Homeದಲಿತ್ ಫೈಲ್ಸ್ಉತ್ತರ ಪ್ರದೇಶ: ದಲಿತ ಕುಟುಂಬದ ಮದುವೆ ಮೆರವಣಿಗೆಗೆ ಅಡ್ಡಿಪಡಿಸಿ ಹಲ್ಲೆಗೈದ ಪ್ರಬಲ ಜಾತಿ ವ್ಯಕ್ತಿಗಳು

ಉತ್ತರ ಪ್ರದೇಶ: ದಲಿತ ಕುಟುಂಬದ ಮದುವೆ ಮೆರವಣಿಗೆಗೆ ಅಡ್ಡಿಪಡಿಸಿ ಹಲ್ಲೆಗೈದ ಪ್ರಬಲ ಜಾತಿ ವ್ಯಕ್ತಿಗಳು

- Advertisement -
- Advertisement -

ದಲಿತ ಕುಟುಂಬದ ವಿವಾಹ ಮೆರವಣಿಗೆಗೆ ಕೆಲವು ಪ್ರಬಲ ಜಾತಿಯ ವ್ಯಕ್ತಿಗಳು ಅಡ್ಡಿಪಡಿಸಿ ಹಲ್ಲೆ ನಡೆಸಿರುವ ಘಟನೆ ಕಳೆದ ಶನಿವಾರ (ಜೂನ್ 21, 2025) ರಾತ್ರಿ ಸಂಭವಿಸಿದೆ. ಗಲಬೆ ಬಳಿಕ ಇಟಾ ಜಿಲ್ಲೆಯ ಅವಘಡ ಪೊಲೀಸ್ ಠಾಣೆ ವ್ಯಾಪ್ತಿಯ ಧಕ್ಪುರ ಗ್ರಾಮವು ಭಾನುವಾರ (ಜೂನ್ 22, 2025) ಉದ್ವಿಗ್ನವಾಗಿತ್ತು. ಪರಿಸ್ಥಿತಿ ನಿಯಂತ್ರಿಸುವಾಗ ಓರ್ವ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

ಸ್ಥಳೀಯ ದಲಿತರಿಗೆ ಪ್ರಬಲ ಜಾತಿಯವರಿಂದ ಬೆದರಿಕೆ ಇದ್ದು, ಈ ವಿಚಾರದಲ್ಲಿ ಪೊಲೀಸರ ನಿಷ್ಕ್ರಿಯತೆಯನ್ನು ಎದುರಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಉದ್ವಿಗ್ನತೆಯನ್ನು ಶಮನಗೊಳಿಸಲು ಗ್ರಾಮದಲ್ಲಿ ಪೊಲೀಸ್ ಪಡೆ ನಿಯೋಜಿಸಲಾಗಿದೆ. ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಜಿಲ್ಲಾ ಪೊಲೀಸ್ ಅಧಿಕಾರಿಗಳು ಪರಿಸ್ಥಿತಿಯನ್ನು ನಿಯಂತ್ರಿಸಲು ಗ್ರಾಮಕ್ಕೆ ಆಗಮಿಸಿದರು.

“ವರನು ಹತ್ರಾಸ್‌ನಿಂದ ತನ್ನ ಸಂಬಂಧೀಕರೊಡನೆ ಧಕ್ಪುರಕ್ಕೆ ಆಗಮಿಸಿದ್ದ. ವಧು ಅದೇ ಹಳ್ಳಿಯವಳಾಗಿದ್ದರಿಂದ ಮತ್ತು ಆರ್ಥಿಕವಾಗಿ ದುರ್ಬಲ ಕುಟುಂಬಕ್ಕೆ ಸೇರಿದವಳಾಗಿದ್ದರಿಂದ, ಮದುವೆಗೆ ಗ್ರಾಮದ ಎಲ್ಲ ಸಮುದಾಯಗಳು ಆರ್ಥಿಕವಾಗಿ ಬೆಂಬಲ ನೀಡಿದ್ದವು. ಮದುವೆ ಮೆರವಣಿಗೆ ವಧುವಿನ ಮನೆ ಕಡೆಗೆ ಸಾಗುತ್ತಿದ್ದಾಗ, ಇಡೀ ಗ್ರಾಮದಲ್ಲಿ ಮೆರವಣಿಗೆ ನಡೆಸುವಂತೆ ಸಲಹೆ ನೀಡಿದ್ದಾರೆ. ಆದರೆ, ರಜಪೂತ ಸಮುದಾಯದ ವಸತಿ ಪ್ರದೇಶ ಮುಂದೆ ಮಾತಿನ ಚಕಮಕಿ ನಡೆಯಿತು. ಪರಿಸ್ಥಿತಿಯನ್ನು ನಿಯಂತ್ರಿಸಲು ಕೂಡಲೇ ಪೊಲೀಸರು ಸ್ಥಳಕ್ಕೆ ತಲುಪಿದರು. ಮಾತಿನ ಚಕಮಕಿ ನಡುವೆ ಕೆಲವರು ಪೊಲೀಸರ ಮೇಲೆ ಕಲ್ಲು ಎಸೆದರು, ಇದರಲ್ಲಿ ಕಾನ್‌ಸ್ಟೆಬಲ್ ಗಾಯಗೊಂಡರು. ನಾವು ಎರಡೂ ಕಡೆಯವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ ಮತ್ತು ವೀಡಿಯೊ ದೃಶ್ಯಗಳ ಮೂಲಕ ಈ ವಿಷಯವನ್ನು ತನಿಖೆ ಮಾಡುತ್ತಿದ್ದೇವೆ. ಆದರೂ, ಮದುವೆ ಶಾಂತಿಯುತವಾಗಿ ನಡೆಯಿತು” ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ಜ್ಞಾನೇಂದ್ರ ಪ್ರತಾಪ್ ಸಿಂಗ್ ಅವರ ಹೇಳಿಕೆ ಉಲ್ಲೇಖಿಸಿ ‘ದಿ ಹಿಂದೂ’ ವರದಿ ಮಾಡಿದೆ.

ಪ್ರಬಲ ಜಾತಿಯ ಗುಂಪಿನ ಕೆಲವು ವ್ಯಕ್ತಿಗಳು ಮದುವೆ ಮೆರವಣಿಗೆಗೆ ನಡೆಸದಂತೆ ಬಲವಂತವಾಗಿ ಪ್ರಯತ್ನಿಸಿದ್ದಾರೆ, ಅವರ ಬೀದಿಯಲ್ಲಿ ಮೆರವಣಿಗೆ ಹೋಗದಂತೆ ಬೆದರಿಕೆ ಹಾಕಿದ್ದಾರೆ ಎಂದು ದಲಿತ ಸಮುದಾಯಕ್ಕೆ ಸೇರಿದ ಜನರು ಆರೋಪಿಸಿದ್ದಾರೆ.

ನಮಗೆ ಬೆದರಿಕೆ ಹಾಕುತ್ತಿದ್ದು ಪೊಲೀಸರು ಕ್ರಮ ಕೈಗೊಳ್ಳಬೇಕು; ಭದ್ರತೆ ಒದಗಿಸಬೇಕೆಂದು ಸ್ಥಳೀಯ ದಲಿತರು ಒತ್ತಾಯಿಸಿದರು.

ಪರಿಶಿಷ್ಟ ಜಾತಿ ಒಳ ಮೀಸಲು: ಸಮೀಕ್ಷೆ ಅವಧಿ ಜೂ. 30ರವರೆಗೆ ವಿಸ್ತರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...