Homeಮುಖಪುಟವಿಡಿಯೋ ನೋಡಿ: ರಾಹುಲ್ ಗಾಂಧಿ ಭಾಷಣವನ್ನು ಅನುವಾದಿಸಿ ಚಪ್ಪಾಳೆ ಗಿಟ್ಟಿಸಿದ 12 ನೇ ತರಗತಿಯ ಸರ್ಕಾರಿ...

ವಿಡಿಯೋ ನೋಡಿ: ರಾಹುಲ್ ಗಾಂಧಿ ಭಾಷಣವನ್ನು ಅನುವಾದಿಸಿ ಚಪ್ಪಾಳೆ ಗಿಟ್ಟಿಸಿದ 12 ನೇ ತರಗತಿಯ ಸರ್ಕಾರಿ ಶಾಲೆಯ ಹುಡುಗಿ

ರಾಹುಲ್‌ ಗಾಂಧಿಯವರು "ಉತ್ತಮ ಭಾಷಾಂತರವನ್ನು ಮಾಡಿದ್ದಕ್ಕಾಗಿ" ಸಫಾಗೆ ಧನ್ಯವಾದ ಅರ್ಪಿಸಿದರು. ರೋಮಾಂಚನಗೊಂಡ ವಿದ್ಯಾರ್ಥಿನಿಯು ಇದು ತನ್ನ ಜೀವನದ ಅತ್ಯುತ್ತಮ ಕ್ಷಣ ಎಂದಿದ್ದಾಳೆ.

- Advertisement -
- Advertisement -

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಗುರುವಾರ ತಮ್ಮ ಸಂಸದೀಯ ಕ್ಷೇತ್ರವಾದ ಕೇರಳದ ವಯನಾಡಿನ ಶಾಲೆಯೊಂದರಲ್ಲಿ ವಿಜ್ಞಾನ ಪ್ರಯೋಗಾಲಯವನ್ನು ಉದ್ಘಾಟಿಸಿದರು. ಆಗ ಅವರು ನನ್ನ ಭಾಷಣವನ್ನುಇಂಗ್ಲಿಷ್‌ನಿಂದ ಮಲಯಾಳಂಗೆ ಅನುವಾದಿಸಲು ಯಾರಾದರೂ ಸಿದ್ಧರಿದ್ದೀರಾ? ಎಂದು ವಿದ್ಯಾರ್ಥಿಗಳಲ್ಲಿ ಪ್ರಶ್ನಿಸಿದರು. ಅವರ ಎಂದಿನ ಭಾಷಾಂತರಕಾರರಾಗಿದ್ದ ಪಕ್ಷದ ಮುಖಂಡ ಕೆ.ಸಿ.ವೇಣುಗೋಪಾಲ್ ನಗುತ್ತಾ ಕುಳಿತಿದ್ದರು.

ಎಲ್ಲರೂ ಆಶ್ಚರ್ಯಚಕಿತರಾಗಿ ನೋಡುತ್ತಿದ್ದರೆ, ಸರ್ಕಾರಿ ಶಾಲೆಯಲ್ಲಿ 12 ನೇ ತರಗತಿ ಕಲಿಯುತ್ತಿರುವ ವಿದ್ಯಾರ್ಥಿನಿ ಸಫಾ ಸೆಬಿನ್ ಎದ್ದು ವೇದಿಕೆಯಲ್ಲಿದ್ದ ರಾಹುಲ್‌ ಗಾಂಧಿಯತ್ತ ಹೆಜ್ಜೆ ಹಾಕಿದಳು. ಎಲ್ಲರೂ ಜೋರಾಗಿ ಚಪ್ಪಾಳೆ ತಟ್ಟಿ ಆಕೆಯನ್ನು ಸ್ವಾಗತಿಸಿದರು.

ಅವಳು ವೇದಿಕೆಯನ್ನು ತಲುಪಿ ರಾಹಲ್ ಗಾಂಧಿಯನ್ನು ಮುಖಾಮುಖಿಯಾಗಿ ಭೇಟಿಯಾದಾಗ, ಸಫಾಳ ಮೊದಲ ಪ್ರತಿಕ್ರಿಯೆ ಅವರನ್ನು ನಮಸ್ತೆಯಿಂದ ಸ್ವಾಗತಿಸುವುದು. ರಾಹುಲ್‌ ಗಾಂಧಿ ಬೆಚ್ಚಗಿನ ಹ್ಯಾಂಡ್‌ಶೇಕ್‌ ನೀಡಿ ಧನ್ಯವಾದ ತಿಳಿಸಿದರು. ಅವರು ವಿದ್ಯಾರ್ಥಿನಿಗೆ ಮೈಕ್ ಹಸ್ತಾಂತರಿಸಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು.

ಮುಕ್ತ ಮನಸ್ಸಿನಿಂದ ಚಿಂತಿಸುವುದು ವಿಜ್ಞಾನದ ಸಾರವಾಗಿದೆ. ಅದೇ ವಿಜ್ಞಾನವನ್ನು ಕಲಿಯುವ ಮೊದಲ ಹೆಜ್ಜೆಯಾಗಿದೆ. ನಿಮ್ಮ ಮನಸ್ಸು ಎಂದೂ ಮುಚ್ಚಬಾರದು. ಇತರರ ಮಾತುಗಳನ್ನು ಕೇಳಿಸಿಕೊಳ್ಳಬೇಕು. ಇತರರ ಅಭಿಪ್ರಾಯವನ್ನು ಗೌರವಿಸಬೇಕು. ಅವರ ಭಾಷೆ, ಧರ್ಮ, ಸಂಸ್ಕೃತಿಯನ್ನು ನಾವು ಗೌರವಿಸಬೇಕಾಗಿದೆ.

ವಿಡಿಯೋ ನೋಡಿ

“ನಮ್ಮ ದೇಶದಲ್ಲಿ ಈ ದಿನಗಳಲ್ಲಿ ನೀವು ಜನರನ್ನು ದ್ವೇಷಿಸಬಹುದು ಮತ್ತು ಅದೇ ಸಮಯದಲ್ಲಿ ವೈಜ್ಞಾನಿಕವಾಗಿ ಪ್ರಗತಿ ಹೊಂದಬಹುದು ಎಂಬ ಚರ್ಚೆ ಆರಂಭವಾಗಿದೆ. ಆದರೆ ಇದು ಸಂಪೂರ್ಣ ಅಸಂಬದ್ಧವಾಗಿದೆ” ಎಂದು ಅವರು ಹೇಳಿದರು. ಸಫಾ ಯಾವುದೇ ಗೊಂದಲವಿಲ್ಲದೇ ಸರಾಗವಾಗಿ ಮಲೆಯಾಳಂಗೆ ಅನುವಾದಿಸುತ್ತಿದ್ದರೆ ಅವಳ ಸಹಪಾಠಿಗಳು ಚಪ್ಪಾಳೆ ತಟ್ಟಿ ಹುರಿದುಂಬಿಸುತ್ತಿದ್ದರು.

ಇನ್ನೊಬ್ಬರ ಅಭಿಪ್ರಾಯವನ್ನು ಮುಕ್ತವಾಗಿ ಸ್ಪೀಕರಿಸಿವುದೇ ವಿಜ್ಞಾನವನ್ನು ಕಲಿಯುವ ಅತಿ ಪ್ರಮುಖ ಅಂಶವಾಗಿದೆ. ಉತ್ತರಕ್ಕಿಂತ ಹೆಚ್ಚಾಗಿ ಪ್ರಶ್ನೆ ಕೇಳುವುದು ಅತಿ ಮುಖ್ಯವಾಗಿದೆ. ಹಾಗಾಗಿ ಎಲ್ಲಾ ಶಿಕ್ಷಕರು ಮಕ್ಕಳು ಹೆಚ್ಚು ಪ್ರಶ್ನೆ ಕೇಳು ಅವಕಾಶ ಮಾಡಿಕೊಡಿ. ಅದರಲ್ಲಿ ತಪ್ಪು ಪ್ರಶ್ನೆ, ಒಳ್ಳೆ ಪ್ರಶ್ನೆ ಎಂಬುದಿರುವುದಿಲ್ಲ ಎಂದರು.

ಎಲ್ಲಾ ಮಕ್ಕಳು, ಅದರಲ್ಲಿಯೂ ಚಿಕ್ಕಮಕ್ಕಳು ಎಲ್ಲಾ ವಿಷಯದ ಬಗ್ಗೆ ಕೂತೂಹಲವುಳ್ಳವರಾಗಿತ್ತಾರೆ. ಅವರಲ್ಲಿ ದ್ವೇಷ ಇರುವುದಿಲ್ಲ. ಇದೇ ರೀತಿ ಕಲಿಯಬೇಕು ಎಂದರು.

ದ್ವೇಷ, ಅಸೂಯೆ ಮನೋಭಾವನೆ ವಿಜ್ಞಾನಕ್ಕೆ ವಿರುದ್ಧವಾಗಿದೆ. ನೀವು ಜೀವನದಲ್ಲಿ ಏನಾದರೂ ಆಗಿ. ಆದರೆ ದ್ವೇಷ, ಅಸೂಯೆಯನ್ನು ನಾವು ಕೊಲ್ಲದಿದ್ದರೆ ಮುಂದೆ ಬರಲು ಸಾಧ್ಯವಿಲ್ಲ. ಕೇರಳದ ಶಾಲೆಗಳು ದೇಶದಲ್ಲಿಯೇ ಉತ್ತಮವಾಗಿದ್ದರೂ ಇನ್ನು ಸಾಕಾಗುವುದಿಲ್ಲ. ಕಳೆದ ತಿಂಗಳು ಒಬ್ಬ ವಿದ್ಯಾರ್ಥಿ ಹಾವು ಕಚ್ಚಿ ಮರಣ ಹೊಂದಿದ್ದನ್ನು ನಾವೆಲ್ಲರೂ ನೋಡಿದ್ದೇವೆ. ಈ ರೀತಿಯಾಗಿ ಆಗದಂತೆ ತಡೆಯಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಬೇಕು. ಇದನ್ನು ಪಾರ್ಲಿಮೆಂಟ್‌ನಲ್ಲಿ ಚರ್ಚಿಸುವುದಾಗಿ ಹೇಳಿದರು.

ಭಾಷಣದ ನಂತರ ರಾಹುಲ್‌ ಗಾಂಧಿಯವರು “ಉತ್ತಮ ಭಾಷಾಂತರವನ್ನು ಮಾಡಿದ್ದಕ್ಕಾಗಿ” ಸಫಾಗೆ ಧನ್ಯವಾದ ಅರ್ಪಿಸಿದರು. ಕೇರಳದ ಸ್ಪೂರ್ತಿ ಕ್ರಿಯೆಯಲ್ಲಿದೆ ಎಂದು ರಾಹುಲ್‌ ಟ್ವೀಟ್‌ ಮಾಡಿದ್ದಾರೆ. ರೋಮಾಂಚನಗೊಂಡ ವಿದ್ಯಾರ್ಥಿನಿಯು ಇದು ತನ್ನ ಜೀವನದ ಅತ್ಯುತ್ತಮ ಕ್ಷಣ ಎಂದು ಹೇಳಿದ್ದಾಳೆ.

“ಇದು ನನ್ನ ಜೀವನದ ಅತ್ಯುತ್ತಮ ಕ್ಷಣ. ನಾನೇ ಖುದ್ದು ಅನುವಾದ ಮಾಡಬೇಕು ಎಂಬುದರ ಬಗ್ಗೆ ಮಾತ್ರ ಕಾಳಜಿ ವಹಿಸಿದ್ದೆ. ಯಾವುದೇ ಕಾರಣಕ್ಕೂ ಗೊಂದಲ ಮಾಡಿಕೊಳ್ಳಬಾರದೆಂದು ನಿರ್ಧರಿಸಿದ್ದೆ. ನಾನು ವೇದಿಕೆಗೆ ಹೋಗುವಾಗ ನಡುಗುತ್ತಿದ್ದೆ. ಆದರೆ ರಾಹುಲ್ ಗಾಂಧಿಯವರು ಶಾಂತಗೊಳಿಸಿದರು. ಅವರು ತುಂಬಾ ಸೌಮ್ಯ ಸ್ವಭಾವದರು” ಎಂದು ಆಕೆ ಎನ್‌ಡಿಟಿವಿಗೆ ತಿಳಿಸಿದ್ದಾಳೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...