Homeಮುಖಪುಟವಿಧಾನಸಭೆ ಉಪಚುನಾವಣೆ | ಕೇರಳದ ನಿಲಂಬೂರಿನಲ್ಲಿ ಯುಡಿಎಫ್ ಅಭ್ಯರ್ಥಿ ಆರ್ಯಡನ್ ಶೌಕತ್‌ಗೆ ಭರ್ಜರಿ ಜಯ

ವಿಧಾನಸಭೆ ಉಪಚುನಾವಣೆ | ಕೇರಳದ ನಿಲಂಬೂರಿನಲ್ಲಿ ಯುಡಿಎಫ್ ಅಭ್ಯರ್ಥಿ ಆರ್ಯಡನ್ ಶೌಕತ್‌ಗೆ ಭರ್ಜರಿ ಜಯ

- Advertisement -
- Advertisement -

ಪ್ರತಿಷ್ಠೆಯ ಕಣವಾಗಿದ್ದ ಕೇರಳದ ನಿಲಂಬೂರ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಯುಡಿಎಫ್‌ ಮೈತ್ರಿಕೂಟದ ಕಾಂಗ್ರೆಸ್ ಅಭ್ಯರ್ಥಿ ಆರ್ಯಡನ್ ಶೌಕತ್ ಅವರು ಭರ್ಜರಿ ಜಯಗಳಿಸಿದ್ದಾರೆ.

ಶೌಕತ್ ಅವರ ಪ್ರತಿಸ್ಪರ್ಧಿ ಆಡಳಿತರೂಢ ಎಲ್‌ಡಿಎಫ್‌ ಮೈತ್ರಿಕೂಟದ ಸಿಪಿಐ(ಎಂ) ಅಭ್ಯರ್ಥಿ ಎಂ. ಸ್ವರಾಜ್ ಅವರು 11,077 ಮತಗಳಿಂದ ಸೋಲನುಭವಿಸಿದ್ದಾರೆ. ಈ ವರ್ಷದ ಜನವರಿಯವರೆಗೆ ನಿಲಂಬೂರ್ ಶಾಸಕರಾಗಿದ್ದ ಸ್ವತಂತ್ರ ಅಭ್ಯರ್ಥಿ ಪಿ.ವಿ ಅನ್ವರ್ 19,946 ಮತಗಳೊಂದಿಗೆ ಮೂರನೇ ಸ್ಥಾನ ಪಡೆದಿದ್ದಾರೆ.

ಇನ್ನುಳಿದಂತೆ ಬಿಜೆಪಿ ಅಭ್ಯರ್ಥಿ ಮೋಹನ್ ಜಾರ್ಜ್ 8,648 ಮತಗಳನ್ನು ಗಳಿಸಿದರೆ, ಎಸ್‌ಡಿಪಿಐನ ಸಾದಿಕ್ ನಡುತೊಡಿ 2,075 ಮತಗಳನ್ನು ಗಳಿಸಿದ್ದಾರೆ. 630 ನೋಟಾ ಮತಗಳು ಬಿದ್ದಿವೆ. ಒಟ್ಟು 10 ಅಭ್ಯರ್ಥಿಗಳು ನಿಲಂಬೂರ್‌ ಕಣದಲ್ಲಿದ್ದರು.

ಮತ ಎಣಿಕೆಯ ಮೊದಲ ಸುತ್ತಿನಿಂದಲೂ ಸ್ವರಾಜ್ ವಿರುದ್ದ ಶೌಕತ್ ಮುನ್ನಡೆ ಕಾಯ್ದುಕೊಂಡಿದ್ದರು. ಎಣಿಕೆ ಮುಂದುವರೆದಂತೆ ಶೌಕತ್ ಮತ್ತು ಸ್ವರಾಜ್ ನಡುವಿನ ಅಂತರ ಹೆಚ್ಚುತ್ತಲೇ ಹೋಯಿತು. ಐದನೇ ಸುತ್ತಿನ ಮತ ಎಣಿಕೆ ವೇಳೆಗೆ ಶೌಕತ್ ಸ್ವರಾಜ್‌ಗಿಂತ 5,000 ಮತಗಳ ಮುನ್ನಡೆಯಲ್ಲಿದ್ದರು.

ಇದು ಶೌಕತ್ ಅವರ ಮೊದಲ ಗೆಲುವಾಗಿದ್ದು, ಅವರು ಈ ಹಿಂದೆ 2016ರಲ್ಲಿ ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಪಿ.ವಿ ಅನ್ವರ್ ವಿರುದ್ದ ಸೋಲನುಭವಿಸಿದ್ದರು.

ನಿಲಂಬೂರ್ ಪುರಸಭೆಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಶೌಕತ್ ಅವರು, ಈ ಹಿಂದೆ ಸ್ಥಳೀಯ ಆಡಳಿತ ಮತ್ತು ಕಾಂಗ್ರೆಸ್ ಪಕ್ಷದ ಇತರ ಹುದ್ದೆಗಳನ್ನು ಅಲಂಕರಿಸಿದ್ದರು. ಅವರು ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಮತ್ತು ಚಿತ್ರಕಥೆಗಾರರೂ ಆಗಿದ್ದಾರೆ.

ಶೌಕತ್ ಅವರು ಮಾಜಿ ಸಚಿವ ಮತ್ತು ನಿಲಂಬೂರಿನಿಂದ ಎಂಟು ಬಾರಿ ಶಾಸಕರಾಗಿದ್ದ ಪ್ರಮುಖ ಕಾಂಗ್ರೆಸ್ ನಾಯಕ ದಿವಂಗತ ಆರ್ಯಡನ್ ಮುಹಮ್ಮದ್ ಅವರ ಪುತ್ರ. 1982ರಲ್ಲಿ ಅಲ್ಪಾವಧಿಯ ಸೋಲಿನ ನಂತರ, ಮುಹಮ್ಮದ್ ಅವರು 1987 ರಿಂದ 2016 ರವರೆಗೆ ನಿಲಂಬೂರ್‌ ಕ್ಷೇತ್ರವನ್ನು ನಿರಂತರವಾಗಿ ಗೆದ್ದಿದ್ದರು.

ಒಂಬತ್ತು ವರ್ಷಗಳ ಕಾಲ ಶಾಸಕರಾಗಿದ್ದ ಅನ್ವರ್, ಜನವರಿಯಲ್ಲಿ ರಾಜೀನಾಮೆ ನೀಡಿದ್ದರು. ಅವರು ಈ ಹಿಂದೆ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌ ಮೈತ್ರಿಕೂಟವನ್ನು ಬೆಂಬಲಿಸಿದ್ದರು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗಿನ ಭಿನ್ನಾಭಿಪ್ರಾಯದ ನಂತರ ಅವರು ಮೈತ್ರಿಕೂಟದಿಂದ ಹೊರಬಂದಿದ್ದರು.

ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್ ಜೊತೆಗೆ ಪ್ರಧಾನಿ ಮೋದಿ ಮಾತುಕತೆ; ಶಾಂತಿಗಾಗಿ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...