Homeಕರ್ನಾಟಕಎಂ.ಬಿ‌ ಪಾಟೀಲ್ ಹೇಳಿಕೆ ಒಡೆದಾಳುವ ತಂತ್ರ, ಭೂ ಸ್ವಾಧೀನ ಸಂಪೂರ್ಣ ರದ್ದಾಗದೆ ಹೋರಾಟ ನಿಲ್ಲುವುದಿಲ್ಲ: ಸಂಯುಕ್ತ...

ಎಂ.ಬಿ‌ ಪಾಟೀಲ್ ಹೇಳಿಕೆ ಒಡೆದಾಳುವ ತಂತ್ರ, ಭೂ ಸ್ವಾಧೀನ ಸಂಪೂರ್ಣ ರದ್ದಾಗದೆ ಹೋರಾಟ ನಿಲ್ಲುವುದಿಲ್ಲ: ಸಂಯುಕ್ತ ಹೋರಾಟ

- Advertisement -
- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆ ಚನ್ನರಾಯಪಟ್ಟಣ ಹೋಬಳಿಯ ಹದಿಮೂರು ಹಳ್ಳಿಗಳ ಪೈಕಿ 3 ಹಳ್ಳಿಗಳ 500 ಎಕರೆ ಭೂಮಿಯನ್ನು ಭೂ ಸ್ವಾಧೀನದಿಂದ ಕೈ ಬಿಡುತ್ತೇವೆ ಎಂಬ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅವರ ಹೇಳಿಕೆಯನ್ನು ಸಂಯುಕ್ತ ಹೋರಾಟ ಕರ್ನಾಟಕ ಹಾಗೂ ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ಸಂಪೂರ್ಣವಾಗಿ ತಿರಸ್ಕರಿಸಿದೆ.

ನಾಳೆ (ಜೂನ್‌ 25) ‘ದೇವನಹಳ್ಳಿ ಚಲೋ’ ಹೋರಾಟ ದೊಡ್ಡ ಮಟ್ಟದಲ್ಲಿ ನಡೆಯಲಿದೆ ಎಂದು ಸ್ಪಷ್ಟಪಡಿಸಿದೆ.

ಇಂದು (ಜೂ.24) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಎಂ.ಬಿ ಪಾಟೀಲ್ “ಮೂರು ಹಳ್ಳಿಗಳ 500 ಎಕರೆ ಭೂಮಿಯನ್ನು ಭೂ ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿದ್ದೇವೆ. ಇನ್ನು ಮುಂದೆ ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೈಗಾರಿಕೆ ಸಲುವಾಗಿ ಭೂಸ್ವಾಧೀನ ಮಾಡುವುದಿಲ್ಲ. ಆದ್ದರಿಂದ ರೈತರು ದಯವಿಟ್ಟು ಹೋರಾಟ ಕೈಬಿಟ್ಟು ಸರ್ಕಾರದೊಂದಿಗೆ ಸಹಕರಿಸಿ” ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸಂಯುಕ್ತ ಹೋರಾಟ ಕರ್ನಾಟಕ ಹಾಗೂ ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ “ಹೋರಾಟದ ದಿಕ್ಕು ತಪ್ಪಿಸಲು ರಾಜ್ಯ ಸರ್ಕಾರ ಒಡೆದು ಆಳುವ ತಂತ್ರವನ್ನು ಅನುಸರಿಸುತ್ತಿದೆ” ಎಂದಿದೆ.

ಚನ್ನರಾಯಪಟ್ಟಣ ಹೋಬಳಿಯ ಭೂ ಸ್ವಾಧೀನವು ಕರಾಳ ಕೆಎಐಡಿಬಿ ಭೂ ಸ್ವಾಧೀನ ನೀತಿ ಪ್ರಕಾರ ನಡೆಸಲಾಗುತ್ತಿದೆ. ಇಂತಹ ಅನ್ಯಾಯದ ಭೂ ಸ್ವಾಧೀನವು, ಭೂ ಸ್ವಾಧೀನ ಕಾಯ್ದೆ, 2013ಕ್ಕೆ ವಿರುದ್ದವಾಗಿದೆ. ಈ ಹಿಂದಿನ ಬಿಜೆಪಿ ಸರ್ಕಾರ ರೈತರ ವಿರೋಧ ಧಿಕ್ಕರಿಸಿ ಭೂ ಸ್ವಾಧೀನಕ್ಕೆ ಪ್ರಾಥಮಿಕ ಅಧಿಸೂಚನೆ ಹೊರಡಿಸಿತ್ತು. ಇದನ್ನು ವಿರೋಧಿಸಿ ರೈತರು ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದ್ದಾರೆ.  ಬಿಜೆಪಿ ಅವಧಿಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಧರಣಿ ಸ್ಥಳಕ್ಕೆ ಭೇಟಿ ನೀಡಿದ್ದರು. ನಾವು ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಭೂ ಸ್ವಾಧೀನ ಅಧಿಸೂಚನೆ ರದ್ದುಪಡಿಸುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ, ಈಗ ಭೂ ಸ್ವಾಧೀನಕ್ಕೆ ಹಠಮಾರಿ ಧೋರಣೆ ಅನುಸರಿಸುತ್ತಾ ಒಡೆದು ಆಳುವ ತಂತ್ರವನ್ನು ಅನುಸರಿಸುತ್ತಿದ್ದಾರೆ. ಈ ಕುಟಿಲ ತಂತ್ರದಿಂದ ರೈತ ಹೋರಾಟ ಬಗ್ಗು ಬಡಿಯಲು ಸಾಧ್ಯವಿಲ್ಲ ಎಂದು ಹೇಳಿದೆ.

ನಾಳೆ ದೇವನಹಳ್ಳಿ ತಹಶೀಲ್ದಾರ್ ಕಛೇರಿ ಎದುರು ನಡೆಯಲಿರುವ ಭೂ ಸ್ವಾಧೀನ ವಿರೋಧಿ ಹೋರಾಟಕ್ಕೆ ಎಲ್ಲಾ ರೈತರು, ಕಾರ್ಮಿಕರು ವಿದ್ಯಾರ್ಥಿಗಳು, ಯುವಜನರು, ಮಹಿಳೆಯರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡುತ್ತೇವೆ ಎಂದಿದೆ.

ಶೇಕಡಾ 90ಕ್ಕಿಂತ ಹೆಚ್ಚು ರೈತರು ವಿರೋಧ ದಾಖಲಿಸಿರುವ ಈ ಅನ್ಯಾಯದ ಭೂಸ್ವಾಧೀನ ಮಾಡಿಕೊಳ್ಳಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಮುಖ್ಯಮಂತ್ರಿಗಳು ತಮ್ಮ ಭರವಸೆಯಂತೆ ನಡೆದುಕೊಳ್ಳಬೇಕು ಎಂದು ಸಂಯುಕ್ತ ಹೋರಾಟ ಕರ್ನಾಟಕ ಮತ್ತು ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಆಗ್ರಹಿಸಿದೆ.

LIVE UPDATES | ‘ದೇವನಹಳ್ಳಿ ಚಲೋ’; ರೈತರ ಹೋರಾಟಕ್ಕೆ ರಂಗಕರ್ಮಿ ಮಹೇಶ್ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...