Homeಕರ್ನಾಟಕ'ಬ್ರಾಂಡ್ ಬೆಂಗಳೂರಿನಲ್ಲಿ ಬಡವರಿಗೆ ಜಾಗವಿಲ್ಲವೆ' | ಬೀದಿ ಬದಿ ವ್ಯಾಪಾರಿಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಪ್ರತಿಭಟನೆ

‘ಬ್ರಾಂಡ್ ಬೆಂಗಳೂರಿನಲ್ಲಿ ಬಡವರಿಗೆ ಜಾಗವಿಲ್ಲವೆ’ | ಬೀದಿ ಬದಿ ವ್ಯಾಪಾರಿಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಪ್ರತಿಭಟನೆ

- Advertisement -
- Advertisement -

ಬೆಂಗಳೂರಿನ ಬೀದಿ ವ್ಯಾಪಾರಿಗಳು ಎದುರಿಸುತ್ತಿರುವ ಹಲವು ಸಮಸ್ಯೆಗಳ ಹಿನ್ನಲೆ, ವ್ಯಾಪಾರಿಗಳು ತಮ್ಮ ಹಕ್ಕಿಗಾಗಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಬೆಳಗ್ಗೆ 11ಕ್ಕೆ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಬ್ರಾಂಡ್ ಬೆಂಗಳೂರಿನಲ್ಲಿ ಬಡವರಿಗೆ ಜಾಗವಿಲ್ಲವೆ ಎಂದು ಪ್ರಶ್ನಿಸಿರುವ ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘ ಹೇಳಿದ್ದು, ಬೀದಿ ವ್ಯಾಪಾರಿಗಳ ಎತ್ತಂಗಡಿ ನಿಲ್ಲಿಸಿ ಎಂದು ಆಗ್ರಹಿಸಿದೆ. ಬೀದಿ ಬದಿ ವ್ಯಾಪಾರಿಗಳಿಂದ

“ಬೆಂಗಳೂರು ನಗರದ ಬೀದಿ ವ್ಯಾಪಾರಿಗಳು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ನಮ್ಮ ಹಕ್ಕಿಗಾಗಿ ದಿನಾಂಕ ಜೂನ್ 24ರ ಮಂಗಳವಾರ, ಫ್ರೀಡಂ ಪಾರ್ಕ್‌ನಲ್ಲಿ ಬೆಳಗ್ಗೆ 11ಕ್ಕೆ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಗರದ ಪ್ರಮುಖ ಮಾರುಕಟ್ಟೆಗಳಾದ ಕೆ.ಆರ್.ಮಾರುಕಟ್ಟೆ , ಜಯನಗರ ೪ ನೇ ಬಡಾವಣೆ , ವಿಜಯನಗರ , ಶಿವಾಜಿನಗರ, ಯೆಶವಂತಪುರ , ಗಾಂಧೀ ಬಜಾರ್ ಹಾಗು ಇನ್ನು ಹಲವು ಮಾರುಕಟ್ಟೆಗಳಿಂದ ಸಾವಿರಕ್ಕೂ ಹೆಚ್ಚು ವ್ಯಾಪಾರಿಗಳು ಮಂಗಳವಾರ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ” ಎಂದು ಬೀದಿ ವ್ಯಾಪಾರಿಗಳ ಸಂಘ ಹೇಳಿದೆ.

“ಕರ್ನಾಟಕದ ಆರ್ಥಿಕತೆಯಲ್ಲಿ ಬೀದಿಬದಿ ವ್ಯಾಪಾರಸ್ಥರು ಪ್ರಮುಖ ಕೊಡುಗೆಯನ್ನು ನೀಡುತ್ತಲೆ ಇದ್ದಾರೆ. ರೈತರಿಂದ, ಹೋಲ್‌ಸೇಲ್ ವಸ್ತುಗಳನ್ನು ಪಡೆದು ನಮ್ಮ ನಗರಗಳಲ್ಲಿ ಅಗತ್ಯ ವಸ್ತುಗಳು ಹಾಗೂ ಸೇವೆಯನ್ನು ಕೈಗೆಟಕುವ ಬೆಲೆಯಲ್ಲಿ ನೀಡುತ್ತಾ, ಬೀದಿ ವ್ಯಾಪಾರ ರಾಜ್ಯದ ಆರ್ಥಿಕ ಆರೋಗ್ಯದ ಜೊತೆಗೆ ಹೆಣೆದಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ರಾಜ್ಯ ಸರ್ಕಾರದ ನಡೆಯು ಬೀದಿ ಬದಿ ವ್ಯಾಪಾರಿಗಳ ಜೀವನೋಪಾಯಕ್ಕೆ ಧಕ್ಕೆಯನ್ನುಂಟು ಮಾಡಲು ಹೊರಟಿದೆ” ಎಂದು ಸಂಘ ಹೇಳಿದೆ.

“ಬೆಂಗಳೂರಿನ ಬೀದಿ ಬದಿ ವ್ಯಾಪಾರಿಗಳು ರಸ್ತೆ ಬದಿ / ಫುಟ್‌ಪಾತ್ ಮೇಲೆ ವ್ಯಾಪಾರ ಮಾಡಬಾರದು, ವೆಂಡಿಂಗ್ ಜೋನ್‌ನಲ್ಲಿ ಮಾತ್ರ ವ್ಯಾಪಾರ ಮಾಡಬೇಕು ಅಥವಾ ದಿನವಿಡೀ ಗಾಡಿಗಳನ್ನು ತಳ್ಳಿಕೊಂಡು ವ್ಯಾಪಾರ ಮಾಡಬೇಕು ಹಾಗೂ ಗುರುತಿನ ಚೀಟಿ ಇಲ್ಲದವರಿಗೆ ವ್ಯಾಪಾರ ಮಾಡಲು ಬಿಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮದಲ್ಲಿ ಹೇಳಿಕೆಯನ್ನು ನೀಡಿದ್ದಾರೆ” ಎಂದು ಸಂಘ ಹೇಳಿದೆ.

“ಫುಟ್ಪಾತ್ತ್ ಅಥವಾ ಬೀದಿ ಬದಿ ಬಿಟ್ಟು ಬೇರೆ ಯಾವ ಜಾಗದಲ್ಲಿ ವ್ಯಾಪಾರ ಮಾಡಲು ಸಾಧ್ಯ? ಇದು ಬೀದಿ ವ್ಯಾಪಾರಿಗಳ ಜೀವನೋಪಾಯದ ರಕ್ಷಣೆ ಹಾಗೂ ನಿಯಂತ್ರಣ ಕಾಯ್ದೆ, 2014ರ ಉಲ್ಲಂಘನೆ. ಈ ಹೇಳಿಕೆಯಿಂದ ಅಧಿಕಾರಿಗಳು ಬೀದಿ ವ್ಯಾಪಾರಿಗಳ ಮೇಲೆ ಹೇರುವ ಕಿರುಕುಳ ಹೆಚ್ಚಾಗಿದ್ದು, ಬೀದಿ ವ್ಯಾಪಾರಿಗಳು ಆತಂಕ್ಕೊಳಗಾಗಿದ್ದಾರೆ” ಎಂದು ಸಂಘವು ಹೇಳಿದೆ.

“ಅಕ್ಟೋಬರ್ 2024ರಿಂದ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಯನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಅದು ಫೆಬ್ರವರಿ 2025 ಮುಕ್ತಾಯಗೊಂಡಿದ್ದು, ಸುಮಾರು 34,000 ಬೀದಿ ವ್ಯಾಪಾರಿಗಳನ್ನು ಗುರುತಿಸಲಾಗಿದೆ ಮತ್ತು ಇತರೆ ಸಾವಿರಾರು ವ್ಯಾಪಾರಿಗಳನ್ನು ಸಮೀಕ್ಷೆಯಿಂದ ಸ್ವೀಕರಿಸಲಾಗದ ವಿವಿಧ ಕಾರಣಗಳಿಂದಾಗಿ ಹೊರಗಿಡಲಾಗಿದೆ. ಪಿ.ಎಂ-ಸ್ವಾನಿಧಿ ಸಾಲವನ್ನು 70,000ಕೂ ಹೆಚ್ಚು ಜನರಿಗೆ ನೀಡಿಲಾಗಿದ್ದು, ಕನಿಷ್ಠ 70,000 ಬೀದಿ ವ್ಯಾಪಾರಿಗಳು ಸಮೀಕ್ಷೆಯಲ್ಲಿ ಒಳಗೊಂಡಿರಬೇಕಲ್ಲವೇ?” ಎಂದು ಸಂಘವು ಪ್ರಶ್ನಿಸಿದೆ.

“ಬೆಂಗಳೂರಿನಲ್ಲಿ 1.5 ಲಕ್ಷಕ್ಕೂ ಹೆಚ್ಚು ಜನ ಬೀದಿ ವ್ಯಾಪಾರದ ಮೇಲೆ ಅವಲಂಬಿತರಾಗಿದ್ದು, ಸಮೀಕ್ಷೆಯಲ್ಲಿ ಒಳಗೊಳ್ಳದ ಬೀದಿ ವ್ಯಾಪಾರಿಗಳು ಯಾವುದೇ ರೀತಿಯ ಕಾನೂನಿನ ರಕ್ಷಣೆ ಇಲ್ಲದಂತೆ ಬೇಕು ಅಂತಲೇ ಹೊರದಬ್ಬಲಾಗಿದೆ. ಜೊತೆಗೆ ಸಮೀಕ್ಷೆಯಲ್ಲಿ ಒಳಗೊಂಡ ವ್ಯಾಪಾರಿಗಳಿಗೆ ಇದುವರೆಗೂ ಗುರುತಿನ ಚೀಟಿ ಅಥವಾ ವ್ಯಾಪಾರದ ಪ್ರಮಾಣ ಪತ್ರವನ್ನು ವಿತರಿಸಿರುವುದಿಲ್ಲ” ಎಂದು ಸಂಘವು ಹೇಳಿದೆ.

ಅಷ್ಟೆ ಅಲ್ಲದೆ, ಚರ್ಚ್ ಸ್ಟ್ರೀಟ್‌ನಲ್ಲಿ ಕಳೆದ ವಾರ ಬಿಬಿಎಂಪಿ ಅಧಿಕಾರಿಗಳು ಕಾನೂನು ಬಾಹಿರವಾಗಿ ಬೀದಿ ವ್ಯಾಪಾರಿಗಳ ಸರಕನ್ನು ವಶಪಡಿಸಿಕೊಂಡು ಇನ್ನು ಸಹ ಹಿಂತಿರಿಗಿಸಿಲ್ಲ ಎಂದು ಸಂಘವು ಹೇಳಿದ್ದು, ಜಯನಗರ ೯ ನೇ ಬಡಾವಣೆ ಹಾಗು ಸಾರಕ್ಕಿ ಮಾರುಕಟ್ಟೆಯಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ವ್ಯಾಪಾರಿಗಳ ಸಾವಿರಾರು ರೂಪಾಯಿ ಮೊತ್ತದ ಹಣ್ಣನ್ನು ಕದ್ದಿದ್ದಾರೆ ಎಂದು ಹೇಳಿದೆ.

ಹಲವಾರು ಮಾರುಕಟ್ಟೆಗಳಲ್ಲಿ ಶೌಚಾಲಯ, ನೀರು, ಬೆಳಕು ಮುಂತಾದ ಮೂಲಸೌಕರ್ಯವಿಲ್ಲ. ಬೀದಿ ವ್ಯಾಪಾರಿಗಳಿಗೆ ಯಾವುದೇ ಸಾಮಾಜಿಕ ಭದ್ರತೆಯಿಲ್ಲ ಎಂದು ಸಂಘವು ಬೇಸರ ವ್ಯಕ್ತಪಡಿಸಿದೆ. ಈ ಹಿನ್ನಲೆಯಲ್ಲಿ ವ್ಯಾಪಾರಿಗಳ ಘನತೆಗಾಗಿ, ಬೀದಿ ವ್ಯಾಪಾರದ ಹಕ್ಕಿಗಾಗಿ, ಮಾರುಕಟ್ಟೆಗಳಲ್ಲಿ ಮೂಲಭೂತ ಸೌಕರ್ಯಕ್ಕಾಗಿ, ಸಾಮಾಜಿಕ ಭಾದ್ರತೆಗಾಗಿ ಈ ಹೋರಾಟವನ್ನು ನಡೆಸುತ್ತಿರುವುದಾಗಿ ಬೀದಿಬದಿ ವ್ಯಾಪಾರಿಗಳ ಸಂಘವು ಹೇಳಿದೆ. ಬೀದಿ ಬದಿ ವ್ಯಾಪಾರಿಗಳಿಂದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕಳ್ಳತನದ ಆರೋಪ; 10 ವರ್ಷದ ಬುಡಕಟ್ಟು ಬಾಲಕಿಗೆ ಬಿಸಿ ಕಬ್ಬಿಣದಿಂದ ಬರೆ

ಕಳ್ಳತನದ ಆರೋಪ; 10 ವರ್ಷದ ಬುಡಕಟ್ಟು ಬಾಲಕಿಗೆ ಬಿಸಿ ಕಬ್ಬಿಣದಿಂದ ಬರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...