. ಸಿಎಂ ನಿತೀಶ್ ಕುಮಾರ್ ಅವರ ಜನತಾದಳ (ಯುನೈಟೆಡ್) ಬಿಹಾರದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ.

2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಸಿಗದ ಕಾರಣ ಪಕ್ಷವೂ ಜನತಾದಳ (ಯುನೈಟೆಡ್) ಮತ್ತು ಅದರ ಎನ್‌ಡಿಎ ಮೈತ್ರಿಯ ಇತರ ಪಕ್ಷಗಳ ಸಹಾಯದಿಂದ ಕೇಂದ್ರದಲ್ಲಿ ಸರ್ಕಾರ ರಚಿಸಿತ್ತು. ಬಿಹಾರ ಮೂಲದ ಲೋಕ ಜನಶಕ್ತಿ ಪಕ್ಷದ ಚಿರಾಗ್ ಪಾಸ್ವಾನ್ ನೇತೃತ್ವದ ಪಕ್ಷ ಕೂಡಾ ಕೇಂದ್ರದಲ್ಲಿ ಎನ್‌ಡಿಎ ಸರ್ಕಾರದ ಭಾಗವಾಗಿದೆ.

ವಿರೋಧ ಪಕ್ಷದ ನಾಯಕ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಮಾರ್ಚ್‌ನಲ್ಲಿ ಮಾಯ್-ಬಹಿನ್ ಸಮ್ಮಾನ್ ಯೋಜನೆಯಡಿ ಮಾಸಿಕ ಪಿಂಚಣಿಯನ್ನು 1,500 ರೂ.ಗೆ ಹೆಚ್ಚಿಸುವುದಾಗಿ ಪ್ರತಿಜ್ಞೆ ಮಾಡಿದ್ದರು. ಅದಾಗಿ ತಿಂಗಳುಗಳ ನಂತರ ಶನಿವಾರ ಮುಖ್ಯಮಂತ್ರಿ ಈ ಘೋಷಣೆ ಮಾಡಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ತಮ್ಮ ಪಕ್ಷವೂ ಅಧಿಕಾರಕ್ಕೆ ಬಂದರೆ 500 ರೂ.ಗೆ ಗ್ಯಾಸ್ ಸಿಲಿಂಡರ್‌ಗಳನ್ನು ನೀಡುವುದಾಗಿ ಮತ್ತು 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಅವರು ಜನರಿಗೆ ಭರವಸೆ ನೀಡಿದ್ದರು. ಬಿಹಾರ ಚುನಾವಣೆಗೂ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಾಝಾ, ಇರಾನ್ ವಿಷಯದಲ್ಲಿ ಭಾರತದ ಮೌನವು ಕಳವಳಕಾರಿಯಾಗಿದೆ: ಸೋನಿಯಾ ಗಾಂಧಿ

ಗಾಝಾ, ಇರಾನ್ ವಿಷಯದಲ್ಲಿ ಭಾರತದ ಮೌನವು ಕಳವಳಕಾರಿಯಾಗಿದೆ: ಸೋನಿಯಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...