Homeಮುಖಪುಟಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್ ಜೊತೆಗೆ ಪ್ರಧಾನಿ ಮೋದಿ ಮಾತುಕತೆ; ಶಾಂತಿಗಾಗಿ ಕರೆ

ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್ ಜೊತೆಗೆ ಪ್ರಧಾನಿ ಮೋದಿ ಮಾತುಕತೆ; ಶಾಂತಿಗಾಗಿ ಕರೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಭಾನುವಾರ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರೊಂದಿಗೆ ಮಾತನಾಡಿ, ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷವನ್ನು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ತಕ್ಷಣವೇ ಪರಿಹರಿಕೊಳ್ಳುವಂತೆ ಕರೆ ನೀಡಿದ್ದಾರೆ. ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಭಾನುವಾರ ಅಮೆರಿಕವು ಇರಾನ್‌ನಲ್ಲಿರುವ ಮೂರು ಪರಮಾಣು ತಾಣಗಳ ಮೇಲೆ ಬಾಂಬ್ ದಾಳಿ ನಡೆಸಿ ವ್ಯಾಪಕ ಪ್ರಾದೇಶಿಕ ಸಂಘರ್ಷಕ್ಕೆ ಕಾರಣವಾದ ಕೆಲವೇ ಗಂಟೆಗಳ ನಂತರ ಮೋದಿ ಮತ್ತು ಪೆಜೆಶ್ಕಿಯಾನ್ ನಡುವಿನ ಫೋನ್ ಸಂಭಾಷಣೆ ನಡೆಯಿತು ಎಂದು ವರದಿಗಳು ಉಲ್ಲೇಖಿಸಿವೆ.

ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಈ ಬಗ್ಗೆ ಪ್ರತಿಕ್ರಯಿಸಿರುವ ಪ್ರಧಾನಿ ಮೋದಿ, ಇತ್ತೀಚಿನ ಉಲ್ಬಣಗಳ ಬಗ್ಗೆ “ತೀವ್ರ ಕಳವಳ” ವ್ಯಕ್ತಪಡಿಸಿರುವುದಾಗಿ ಹೇಳಿದ್ದಾರೆ.

“ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರೊಂದಿಗೆ ಮಾತನಾಡಿದ್ದೇನೆ. ಪ್ರಸ್ತುತ ಪರಿಸ್ಥಿತಿಯ ಬಗ್ಗೆ ನಾವು ವಿವರವಾಗಿ ಚರ್ಚಿಸಿದ್ದೇವೆ. ಇತ್ತೀಚಿನ ಉಲ್ಬಣಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದೇವೆ” ಎಂದು ಮೋದಿ ಹೇಳಿದ್ದಾರೆ.

“ಮುಂದಿನ ದಾರಿಯಾಗಿ ಮತ್ತು ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಯ ಆರಂಭಿಕ ಪುನಃಸ್ಥಾಪನೆಗಾಗಿ ತಕ್ಷಣದ ಉಲ್ಬಣ, ಸಂವಾದ ಮತ್ತು ರಾಜತಾಂತ್ರಿಕತೆಗೆ ನಮ್ಮ ಕರೆಯನ್ನು ಪುನರುಚ್ಚರಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇರಾನ್‌ ಮೇಲೆ ದಾಳಿ ಮಾಡಿರುವ ಕುರಿತು ಅಧ್ಯಕ್ಷ ಟ್ರಂಪ್ ಸಾಮಾಜಿಕ ಮಾಧ್ಯಮ ಟ್ರುಥ್ ಸೋಶಿಯಲ್‌ನಲ್ಲಿ ಭಾನುವಾರ ಮಾಹಿತಿ ನೀಡಿದ್ದು, “ಅಮೆರಿಕದ ಪಡೆಗಳು ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್‌ನಲ್ಲಿರುವ ಇರಾನಿನ ಪರಮಾಣು ನೆಲೆಗಳ ಮೇಲೆ ‘ಅತ್ಯಂತ ಯಶಸ್ವಿ’ ದಾಳಿಗಳನ್ನು ನಡೆಸಿವೆ. ಎಲ್ಲಾ ಅಮೆರಿಕನ್ ವಿಮಾನಗಳು ಈಗ ಇರಾನಿನ ವಾಯುಪ್ರದೇಶದಿಂದ ಹೊರಗಿವೆ” ಎಂದು ತಿಳಿಸಿದ್ದಾರೆ.

“ಪ್ರಾಥಮಿಕ ತಾಣವಾದ ಫೋರ್ಡೋದಲ್ಲಿ ಪೂರ್ಣ ಪ್ರಮಾಣದಲ್ಲಿ ಬಾಂಬ್ ದಾಳಿ ಮಾಡಲಾಗಿದೆ. ಎಲ್ಲಾ ವಿಮಾನಗಳು ಸುರಕ್ಷಿತವಾಗಿ ವಾಪಸ್ ನೆಲೆಗಳಿಗೆ ಹೋಗುತ್ತಿವೆ. ನಮ್ಮ ಅಮೆರಿಕದ ಮಹಾನ್ ಯೋಧರಿಗೆ ಅಭಿನಂದನೆಗಳು. ಈ ರೀತಿ ಕಾರ್ಯಾಚರಣೆ ಮಾಡಬಹುದಾದ ಮತ್ತೊಂದು ಸೇನೆಯು ಜಗತ್ತಿನಲ್ಲಿ ಇಲ್ಲ. ಇದು ಶಾಂತಿಯ ಸಮಯ! ಈ ಬೆಳವಣಿಗೆಯ ಬಗ್ಗೆ ನೀವು ಗಮನ ಹರಿಸಿದ್ದಕ್ಕಾಗಿ ಧನ್ಯವಾದಗಳು,” ಎಂದು ಅವರು ಉಲ್ಲೇಖಿಸಿದ್ದಾರೆ.

ಇರಾನ್‌ನ ಮೂರು ಪರಮಾಣು ನೆಲೆಗಳಾದ ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್ ಮೇಲೆ ಅಮೆರಿಕ ವೈಮಾನಿಕ ದಾಳಿ ನಡೆಸಿದ ಬಳಿಕ, ಪಶ್ಚಿಮ ಏಷ್ಯಾದ ಪ್ರತಿಯೊಬ್ಬ ಅಮೆರಿಕನ್ ನಾಗರಿಕ ಅಥವಾ ಮಿಲಿಟರಿ ಸಿಬ್ಬಂದಿ ಈಗ ನಮ್ಮ ಗುರಿ ಎಂದು ಇರಾನ್‌ನ ಸರ್ಕಾರಿ ದೂರದರ್ಶನವು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಎಚ್ಚರಿಕೆ ನೀಡಿರುವುದಾಗಿ news18.com ವರದಿ ಮಾಡಿದೆ.

“ಇರಾನ್‌ನ ವಾಯುಪ್ರದೇಶವನ್ನು ಉಲ್ಲಂಘಿಸುವ ಮೂಲಕ ಅಮೆರಿಕ ಇರಾನ್ ವಿರುದ್ಧ ಅಪರಾಧ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಇದಕ್ಕೆ ಅವಕಾಶವಿಲ್ಲ. ಅಮೆರಿಕದ ಅಧ್ಯಕ್ಷರೇ, ನೀವು ದಾಳಿ ಪ್ರಾರಂಭಿಸಿದ್ದೀರಿ, ನಾವು ಕೊನೆಗೊಳಿಸುತ್ತೇವೆ” ಎಂದು ಇರಾನ್ ದೂರದರ್ಶನ ಯುಎಸ್ ನೆಲೆಗಳ ಗ್ರಾಫಿಕ್ ಅನ್ನು ಪ್ರದರ್ಶಿಸುತ್ತಾ ಹೇಳಿದೆ” ಎಂದು ವರದಿ ವಿವರಿಸಿದೆ.

ಜೂನ್ 13 ರಂದು ಇಸ್ರೇಲ್ ತನ್ನ ದಾಳಿಯನ್ನು ಪ್ರಾರಂಭಿಸಿದ ನಂತರ ದೇಶದಲ್ಲಿ 400 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 3000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಇರಾನ್‌ನ ಆರೋಗ್ಯ ಸಚಿವಾಲಯ ಹೇಳಿದೆ ಎಂದು ಶನಿವಾರ ಅಜ್‌ಜಝೀರಾ ವರದಿ ಮಾಡಿದೆ. ಇಸ್ರೇಲ್‌ನ “ಆಕ್ರಮಣ” ಕ್ಕೆ ಅಮೆರಿಕ ಸೇರಿಕೊಂಡರೆ ಅದು “ಎಲ್ಲರಿಗೂ ತುಂಬಾ ಅಪಾಯಕಾರಿ” ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಹೇಳಿದ್ದಾರೆ.

ಇರಾನ್‌ನ ಆರೋಗ್ಯ ಸಚಿವಾಲಯದ ಸಾರ್ವಜನಿಕ ಸಂಪರ್ಕ ವಿಭಾಗದ ಮುಖ್ಯಸ್ಥ ಹೊಸೈನ್ ಕೆರ್ಮನ್‌ಪೋರ್, ದೇಶದ ಮೇಲೆ ಇಸ್ರೇಲಿ ನಡೆಸಿದ ದಾಳಿಯಿಂದ ಸಾವನ್ನಪ್ಪಿದವರ ಸಂಖ್ಯೆಯ ಬಗ್ಗೆ ಮಾಹಿತಿ ನಿಡಿದ್ದಾರೆ.

ಇಸ್ರೇಲ್ ಮತ್ತು ಇರಾನ್ ನಡುವಿನ ಇತ್ತೀಚಿನ ಸುತ್ತಿನ ಸಂಘರ್ಷ ಜೂನ್ 13 ರಂದು ಪ್ರಾರಂಭವಾಯಿತು. ಇಸ್ರೇಲ್ ಸೇನೆಯು ಇರಾನ್‌ನ ಪರಮಾಣು ಕಾರ್ಯಕ್ರಮವನ್ನು ಸ್ಥಗಿತಗೊಳಿಸುವ ಉದ್ದೇಶದಿಂದ ಇರಾನ್‌ನಲ್ಲಿ ಪರಮಾಣು ಗುರಿಗಳೆಂದು ಹೇಳಿಕೊಂಡ ಸ್ಥಳಗಳು ಮತ್ತು ಇತರ ಸ್ಥಳಗಳ ಮೇಲೆ ದಾಳಿ ಮಾಡಿತು. ಇದಕ್ಕೆ ಪ್ರತಿಯಾಗಿ ಇರಾನ್ ಸೇನೆಯು ಇಸ್ರೇಲ್ ಮೇಲೆ ಕ್ಷಿಪಣಿ ದಾಳಿಯ ಮೂಲಕ ಪ್ರತೀಕಾರ ತೀರಿಸಿಕೊಂಡಿತು. ನಿರಂತರ ದಾಳಿಗಳು ಈ ಪ್ರದೇಶದಲ್ಲಿ ವ್ಯಾಪಕ ಸಂಘರ್ಷದ ಆತಂಕಗಳಿಗೆ ಕಾರಣವಾಗಿವೆ. ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಭಾರತದ ಮಿತ್ರ ಇರಾನ್‌ ಮೇಲಿನ ಅಮೆರಿಕ ದಾಳಿಗೆ ಮೋದಿ ಮೌನವೇಕೆ? | ಕಾಂಗ್ರೆಸ್, ಸಿಪಿಐ ಪ್ರಶ್ನೆ

ಭಾರತದ ಮಿತ್ರ ಇರಾನ್‌ ಮೇಲಿನ ಅಮೆರಿಕ ದಾಳಿಗೆ ಮೋದಿ ಮೌನವೇಕೆ? | ಕಾಂಗ್ರೆಸ್, ಸಿಪಿಐ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...