Homeಮುಖಪುಟಮಹಾರಾಷ್ಟ್ರ ಚುನಾವಣೆ: ರಾಹುಲ್ ಗಾಂಧಿಯಿಂದ 'ಮತ ಕಳ್ಳತನ'ದ ಆರೋಪ: ಮೆಷಿನ್-ರೀಡೆಬಲ್ ಡಿಜಿಟಲ್ ಮತದಾರರ ಪಟ್ಟಿ ಬಿಡುಗಡೆಗೆ...

ಮಹಾರಾಷ್ಟ್ರ ಚುನಾವಣೆ: ರಾಹುಲ್ ಗಾಂಧಿಯಿಂದ ‘ಮತ ಕಳ್ಳತನ’ದ ಆರೋಪ: ಮೆಷಿನ್-ರೀಡೆಬಲ್ ಡಿಜಿಟಲ್ ಮತದಾರರ ಪಟ್ಟಿ ಬಿಡುಗಡೆಗೆ ಆಗ್ರಹ

- Advertisement -
- Advertisement -

ಹೊಸದಿಲ್ಲಿ: ಮಹಾರಾಷ್ಟ್ರ ಚುನಾವಣೆಯಲ್ಲಿ “ಮತ ಕಳ್ಳತನ” ನಡೆದಿದ್ದು, ಇದನ್ನು ಚುನಾವಣಾ ಆಯೋಗವು  “ಮುಚ್ಚಿಹಾಕುತ್ತಿದೆ”. ಆಯೋಗವು ಚುನಾವಣೆಗೆ ಸಂಬಂಧಿಸಿ ಮೆಷಿನ್-ರೀಡೆಬಲ್ ಡಿಜಿಟಲ್ ಮತದಾರರ ಪಟ್ಟಿಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಇಂದು ಎಕ್ಸ್ ಖಾತೆಯಲ್ಲಿ ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಕ್ಷೇತ್ರದಲ್ಲಿ ಮತದಾರರ ಸೇರ್ಪಡೆ ಸಂದರ್ಭದಲ್ಲಿ ಕಡ್ಡಾಯ ಪರಿಶೀಲನೆ ನಡೆಸಲಾಗಿಲ್ಲ. ಅಲ್ಲದೇ ಆರು ತಿಂಗಳ ಅವಧಿಯಲ್ಲಿ ಸುಮಾರು 29,000 ಮತದಾರರನ್ನು ಸೇರಿಸಲಾಗಿದೆ ಎಂದು ವರದಿಯೊಂದು ಸೂಚಿಸಿದ ನಂತರ ರಾಹುಲ್ ಗಾಂಧಿಯವರು ಈ ಹೇಳಿಕೆ ನೀಡಿದ್ದಾರೆ.  

ಮಹಾರಾಷ್ಟ್ರ ಚುನಾವಣೆಗಳ ಮೊದಲು 2024ರ ನಂತರದ ಕರಡು ಮತದಾರರ ಪಟ್ಟಿಗಳ ಪ್ರತಿಗಳನ್ನು ಕಾಂಗ್ರೆಸ್ ಸೇರಿದಂತೆ ಎಲ್ಲಾ ಪಕ್ಷಗಳಿಗೆ ನೀಡಲಾಗಿದೆ ಎಂದು ಮಹಾರಾಷ್ಟ್ರದ ಮುಖ್ಯ ಚುನಾವಣಾ ಅಧಿಕಾರಿ ಹೇಳಿದ್ದಾರೆ.

ಕರಡು ಮತ್ತು ಅಂತಿಮ ಮತದಾರರ ಪಟ್ಟಿಗಳ ಪ್ರಕಟಣೆಯ ನಡುವೆ 19,27,508ರಷ್ಟು ಆಕ್ಷೇಪಣೆಗಳನ್ನು ಸ್ವೀಕರಿಸಲಾಗಿದೆ. ತಪ್ಪಾದ ಸೇರ್ಪಡೆಗಳು ಅಥವಾ ಅಳಿಸುವಿಕೆ ಕುರಿತು ಕೇವಲ 89 ಮನವಿಗಳನ್ನು ಮಾತ್ರ ಸ್ವೀಕರಿಸಲಾಗಿದೆ ಎಂದು ಚುನಾವಣಾ ಅಧಿಕಾರಿ ಮಾಹಿತಿ ನೀಡಿದರು. 

ರಾಹುಲ್ ಮತದಾರರ ಪಟ್ಟಿಗಾಗಿ “ಸಂಪೂರ್ಣ ಪಾರದರ್ಶಕತೆ” ಗಾಗಿ ಪದೇ ಪದೇ ಒತ್ತಾಯಿಸಿದ್ದಾರೆ. ಆದರೆ ಚುನಾವಣಾ ಆಯೋಗವು ಮೆಷಿನ್-ರೀಡೆಬಲ್ ಮತದಾರರ ಪಟ್ಟಿಗಳನ್ನು ಬಹಿರಂಗಪಡಿಸಲು ನಿರಾಕರಿಸುತ್ತಿದೆ ಎಂದು ಅವರು ಹೇಳಿದರು.

ನಮ್ಮ ಚುನಾವಣಾ ವ್ಯವಸ್ಥೆಯ ಸಮಗ್ರತೆಯು ಅಧಃಪತನಕ್ಕೆ ತಲುಪಿದೆ. ಇದನ್ನು ಆಡಳಿತ ಪಕ್ಷದ ನಾಯಕರು ಅದನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇದು ಮ್ಯಾಚ್ ಫಿಕ್ಸಿಂಗ್ ಅಲ್ಲವಲ್ಲದೆ ಇನ್ನೇನು? ಎಂದು ಅವರು ಪ್ರಶ್ನಿಸಿದರು.

ನ್ಯೂಸ್‌ಲಾಂಡ್ರಿ ತನ್ನ ವರದಿಯಲ್ಲಿ ನಾಗ್ಪುರ ನೈಋತ್ಯ ಕ್ಷೇತ್ರದಲ್ಲಿ ಆರು ತಿಂಗಳಲ್ಲಿ 29,219 ಹೊಸ ಮತದಾರರನ್ನು ಸೇರಿಸಲಾಗಿದೆ ಎಂದು ಹೇಳಿದೆ. ಇದು 8.25%ರಷ್ಟು ಹೆಚ್ಚಳವಾಗಿದೆ. ಇದು ಕಡ್ಡಾಯ  ಪರಿಶೀಲನೆಗಳಿಗೆ ಚುನಾವಣಾ ಆಯೋಗವು ನಿಗದಿಪಡಿಸಿದ 4% ಹೆಚ್ಚಳದ ಮಿತಿಗಿಂತ ಹೆಚ್ಚಾಗಿದೆ. ಹಲವಾರು ಮತಗಟ್ಟೆಗಳಲ್ಲಿ ಪರಿಶೀಲನೆಗಳನ್ನು ಮಾಡಲಾಗಿಲ್ಲ ಎಂದು ವರದಿ ಹೇಳಿದೆ.

ಕನಿಷ್ಠ 4,000 ಮತದಾರರಿಗೆ ವಿಳಾಸಗಳಿಲ್ಲ ಎಂದು ವರದಿ ಹೇಳಿದೆ. 70% ಮತಗಟ್ಟೆಗಳಲ್ಲಿ 4%ಕ್ಕಿಂತ ಹೆಚ್ಚು ಮತ ಸೇರ್ಪಡೆಗಳಿದ್ದರೆ, 26 ಮತಗಟ್ಟೆಗಳಲ್ಲಿ 20%ಕ್ಕಿಂತ ಹೆಚ್ಚು ಮತ್ತು ನಾಲ್ಕು ಮತಗಟ್ಟೆಗಳಲ್ಲಿ 40%ಕ್ಕಿಂತ ಹೆಚ್ಚು ಸೇರ್ಪಡೆಗಳಿವೆ ಎಂದು ಅದು ಹೇಳಿದೆ. ಚುನಾವಣಾ ಆಯೋಗವು ಈ ಹೇಳಿಕೆಗಳನ್ನು ನಿರಾಕರಿಸಿದೆ.

ಆಂಧ್ರ: ದಲಿತ ಪ್ರಾಧ್ಯಾಪಕನ ಕುರ್ಚಿ ತೆಗೆದು ನೆಲದ ಮೇಲೆ ಕೂರಿಸಿದ ಪ್ರಿನ್ಸಿಪಾಲ್; ವ್ಯಾಪಕ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...