ಬೆಂಗಳೂರು, ಧಾರವಾಡ ಮತ್ತು ಕಲಬುರಗಿಯಲ್ಲಿರುವ ಹೈಕೋರ್ಟ್ ಪೀಠಗಳ ಎಲ್ಲಾ ನ್ಯಾಯಾಲಯ ಸಭಾಂಗಣಗಳಲ್ಲಿ ಹಾಗೂ ರಾಜ್ಯದಾದ್ಯಂತ ಜಿಲ್ಲಾ ನ್ಯಾಯಾಲಯಗಳಲ್ಲಿರುವ ಎಲ್ಲಾ ನ್ಯಾಯಾಲಯ ಸಭಾಂಗಣಗಳಲ್ಲಿ ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ಅಳವಡಿಸುವಂತೆ ಕರ್ನಾಟಕ ಹೈಕೋರ್ಟ್ ತಿಳಿಸಿದೆ ಎಂದು ಬಾರ್ ಆಂಡ್ ಬೆಂಚ್ ಶನಿವಾರ ವರದಿ ಮಾಡಿದೆ. ಹೈಕೋರ್ಟ್ & ಜಿಲ್ಲಾ ನ್ಯಾಯಾಲಯಗಳ
ಸಾರ್ವಜನಿಕರು, ವಕೀಲರು, ವಿವಿಧ ವೇದಿಕೆಗಳು ಮತ್ತು ಸಂಘಟನೆಗಳು ಹಾಗೂ ಸರ್ಕಾರಿ ಸಂವಹನದ ಕೋರಿಕೆಯ ಮೇರೆಗೆ ಜೂನ್ 19 ರಂದು ಈ ಕುರಿತು ಎರಡು ಸುತ್ತೋಲೆಗಳನ್ನು ಹೊರಡಿಸಲಾಗಿದೆ ಎಂದು ವರದಿ ಉಲ್ಲೇಖಿಸಿದೆ.
ಇದಕ್ಕೂ ಮೊದಲು, ಏಪ್ರಿಲ್ 26 ರಂದು ಹೈಕೋರ್ಟ್‌ನ ಪೂರ್ಣ ನ್ಯಾಯಾಲಯವು ಡಾ. ಅಂಬೇಡ್ಕರ್ ಅವರ ಛಾಯಾಚಿತ್ರವನ್ನು ಎಲ್ಲಾ ನ್ಯಾಯಾಲಯ ಸಭಾಂಗಣಗಳಲ್ಲಿ ಪ್ರಮುಖ ಸ್ಥಳದಲ್ಲಿ ಪ್ರದರ್ಶಿಸಲು ನಿರ್ಧರಿಸುವ ನಿರ್ಣಯವನ್ನು ಅಂಗೀಕರಿಸಿತ್ತು.
ಪರಿಣಾಮವಾಗಿ, ಹೈಕೋರ್ಟ್‌ನ ಹೆಚ್ಚುವರಿ ರಿಜಿಸ್ಟ್ರಾರ್ಸ್ ಜನರಲ್‌ಗೆ ಬೆಂಗಳೂರು, ಧಾರವಾಡ ಮತ್ತು ಕಲಬುರಗಿ ಪೀಠಗಳಲ್ಲಿರುವ ಹೈಕೋರ್ಟ್‌ನ ಎಲ್ಲಾ ನ್ಯಾಯಾಲಯ ಸಭಾಂಗಣಗಳಲ್ಲಿ ಡಾ. ಅಂಬೇಡ್ಕರ್ ಅವರ ಛಾಯಾಚಿತ್ರ/ಭಾವಚಿತ್ರವನ್ನು ಪ್ರದರ್ಶಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶಿಸಲಾಯಿತು.
ಕರ್ನಾಟಕದಾದ್ಯಂತ ಜಿಲ್ಲಾ ನ್ಯಾಯಾಲಯಗಳಲ್ಲಿರುವ ನ್ಯಾಯಾಲಯ ಸಭಾಂಗಣಗಳಿಗೆ ಸಂಬಂಧಿಸಿದಂತೆ ಇದೇ ರೀತಿಯ ಸೂಚನೆಗಳನ್ನು ನೀಡಲಾಯಿತು.
“ರಾಜ್ಯದ ಜಿಲ್ಲಾ ನ್ಯಾಯಾಂಗದ ಎಲ್ಲಾ ನ್ಯಾಯಾಲಯದ ಸಭಾಂಗಣಗಳಲ್ಲಿ ಪ್ರಮುಖವಾದ ಸೂಕ್ತ ಸ್ಥಳದಲ್ಲಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಛಾಯಾಚಿತ್ರ/ಭಾವಚಿತ್ರವನ್ನು ಪ್ರದರ್ಶಿಸಲು ಈ ಮೂಲಕ ನಿರ್ದೇಶಿಸಲಾಗಿದೆ” ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಹೈಕೋರ್ಟ್ & ಜಿಲ್ಲಾ ನ್ಯಾಯಾಲಯಗಳ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಚನ್ನರಾಯಪಟ್ಟಣ ರೈತ ಹೋರಾಟ ಬೆಂಬಲಿಸಿ ಸಾಹಿತಿ, ಚಿಂತಕರಿಂದ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ
ಚನ್ನರಾಯಪಟ್ಟಣ ರೈತ ಹೋರಾಟ ಬೆಂಬಲಿಸಿ ಸಾಹಿತಿ, ಚಿಂತಕರಿಂದ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ

