ಭಾರತೀಯ ಚುನಾವಣಾ ಆಯೋಗ ಉತ್ತರ ನೀಡುವ ಬದಲು ಸಾಕ್ಷ್ಯಗಳನ್ನು ನಾಶಪಡಿಸುತ್ತಿದೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಫಲಿತಾಂಶ ಪ್ರಕಟವಾದ 45 ದಿನಗಳ ನಂತರ ಚುನಾವಣಾ ಪ್ರಕ್ರಿಯೆಯ ಸಿಸಿಟಿವಿ, ವೆಬ್‌ಕಾಸ್ಟಿಂಗ್ ಮತ್ತು ವಿಡಿಯೋ ತುಣುಕನ್ನು ನಾಶಪಡಿಸುವಂತೆ ಚುನಾವಣಾ ಸಂಸ್ಥೆ ತನ್ನ ರಾಜ್ಯ ಅಧಿಕಾರಿಗಳಿಗೆ ಸೂಚಿಸಿದ ನಂತರ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಫೋಸ್ಟ್ ಹಾಕಿರುವ ರಾಹುಲ್ ಗಾಂಧಿ ಚುನಾವಣಾ ಆಯೋಗದ ನಡೆಯನ್ನು ಟೀಕಿಸಿದ್ದು, “ಇದು ಪ್ರಜಾಪ್ರಭುತ್ವದ ಹೊಣೆಗಾರಿಕೆಯನ್ನು ದುರ್ಬಲಗೊಳಿಸುತ್ತದೆ” ಎಂದಿದ್ದಾರೆ.
“ಮತದಾರರ ಪಟ್ಟಿ? ಯಂತ್ರ ಓದಬಹುದಾದ ಸ್ವರೂಪ ನೀಡುವುದಿಲ್ಲ. ಸಿಸಿಟಿವಿ ದೃಶ್ಯಾವಳಿ? ಕಾನೂನು ಬದಲಿಸಿ ಮರೆಮಾಡಲಾಗಿದೆ. ಚುನಾವಣಾ ಫೋಟೋಗಳು ಮತ್ತು ವೀಡಿಯೊಗಳು? ಈಗ 1 ವರ್ಷ ಅಲ್ಲ, ಬದಲಾಗಿ ಅವುಗಳನ್ನು 45 ದಿನಗಳಲ್ಲಿ ಡಿಲೀಟ್ ಮಾಡಲಾಗುತ್ತಿದೆ. ಉತ್ತರಗಳನ್ನು ನೀಡಬೇಕಾದವರು ಸಾಕ್ಷ್ಯಗಳನ್ನು ನಾಶಪಡಿಸುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ಬರೆದುಕೊಂಡಿದ್ದಾರೆ.
“ಇದು ‘ಮ್ಯಾಚ್ ಫಿಕ್ಸಿಂಗ್’ ಆಗಿದೆ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಫಿಕ್ಸಿಂಗ್ ಚುನಾವಣೆಯು ಪ್ರಜಾಪ್ರಭುತ್ವಕ್ಕೆ ವಿಷವಾಗಿದೆ. ಚುನಾವಣಾ ಕ್ರಮಗಳು ತೀವ್ರ ಕಳವಳಕಾರಿಯಾಗಿವೆ” ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.
वोटर लिस्ट?
Machine-readable फ़ॉर्मेट नहीं देंगे।CCTV फुटेज?
कानून बदलकर छिपा दी।चुनाव की फोटो-वीडियो?
अब 1 साल नहीं, 45 दिनों में ही मिटा देंगे।जिससे जवाब चाहिए था – वही सबूत मिटा रहा है।
साफ़ दिख रहा है – मैच फिक्स है। और फिक्स किया गया चुनाव, लोकतंत्र के लिए ज़हर है। pic.twitter.com/eYXAykO04p
— Rahul Gandhi (@RahulGandhi) June 21, 2025
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ರಾಹುಲ್ ಗಾಂಧಿ, ಮತದಾರರ ಪಟ್ಟಿ, ಮತದಾನದ ಡೇಟಾ ಮತ್ತು ವಿಡಿಯೋ ದೃಶ್ಯಾವಳಿಗಳನ್ನು ಪರಿಶೀಲಿಸಲು ಚುನಾವಣಾ ಆಯೋಗವನ್ನು ಒತ್ತಾಯಿಸುತ್ತಿದ್ದಾರೆ.
ಫಲಿತಾಂಶ ಪ್ರಕಟಗೊಂಡ 45 ದಿನಗಳ ಒಳಗೆ ನ್ಯಾಯಾಲಯದಲ್ಲಿ ಅದನ್ನು ಪ್ರಶ್ನಿಸದಿದ್ದರೆ, ಚುನಾವಣಾ ಪ್ರಕ್ರಿಯೆಯ ಸಿಸಿಟಿವಿ, ವೆಬ್‌ಕಾಸ್ಟಿಂಗ್ ಮತ್ತು ವಿಡಿಯೋ ದೃಶ್ಯಗಳನ್ನು ನಾಶಪಡಿಸುವಂತೆ ಚುನಾವಣಾ ಆಯೋಗವು ತನ್ನ ರಾಜ್ಯ ಚುನಾವಣಾ ಅಧಿಕಾರಿಗಳಿಗೆ ಸೂಚಿಸಿದೆ. ನಂತರ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ. “ದುರುದ್ದೇಶಪೂರಿತ ನಿರೂಪಣೆಗಳನ್ನು ರಚಿಸಲು ಚುನಾವಣಾ ಆಯೋಗ ತನ್ನ ಎಲೆಕ್ಟ್ರಾನಿಕ್ ಡೇಟಾವನ್ನು ಬಳಸುವ ಭಯವಿದೆ ಎಂದು ಅವರು ಹೇಳಿದ್ದಾರೆ.
ಮೇ 30ರಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಬರೆದ ಪತ್ರದಲ್ಲಿ, ಚುನಾವಣಾ ಪ್ರಕ್ರಿಯೆಯ ವಿವಿಧ ಹಂತಗಳನ್ನು ಬಹು ರೆಕಾರ್ಡಿಂಗ್ ಸಾಧನಗಳಾದ ಛಾಯಾಗ್ರಹಣ, ವಿಡಿಯೋಗ್ರಫಿ, ಸಿಸಿಟಿವಿ ಮತ್ತು ವೆಬ್‌ಕಾಸ್ಟಿಂಗ್ ಮೂಲಕ ದಾಖಲಿಸಲು ಸೂಚನೆಗಳನ್ನು ನೀಡಿರುವುದಾಗಿ ಚುನಾವಣಾ ಆಯೋಗ ತಿಳಿಸಿದೆ.
ಚುನಾವಣಾ ಕಾನೂನುಗಳು ಅಂತಹ ಧ್ವನಿಮುದ್ರಣಗಳನ್ನು ಕಡ್ಡಾಯಗೊಳಿಸದಿದ್ದರೂ, ಆಯೋಗವು ಚುನಾವಣಾ ಪ್ರಕ್ರಿಯೆಯ ವಿವಿಧ ಹಂತಗಳಲ್ಲಿ ಅವುಗಳನ್ನು ಆಂತರಿಕ ನಿರ್ವಹಣಾ ಸಾಧನವಾಗಿ ಬಳಸುತ್ತದೆ.
ಮೋದಿ ಘೋಷಣೆ ನೀಡುವ ಕಲೆಯಲ್ಲಿ ಪರಿಣತಿ ಹೊಂದಿದ್ದಾರೆಯೆ ಹೊರತು, ಪರಿಹಾರಗಳನ್ನಲ್ಲ: ರಾಹುಲ್ ಗಾಂಧಿ


