Homeಮುಖಪುಟಭಾರತದ ರಾಷ್ಟ್ರ ಧ್ವಜವನ್ನು ಕೇಸರಿ ಧ್ವಜಕ್ಕೆ ಬದಲಾಯಿಸಬೇಕು: ಬಿಜೆಪಿ ಹಿರಿಯ ನಾಯಕ ಶಿವರಾಜನ್ ವಿವಾದಾತ್ಮಕ ಹೇಳಿಕೆ

ಭಾರತದ ರಾಷ್ಟ್ರ ಧ್ವಜವನ್ನು ಕೇಸರಿ ಧ್ವಜಕ್ಕೆ ಬದಲಾಯಿಸಬೇಕು: ಬಿಜೆಪಿ ಹಿರಿಯ ನಾಯಕ ಶಿವರಾಜನ್ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಭಾರತದ ರಾಷ್ಟ್ರ ಧ್ವಜವನ್ನು ಕೇಸರಿ ಧ್ವಜಕ್ಕೆ ಬದಲಾಯಿಸಬೇಕು ಎಂಬ ಬಿಜೆಪಿ ಹಿರಿಯ ನಾಯಕ ಹಾಗೂ ರಾಷ್ಟ್ರೀಯ ಮಂಡಳಿಯ ಮಾಜಿ ಸದಸ್ಯ ಎನ್. ಶಿವರಾಜನ್ ಅವರ ಹೇಳಿಕೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಕೇರಳದ ಪಾಲಕ್ಕಾಡ್‌ನ ಅಂಚುವಿಲಕ್ಕು ಜಂಕ್ಷನ್‌ನಲ್ಲಿ ಬಿಜೆಪಿ ಆಯೋಜಿಸಿದ್ದ ಸಾರ್ವಜನಿಕ ಪ್ರತಿಭಟನೆಯ ಸಂದರ್ಭದಲ್ಲಿ ಎಲ್‌ಡಿಎಫ್ ಮತ್ತು ಯುಡಿಎಫ್ ಎರಡೂ ‘ಭಾರತ ಮಾತೆಯನ್ನು’ ಅವಮಾನಿಸಿವೆ ಎಂದು ಬಿಜೆಪಿ ಆರೋಪಿಸಿದೆ.

ಪ್ರತಿಭಟನೆಯ ಸಂದರ್ಭದಲ್ಲಿ ಮಾತನಾಡಿದ ಪಾಲಕ್ಕಾಡ್ ಪುರಸಭೆಯ ಬಿಜೆಪಿ ಹಾಲಿ ಕೌನ್ಸಿಲರ್ ಆಗಿರುವ ಶಿವರಾಜನ್, “ರಾಜಕೀಯ ಪಕ್ಷಗಳು ರಾಷ್ಟ್ರದ ತ್ರಿವರ್ಣ ಧ್ವಜವನ್ನು ಹೋಲುವ ಧ್ವಜಗಳನ್ನು ಬಳಸುವುದನ್ನು ನಿಷೇಧಿಸಬೇಕು ಎಂದಿದ್ದಾರೆ.

ಕಾಂಗ್ರೆಸ್ ಹಾಗೂ ಎನ್‌ಸಿಪಿಯನ್ನು ಗುರಿಯಾಗಿಸಿಕೊಂಡು ಮತ್ತಷ್ಟು ವಾಗ್ದಾಳಿ ನಡೆಸಿದ ಶಿವರಾಜನ್, ಈ ಎರಡು ಪಕ್ಷಗಳು ವಿಭಿನ್ನ ಧ್ವಜಗಳನ್ನು ಬಳಸಬೇಕು. ಈ ಪೈಕಿ ಕಾಂಗ್ರೆಸ್ ಹಸಿರು ಧ್ವಜ ಬಳಸಬೇಕು ಎಂದು ವ್ಯಂಗ್ಯವಾಗಿ ಸಲಹೆಯನ್ನೂ ನೀಡಿದ್ದಾರೆ. ಭಾರತದ ಚರಿತ್ರೆಯ ಬಗ್ಗೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಏನೂ ತಿಳಿದಿಲ್ಲ ಎಂದು ಹೇಳಿದ ಅವರು, ತ್ರಿವರ್ಣ ಧ್ವಜದ ಬದಲು ಅವರು ಇಟಲಿಯ ಧ್ವಜವನ್ನು ಹಾರಿಸಬೇಕು ಎಂದೂ ಗೇಲಿ ಮಾಡಿದ್ದಾರೆ.

ಕೇರಳದ ಶಿಕ್ಷಣ ಸಚಿವ ವಿ.ಶಿವನ್ ಕುಟ್ಟಿಯನ್ನು ಶವನ್ ಕುಟ್ಟಿ (ಮೃತ ಮಗು) ಎಂದು ಹೇಳುವ ಮೂಲಕ ಶಿವರಾಜನ್ ಅವಮಾನಿಸಿದ್ದಾರೆ.

ಶಿವರಾಜನ್‌ ವಿವಾದಾತ್ಮಕ ಭಾಷಣದ ಬೆನ್ನಲ್ಲೇ ನಗರದಲ್ಲಿ ಮೊದಲಿಗೆ ಕಾಂಗ್ರೆಸ್ ಕಾರ್ಯಕರ್ತರು, ನಂತರ ಸಿಪಿಎಂ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.

ಪಾಲಕ್ಕಾಡ್ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸಿ.ವಿ ಸತೀಶನ್ ಈ ಸಂಬಂಧ ದೂರು ದಾಖಲಿಸಿದ್ದು, ಶಿವರಾಜನ್ ವಿರುದ್ಧ ದೇಶದ್ರೋಹ ಹಾಗೂ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಬೇಕು ಆಗ್ರಹಿಸಿದ್ದಾರೆ. ಈ ದೂರನ್ನು ಪಾಲಕ್ಕಾಡ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸಲ್ಲಿಸಲಾಗಿದೆ.

ಶಿವರಾಜನ್ ಹೇಳಿಕೆಯನ್ನು ಪಾಲಕ್ಕಾಡ್ ಜಿಲ್ಲೆಯ ಎಡರಂಗ ಮತ್ತು ಕಾಂಗ್ರೆಸ್ ನಾಯಕರು ತೀವ್ರವಾಗಿ ಖಂಡಿಸಿದ್ದು, ಇದು ರಾಷ್ಟ್ರಧ್ವಜಕ್ಕೆ ಮಾಡಿದ ನೇರ ಅವಮಾನ ಮತ್ತು ದೇಶದ ಏಕತೆ ಮತ್ತು ಸಾರ್ವಭೌಮತ್ವಕ್ಕೆ ಬೆದರಿಕೆ ಎಂದಿದ್ದಾರೆ.

ಭಾರತದ ಮಿತ್ರ ಇರಾನ್‌ ಮೇಲಿನ ಅಮೆರಿಕ ದಾಳಿಗೆ ಮೋದಿ ಮೌನವೇಕೆ? | ಕಾಂಗ್ರೆಸ್, ಸಿಪಿಐ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...