Homeಅಂತರಾಷ್ಟ್ರೀಯLatest Update: ಕದನ ವಿರಾಮಕ್ಕೆ ಒಪ್ಪಿಕೊಂಡ ಇರಾನ್-ಇಸ್ರೇಲ್; ವರದಿ

Latest Update: ಕದನ ವಿರಾಮಕ್ಕೆ ಒಪ್ಪಿಕೊಂಡ ಇರಾನ್-ಇಸ್ರೇಲ್; ವರದಿ

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಸ್ತಾಪಿಸಿದ್ದ ಕದನ ವಿರಾಮವನ್ನು ಇಸ್ರೇಲ್ ಮತ್ತು ಇರಾನ್ ಒಪ್ಪಿಕೊಂಡಿವೆ ಎಂದು ಇತ್ತೀಚಿನ ವರದಿಗಳು ಹೇಳಿವೆ.

ಟ್ರಂಪ್ ಅವರ ಕದನ ವಿರಾಮ ಪ್ರಸ್ತಾವವನ್ನು ಇಸ್ರೇಲ್ ಒಪ್ಪಿಕೊಂಡಿದೆ ಎಂದು ಅಲ್ಲಿನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಂಗಳವಾರ ಬೆಳಿಗ್ಗೆ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದಕ್ಕೂ ಮುನ್ನ, ಇರಾನ್‌ನಲ್ಲಿ ಕದನ ವಿರಾಮ ಪ್ರಾರಂಭಗೊಂಡಿದೆ ಎಂಬುವುದಾಗಿ ಅಲ್ಲಿನ ಟಿವಿ ಮಾಧ್ಯಮಗಳು ವರದಿ ಮಾಡಿವೆ ಎಂದು ಅಲ್‌-ಜಝೀರಾ ಸುದ್ದಿ ಸಂಸ್ಥೆ ತಿಳಿಸಿದೆ.

ಟ್ರಂಪ್ ಅವರ ಸಮನ್ವಯದೊಂದಿಗೆ ಇಸ್ರೇಲ್ ಇರಾನ್‌ನೊಂದಿಗೆ ದ್ವಿಪಕ್ಷೀಯ ಮಾತುಕತೆಗೆ ಒಪ್ಪಿಕೊಂಡಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾಗಿ ಇತರ ಕೆಲ ಮಾಧ್ಯಮ ವರದಿಗಳು ಹೇಳಿವೆ.

ಇಸ್ರೇಲ್ ಮತ್ತು ಇರಾನ್ ಪೂರ್ಣ ಕದನ ವಿರಾಮ ಒಪ್ಪಂದ ಮಾಡಿಕೊಂಡಿವೆ ಎಂದು ಇಂದು (ಮಂಗಳವಾರ) ಮುಂಜಾನೆ ಟ್ರಂಪ್ ಘೋಷಣೆ ಮಾಡಿದ್ದರು. ಆದರೆ, ಅದನ್ನು ಇರಾನ್ ಅಲ್ಲಗಳೆದಿತ್ತು.

“ಇಸ್ರೇಲ್ ದಾಳಿ ಪ್ರಾರಂಭಿಸಿದೆ. ಅದು ನಿಲ್ಲಿಸುವವರೆಗೆ ನಾವು ನಿಲ್ಲಿಸುವುದಿಲ್ಲ. ನಾವು ಕೊನೆವರೆಗೆ ಹೋರಾಡುತ್ತೇವೆ. ಯಾರಿಗೂ ಶರಣಾಗಲ್ಲ” ಎಂದು ಇರಾನ್ ವಿದೇಶಾಂಗ ಸಚಿವ ಹೇಳಿದ್ದರು.

ಟ್ರಂಪ್ ಕದನ ವಿರಾಮ ಘೋಷಣೆಯ ಬಳಿಕ, ಇರಾನ್ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ನಾಲ್ವರು ಸಾವನ್ನಪ್ಪಿದ್ದಾರೆ.

“ಮಧ್ಯಪ್ರಾಚ್ಯದಲ್ಲಿ ವ್ಯಾಪಕ ಸಂಘರ್ಷದ ಭೀತಿಯನ್ನು ಹುಟ್ಟುಹಾಕಿದ್ದ 12 ದಿನಗಳ ಭೀಕರ ಯುದ್ಧದ ನಂತರ, ಇಸ್ರೇಲ್ ಮತ್ತು ಇರಾನ್ ನಡುವೆ ಈಗ ಕದನ ವಿರಾಮ ಜಾರಿಯಾಗಿದೆ. ಎರಡೂ ರಾಷ್ಟ್ರಗಳು ಇದನ್ನು ಉಲ್ಲಂಘಿಸಬಾರದು” ಎಂದು ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ.

ಸೋಮವಾರ ರಾತ್ರಿ ಕತಾರ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿತ್ತು. ಕಳೆದ ಭಾನುವಾರ ಅಮೆರಿಕ ತನ್ನ ಪರಮಾಣು ನೆಲೆಗಳ ಮೇಲೆ ನಡೆಸಿದ ದಾಳಿಗೆ ಇರಾನ್‌ ಪ್ರತೀಕಾರ ತೀರಿಸಿಕೊಂಡಿದೆ ಎಂದು ವರದಿಗಳು ಹೇಳಿವೆ.

Latest Update | ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ನಡೆಸಿದ ಇರಾನ್: ಮೂವರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...