Homeಮುಖಪುಟಮುಂಬೈ: 60 ವರ್ಷದ ಕ್ಯಾನ್ಸರ್ ರೋಗಿಯನ್ನು ಕಸದ ರಾಶಿಯಲ್ಲಿ ಮಲಗಿಸಿದ ಮೊಮ್ಮಗ

ಮುಂಬೈ: 60 ವರ್ಷದ ಕ್ಯಾನ್ಸರ್ ರೋಗಿಯನ್ನು ಕಸದ ರಾಶಿಯಲ್ಲಿ ಮಲಗಿಸಿದ ಮೊಮ್ಮಗ

- Advertisement -
- Advertisement -

ಕಸದ ರಾಶಿಗಳ ಮೇಲೆ ವಯಸ್ಸಾದ ಮಹಿಳೆಯೊಬ್ಬರು ಬಿದ್ದಿರುವ ಆತಂಕಕಾರಿ ಪ್ರಕರಣವೊಂದು ಮುಂಬೈನಲ್ಲಿ ಬೆಳಕಿಗೆ ಬಂದಿದೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಮಹಿಳೆಯನ್ನು ಅವರ ಮೊಮ್ಮಗ ಕಸಕ್ಕೆ ಎಸೆದಿದ್ದಾನೆ ಎಂದು ಆರೋಪಿಸಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ನಗರದ ಆರೆ ಕಾಲೋನಿಯ ರಸ್ತೆಯಲ್ಲಿರುವ ಕಸದ ರಾಶಿಯ ಬಳಿ 60 ವರ್ಷದ ಯಶೋದಾ ಗಾಯಕ್ವಾಡ್ ಎಂಬ ಮಹಿಳೆಯನ್ನು ಮುಂಬೈ ಪೊಲೀಸರು ಶನಿವಾರ  ಅತ್ಯಂತ ದುರ್ಬಲ ಸ್ಥಿತಿಯಲ್ಲಿದ್ದಾಗ ಪತ್ತೆಹಚ್ಚಿದ್ದಾರೆ.

ತನಿಖೆಯ ನಂತರ, ತನ್ನ ಮೊಮ್ಮಗ ಆಕೆಯನ್ನು ಅಲ್ಲಿಯೇ ಬಿಟ್ಟು ಹೋಗಿರುವ ಕುರಿತು ಮಹಿಳೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಹಿಳೆ ಬೆಳಿಗ್ಗೆಯೇ  ಪತ್ತೆಯಾಗಿದ್ದರೂ, ಸಂಜೆ 5:30 ರ ಹೊತ್ತಿಗೆ ಪೊಲೀಸರು ಅವರನ್ನು ಆಸ್ಪತ್ರೆಗೆ ದಾಖಲಿಸಲು ಸಾಧ್ಯವಾಯಿತು. ಅವರ ಗಂಭೀರ ಸ್ಥಿತಿ ನೋಡಿದ ಹಲವಾರು ಆಸ್ಪತ್ರೆಗಳು ಆಸ್ಪತ್ರೆಗೆ ದಾಖಲಿಸಿಕೊಳ್ಳಲಿ ನಿರಾಕರಿಸಿದ ನಂತರ ಅವರನ್ನು ಕೂಪರ್ ಆಸ್ಪತ್ರೆಗೆ ದಾಖಲಿಸಲಾಯಿತು. ವೃದ್ದೆಯು ಚರ್ಮದ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ.

ವೃದ್ಧ ಮಹಿಳೆ ಎರಡು ವಿಳಾಸಗಳನ್ನು ಹಂಚಿಕೊಂಡಿದ್ದಾರೆ. ಒಂದು ಮಲಾಡ್‌, ಮತ್ತೊಂದು ಕಾಂಡಿವಲಿಯಲ್ಲಿ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಕುಟುಂಬದ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಸಂಬಂಧಿಕರನ್ನು ಪತ್ತೆಹಚ್ಚಲು ಆಕೆಯ ಚಿತ್ರವನ್ನು ಎಲ್ಲ ಪೊಲೀಸ್ ಠಾಣೆಗಳಲ್ಲಿ ಹಂಚಿಕೊಳ್ಳಲಾಗಿದೆ.

ರಾಜಕೀಯ ಮಾಡದೆ ಪಾರದರ್ಶಕ & ಪರಿಣಾಮಕಾರಿಯಾಗಿ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸಿ: ಸಚಿನ್ ಪೈಲಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...