Homeಕರ್ನಾಟಕಅಪಾರ್ಟ್‌ಮೆಂಟ್ ಸಹಕಾರಿ ಸಂಘ ಅಮಾನ್ಯ ಮೂಲಭೂತ ಹಕ್ಕಿನ ಉಲ್ಲಂಘನೆ: ಪರಶುರಾಮ್

ಅಪಾರ್ಟ್‌ಮೆಂಟ್ ಸಹಕಾರಿ ಸಂಘ ಅಮಾನ್ಯ ಮೂಲಭೂತ ಹಕ್ಕಿನ ಉಲ್ಲಂಘನೆ: ಪರಶುರಾಮ್

- Advertisement -
- Advertisement -

ಸ್ಥಳೀಯ ಕಾನೂನುಗಳನ್ನು ಪಾಲಿಸುವ ನೆಪದಲ್ಲಿ ಸುಪ್ರೀಂಕೋರ್ಟ್ ಆದೇಶಗಳನ್ನು ಉಲ್ಲಂಘಿಸಿ ರಾಜ್ಯದಲ್ಲಿ ಅಪಾರ್ಟ್‌ಮೆಂಟ್ ಸಹಕಾರಿ ಸಂಘವನ್ನು ರಚಿಸುವ ಮೂಲಭೂತ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಅಪಾರ್ಟ್‌ಮೆಂಟ್ ಸಹಕಾರಿ ಸಂಘ ಆರೋಪ ಮಾಡಿದೆ.

ಶನಿವಾರ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಪರಶುರಾಮ್, ಸಹಕಾರಿ ಸಂಘಗಳನ್ನು ರಚಿಸಿಕೊಳ್ಳುವುದು ಪ್ರಜೆಗಳ ಮೂಲಭೂತ ಹಕ್ಕಾಗಿದೆ. ಈ ಹಕ್ಕಿನ ಅಡಿಯಲ್ಲಿ ಅಪಾರ್ಟ್‌ಮೆಂಟ್ ಸಮೂಹದ ನಿರ್ವಹಣೆಗಾಗಿ ಅಪಾರ್ಟ್‌ಮೆಂಟ್ ಮಾಲಕರು ನಗರದಲ್ಲಿ ಸುಮಾರು 50 ಅಪಾರ್ಟ್‌ಮೆಂಟ್ ಮಾಲಕರ ಕೋ-ಆಪರೇಟಿವ್ ಸೊಸೈಟಿಗಳನ್ನು ಕಾನೂನು ಬದ್ದವಾಗಿ ನೋಂದಾಯಿಸಿಕೊಂಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಆದರೆ, ಈ ಸಹಕಾರಿ ಸಂಘಗಳಿಗೆ ಅಪಾರ್ಟ್‌ಮೆಂಟ್ ಸಮೂಹದ ಮೂಲ ಭೂಮಿ, ಕಾಮನ್ ಸ್ಪೇಸ್ ಹಾಗೂ ಕಾಮನ್ ಅಮೆನಿಟಿಗಳನ್ನು ಹಸ್ತಾಂತರಿಸುವ ಅನಿವಾರ್ಯತೆ ಬಿಲ್ಡರ್‌ಗಳಿಗೆ ಉಂಟಾಗಿರುವುದರಿಂದ ಅವರು ಹೈಕೋರ್ಟ್‌ ಮೊರೆ ಹೋಗಿದ್ದರು. ಹೈಕೋರ್ಟ್ ಅಪಾರ್ಟ್‌ಮೆಂಟ್ ಮಾಲಕರ ಕೋ- ಆಪರೇಟಿವ್ ಸೊಸೈಟಿಗಳನ್ನು ಅಮಾನ್ಯ ಮಾಡುವ ಆದೇಶ ನೀಡಿದೆ. ಈ ಆದೇಶವು ಸಂವಿಧಾನದತ್ತ ಮೂಲಭೂತ ಹಕ್ಕಿಗೆ ಚ್ಯುತಿತರುವುದಷ್ಟೇ ಅಲ್ಲದೆ, ಸುಪ್ರೀಂ ಕೋರ್ಟ್‌ನ ಹಲವು ತೀರ್ಪುಗಳಿಗೆ ವಿರುದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಿಲ್ಡರ್‌ಗಳು ಅಪಾರ್ಟ್‌ಮೆಂಟ್ ಮಾಲಕರಿಗೆ ಭೂಮಿಯ ದಾಖಲೆಗಳನ್ನು ಸರಿಯಾಗಿ ಹಸ್ತಾಂತರಿಸದೇ, ಭೂಮಿಯನ್ನು ಉಳಿಸಿಕೊಳ್ಳಲು ಬಯಸುವ ಅನೇಕ ಮಾಲಕರು ತೊಂದರೆಗೆ ಸಿಲುಕಿಕೊಂಡಿದ್ದಾರೆ. ರಾಜ್ಯ ಸರ್ಕಾರ ಈ ಕೂಡಲೇ ಮಧ್ಯಪ್ರವೇಶ ಮಾಡಿ ಮಧ್ಯಮ ವರ್ಗದ ಜನರ ಹಕ್ಕನ್ನು ಕಾಪಾಡಬೇಕು. ಅಪಾರ್ಟ್‌ಮೆಂಟ್ ಭೂಮಿಗಳನ್ನು ಮಾಲಕರಲ್ಲದ ಬಿಲ್ಡರ್‌ಗಳು ಅಡವಿಡುವ ವ್ಯವಸ್ಥೆಯನ್ನು ನಿಲ್ಲಿಸಬೇಕು ಮತ್ತು ಭೂಮಿಯ ಮಾಲಕತ್ವದ ಹಕ್ಕನ್ನು ಅಪಾರ್ಟ್‌ಮೆಂಟ್ ಮಾಲಕರಿಗೆ ಉಳಿಸಿಕೊಡಬೇಕು ಎಂದು ಪರಶುರಾಮ್ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಶ್ರೀಪಾದ, ಖಜಾಂಚಿ ರಮ್ಯಾ ರಾವ್, ಕಾರ್ಯದರ್ಶಿ ವಿದ್ಯಾಧರ ದುರ್ಗೇಕರ್, ಗಂಗಾಧರ ಹಿರೇಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಚನ್ನರಾಯಪಟ್ಟಣ ರೈತ ಹೋರಾಟ ಬೆಂಬಲಿಸಿ ಸಾಹಿತಿ, ಚಿಂತಕರಿಂದ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. In Many Cities, registrar doesn’t accept application for registering new society. Some officials say registration of co-op housing society has been cancelled due to societies do not follow the rules and officials from co-op housing society Registrar don’t want monitor the activities of a co-op housing society activities………

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...