Homeಮುಖಪುಟಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡುವುದು ವಿಳಂಬವಾದರೆ ಸುಪ್ರೀಂ ಮೆಟ್ಟಿಲೇರುತ್ತೇವೆ: ಫಾರೂಕ್ ಅಬ್ದುಲ್ಲಾ

ಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡುವುದು ವಿಳಂಬವಾದರೆ ಸುಪ್ರೀಂ ಮೆಟ್ಟಿಲೇರುತ್ತೇವೆ: ಫಾರೂಕ್ ಅಬ್ದುಲ್ಲಾ

- Advertisement -
- Advertisement -

ಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪನೆ ಮಾಡುವಲ್ಲಿ ಹೆಚ್ಚು ವಿಳಂಬವಾದರೆ, ನ್ಯಾಷನಲ್ ಕಾನ್ಫರೆನ್ಸ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಿದೆ ಎಂದು ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಶನಿವಾರ ಹೇಳಿದ್ದಾರೆ.

ಪಕ್ಷದ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಫಾರೂಕ್ ಅಬ್ದುಲ್ಲಾ, ಅಕ್ಟೋಬರ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯ ನಂತರ ಜಮ್ಮು ಕಾಶ್ಮೀರದ ಜನತೆ ತಮ್ಮ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಬೇಕೆಂದು ಬಯಸಿದ್ದರು. ಆದರೆ ರಾಜ್ಯ ಸ್ಥಾನಮಾನ ಮರು ಸ್ಥಾಪಿಸದಿರುವುದು ನಮ್ಮನ್ನು ತಡೆಯುತ್ತಿದೆ” ಎಂದಿದ್ದಾರೆ.

“ನಾವು ರಾಜ್ಯದ ಸ್ಥಾನಮಾನಕ್ಕಾಗಿ ಕಾಯುತ್ತಿದ್ದೇವೆ. ವಿಳಂಬವಾದರೆ ಸುಪ್ರೀಂ ಕೋರ್ಟ್‌ಗೆ ಹೋಗುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲ. ರಾಜ್ಯತ್ವ ಪುನಃಸ್ಥಾಪಿಸಿದಾಗ, ನಮಗೆ ಹೆಚ್ಚಿನ ಅಧಿಕಾರ ಸಿಗಲಿದೆ ಎಂದು ನಾನು ಭಾವಿಸುತ್ತೇನೆ” ಎಂಬುವುದಾಗಿ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಆಗಸ್ಟ್ 2019ರಲ್ಲಿ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ವಿಧಿ 370 ಅನ್ನು ರದ್ದು ಮಾಡಿದೆ. ಅಲ್ಲದೆ, ರಾಜ್ಯವನ್ನು ಜಮ್ಮು ಕಾಶ್ಮೀರ ಹಾಗೂ ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದೆ.

ಡಿಸೆಂಬರ್ 2023ರಲ್ಲಿ, ಸುಪ್ರೀಂ ಕೋರ್ಟ್ 2019ರ ವಿಧಿ 370ರ ರದ್ದತಿಯ ಆದೇಶದ ಸಿಂಧುತ್ವವನ್ನು ಎತ್ತಿಹಿಡಿದಿದೆ ಮತ್ತು ಜಮ್ಮು ಕಾಶ್ಮೀರದ ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸಲು ಕೇಂದ್ರಕ್ಕೆ ಆದೇಶಿಸಿದೆ.

2024ರ ನವೆಂಬರ್ 6ರಂದು ಜಮ್ಮು ಕಾಶ್ಮೀರ ವಿಧಾನಸಭೆಯು ರಾಜ್ಯಕ್ಕೆ 370ನೇ ವಿಧಿಯ ಅಡಿಯಲ್ಲಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಪುನಃಸ್ಥಾಪಿಸಲು ಒತ್ತಾಯಿಸುವ ನಿರ್ಣಯವನ್ನು ಅಂಗೀಕರಿಸಿದೆ.

ಜನವರಿಯಲ್ಲಿ, ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕಾನೂನು ನೆರವು ಪಡೆಯುವ ಮೊದಲು ಕೇಂದ್ರಾಡಳಿತ ಪ್ರದೇಶದ ರಾಜ್ಯತ್ವವನ್ನು ಪುನಃಸ್ಥಾಪಿಸಲು ಕೇಂದ್ರಕ್ಕೆ ಮೊದಲ ಅವಕಾಶ ನೀಡಲು ಬಯಸುವುದಾಗಿ ಹೇಳಿದ್ದರು.

ಭಾರತದ ಮಿತ್ರ ಇರಾನ್‌ ಮೇಲಿನ ಅಮೆರಿಕ ದಾಳಿಗೆ ಮೋದಿ ಮೌನವೇಕೆ? | ಕಾಂಗ್ರೆಸ್, ಸಿಪಿಐ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...