ಚಲಿಸುವ ರೈಲಿನಲ್ಲಿ ಸೀಟಿನ ಬಗ್ಗೆ ಉಂಟಾದ ಜಗಳದಲ್ಲಿ 20 ಜನರ ಗುಂಪೊಂದು 37 ವರ್ಷದ ವ್ಯಕ್ತಿಯನ್ನು ಥಳಿಸಿ ಕೊಂದಿರುವ ಘಟನೆ ಶುಕ್ರವಾರ ಉತ್ತರ ಪ್ರದೇಶದ ಬಾಗ್‌ಪತ್ ಜಿಲ್ಲೆಯ ಖೇಕ್ರಾ ರೈಲು ನಿಲ್ದಾಣದ ಬಳಿ ಸಂಭವಿಸಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಉತ್ತರ ಪ್ರದೇಶ | ಸೀಟಿನ
ಮೃತ ವ್ಯಕ್ತಿಯನ್ನು ದೀಪಕ್ ಯಾದವ್ ಎಂದು ಗುರುತಿಸಲಾಗಿದ್ದು, ಅವರು ಬಾಗ್‌ಪತ್‌ನ ಖೇಕ್ರಾ ನಿವಾಸಿ ಎಂದು ವರದಿ ಹೇಳಿದೆ. ದೆಹಲಿ-ಸಹಾರನ್‌ಪುರ ಪ್ಯಾಸೆಂಜರ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ತಿಳಿಸಿದೆ.
ಖೇಕ್ರಾ ನಿಲ್ದಾಣದಲ್ಲಿ ರೈಲು ನಿಲ್ಲುವ ಮೊದಲೇ ದಾಳಿಕೋರರು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಅಲ್ಲಿ ಸಂತ್ರಸ್ತ ಯಾದವ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅದಾಗ್ಯೂ, ಅವರು ಆಸ್ಪತ್ರೆಗೆ ತಲುಪುವ ಮೊದಲೆ ಮೃತಪಟ್ಟಿದ್ದಾರೆ ಎಂದು ರೈಲ್ವೆ ಪೊಲೀಸರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
ಗಲಭೆ (191(2)) ಮತ್ತು ಕೊಲೆ (103)ಗೆ ಸಂಬಂಧಿಸಿದ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್‌ಗಳ ಅಡಿಯಲ್ಲಿ ಗುಂಪಿನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಬರೌತ್ ವಿಭಾಗದ ರೈಲ್ವೆ ಪೊಲೀಸ್ ಇನ್ಸ್‌ಪೆಕ್ಟರ್ ಉಧಮ್ ಸಿಂಗ್ ತಲಾನ್ ತಿಳಿಸಿದ್ದಾರೆ. ಉತ್ತರ ಪ್ರದೇಶ | ಸೀಟಿನ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಪಾಕಿಸ್ತಾನ ಜೊತೆ ಸಿಂಧೂ ನದಿ ನೀರು ಒಪ್ಪಂದವನ್ನು ಭಾರತ ಪುನಃಸ್ಥಾಪಿಸಲ್ಲ: ಅಮಿತ್ ಶಾ
ಪಾಕಿಸ್ತಾನ ಜೊತೆ ಸಿಂಧೂ ನದಿ ನೀರು ಒಪ್ಪಂದವನ್ನು ಭಾರತ ಪುನಃಸ್ಥಾಪಿಸಲ್ಲ: ಅಮಿತ್ ಶಾ

