Homeಮುಖಪುಟಪಾಕಿಸ್ತಾನಕ್ಕೆ ಗಡಿಪಾರು ಮಾಡಲಾಗಿರುವ ಮಹಿಳೆಯನ್ನು ಮರಳಿ ಕರೆತರುವಂತೆ ಕೇಂದ್ರಕ್ಕೆ ಕೋರ್ಟ್ ಆದೇಶ

ಪಾಕಿಸ್ತಾನಕ್ಕೆ ಗಡಿಪಾರು ಮಾಡಲಾಗಿರುವ ಮಹಿಳೆಯನ್ನು ಮರಳಿ ಕರೆತರುವಂತೆ ಕೇಂದ್ರಕ್ಕೆ ಕೋರ್ಟ್ ಆದೇಶ

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನಕ್ಕೆ ಗಡಿಪಾರು ಮಾಡಲ್ಪಟ್ಟ 63 ವರ್ಷದ ಮಹಿಳೆಯನ್ನು ಭಾರತಕ್ಕೆ ಮರಳಿ ಕರೆತರುವಂತೆ ಜಮ್ಮು ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್ ಕೇಂದ್ರ ಗೃಹ ಸಚಿವಾಲಯಕ್ಕೆ ನಿರ್ದೇಶನ ನೀಡಿದೆ.

ಮಹಿಳೆ ಸುಮಾರು ನಾಲ್ಕು ದಶಕಗಳಿಂದ ಭಾರತದಲ್ಲಿ ವಾಸಿಸುತ್ತಿದ್ದು, ದೀರ್ಘಾವಧಿಯ ವೀಸಾ (ಎಲ್‌ಟಿವಿ) ಹೊಂದಿರುವುದರಿಂದ, ಪ್ರಕರಣದ ‘ಸತ್ಯಗಳು ಮತ್ತು ಸನ್ನಿವೇಶಗಳ ಅಸಾಧಾರಣ ಸ್ವರೂಪ’ವನ್ನು ಗಮನಿಸಿ ಹೈಕೋರ್ಟ್ ಈ ಆದೇಶ ನೀಡಿದೆ ಎಂದು livelaw.in ವರದಿ ಮಾಡಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಕೇಂದ್ರ ಸರ್ಕಾರ ಭಾರತದಲ್ಲಿ ವಾಸಿಸುತ್ತಿದ್ದ ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ಸೇವೆ ಸ್ಥಗಿತಗೊಳಿಸಿ, ಅವರು ಏಪ್ರಿಲ್ 27ರೊಳಗೆ ಭಾರತ ತೊರೆಯುವಂತೆ ಆದೇಶಿಸಿತ್ತು. ಗಡುವು ಮುಗಿದ ಹಿನ್ನೆಲೆಯಲ್ಲಿ ಹಲವು ಪಾಕಿಸ್ತಾನಿ ಪ್ರಜೆಗಳನ್ನು ಅಧಿಕಾರಿಗಳು ಗಡಿಪಾರು ಮಾಡಿದ್ದರು.

ಹಾಗೆ, ಗಡಿಪಾರದವರಲ್ಲಿ ರಕ್ಷಂದಾ ರಶೀದ್ ಕೂಡ ಒಬ್ಬರು. ತನ್ನ ಪತಿ ಮತ್ತು ಇಬ್ಬರು ಮಕ್ಕಳೊಂದಿಗೆ ಜಮ್ಮುವಿನಲ್ಲಿ ವಾಸಿಸುತ್ತಿದ್ದ ಮಹಿಳೆ ಗಡಿಪಾರು ಬಳಿಕ ಲಾಹೋರ್‌ನ ಹೋಟೆಲ್‌ನಲ್ಲಿ ಉಳಿಯುವಂತಾಗಿದೆ. ಏಪ್ರಿಲ್ 30ರಂದು ಅವರನ್ನು ಗಡಿಪಾರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಅದೇ ದಿನ ರಕ್ಷಂದಾ ರಶೀದ್ ಹೈಕೋರ್ಟ್ ಮೊರೆ ಹೋಗಿದ್ದರು.

ತಮ್ಮ ಪತ್ನಿಗೆ ಪಾಕಿಸ್ತಾನದಲ್ಲಿ ಯಾರೂ ಬಂಧುಗಳಿಲ್ಲ. ಅಲ್ಲದೆ ಆಕೆ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದು ಅಕೆಯ ಜೀವಕ್ಕೆ ಸಂಚಕಾರ ಇದೆ ಎಂದು ರಕ್ಷಂದಾ ಅವರ ಪತಿ ಶೇಖ್ ಜಹೂರ್ ಅಹ್ಮದ್ ಅವರು ನ್ಯಾಯಮೂರ್ತಿ ರಾಹುಲ್ ಭಾರ್ತಿ ಅವರೆದುರು ವಾದಿಸಿದ್ದರು.

ಅರ್ಹತೆಯ ಆಧಾರದಲ್ಲಿ ಪ್ರಕರಣವನ್ನು ಇನ್ನಷ್ಟೇ ಆಲಿಸಬೇಕಿದ್ದು, ಸಾಂವಿಧಾನಿಕ ನ್ಯಾಯಾಲಯವಾಗಿ ತಾನು ಕೆಲವೊಮ್ಮೆ ಮಾನವೀಯ ನೆಲೆಯಲ್ಲಿ ಮಧ್ಯಪ್ರವೇಶಿಸಬೇಕಾಗುತ್ತದೆ ಎಂದು ಹೈಕೋರ್ಟ್‌ ಜೂನ್‌ 6ರಂದು ಹೊರಡಿಸಿದ ಆದೇಶದಲ್ಲಿ ತಿಳಿಸಿದೆ. ದೀರ್ಘಾವಧಿ ವೀಸಾ ಪಡೆದಿರುವ ರಕ್ಷಂದಾ ಅವರನ್ನು ಗಡಿಪಾರು ಮಾಡುವ ಅಗತ್ಯವಿರಲಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಆದೇಶ ಹೊರಡಿಸಿದ ದಿನಾಂಕದಿಂದ (ಜೂನ್ 6) ಹತ್ತು ದಿನಗಳ ಒಳಗೆ, ಅದನ್ನು ಪಾಲಿಸುವಂತೆ ಹೈಕೋರ್ಟ್ ನಿರ್ದೇಶಿಸಿದೆ. ಆದೇಶ ಪಾಲನೆ ವರದಿ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಜುಲೈ 1ಕ್ಕೆ ಮುಂದೂಡಿದೆ.

ರಕ್ಷಾಂದ ರಶೀದ್ ಅವರ ಪರವಾಗಿ ಮಗಳು ಫಲಕ್ ಜಹೂರ್ ಮೂಲಕ ಸಲ್ಲಿಸಲಾದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ರಾಹುಲ್ ಭಾರ್ತಿ ಆದೇಶ ನೀಡಿದ್ದಾರೆ.

ಎಲ್ಲರೊಂದಿಗೆ ಮಾತುಕತೆ ನಡೆಸಿ ತ್ರಿಭಾಷಾ ಸೂತ್ರದ ಬಗ್ಗೆ ಅಂತಿಮ ನಿರ್ಧಾರ: ಮಹಾರಾಷ್ಟ್ರ ಸಿಎಂ ಫಡ್ನವೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...