ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಯಾಗಿ 50 ವರ್ಷದ ಅಂಗವಾಗಿ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, “ತುರ್ತು ಪರಿಸ್ಥಿತಿ ಭಾರತದ ಪ್ರಜಾಪ್ರಭುತ್ವದ ಇತಿಹಾಸದ ಅತ್ಯಂತ ಕರಾಳ ಅಧ್ಯಾಯಗಳಲ್ಲಿ ಒಂದು. ಸಂವಿಧಾನದ ಆಶಯವನ್ನು ಉಲ್ಲಂಘಿಸಿದ ಮತ್ತು ಸಂಸತ್ತಿನ ಧ್ವನಿಯನ್ನು ಹತ್ತಿಕ್ಕಿದ ರೀತಿಯನ್ನು ಯಾವುದೇ ಭಾರತೀಯ ಮರೆಯಲು ಸಾಧ್ಯವಿಲ್ಲ” ಎಂದಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಸಂಬಂಧ ಪೋಸ್ಟ್ ಹಾಕಿರುವ ಅವರ, “ಭಾರತದ ಪ್ರಜಾಪ್ರಭುತ್ವದ ಇತಿಹಾಸದ ಕರಾಳ ಅಧ್ಯಾಯಗಳಲ್ಲಿ ಒಂದಾದ ತುರ್ತು ಪರಿಸ್ಥಿತಿ ಹೇರಿಕೆಗೆ ಇಂದು ಐವತ್ತು ವರ್ಷಗಳು ತುಂಬುತ್ತಿವೆ. ಭಾರತದ ಜನರು ಈ ದಿನವನ್ನು ‘ಸಂವಿಧಾನ ಹತ್ಯೆ’ಯ ದಿನವಾಗಿ ಆಚರಿಸುತ್ತಿದ್ದಾರೆ. ಈ ದಿನದಂದು, ಭಾರತೀಯ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೌಲ್ಯಗಳನ್ನು ಕಡೆಗಣಿಸಲಾಯಿತು. ಮೂಲಭೂತ ಹಕ್ಕುಗಳನ್ನು ಅಮಾನತಿನಲ್ಲಿಡಲಾಯಿತು. ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕಲಾಯಿತು. ಹಲವಾರು ರಾಜಕೀಯ ನಾಯಕರು, ಸಾಮಾಜಿಕ ಕಾರ್ಯಕರ್ತರು, ವಿದ್ಯಾರ್ಥಿಗಳು ಮತ್ತು ಸಾಮಾನ್ಯ ನಾಗರಿಕರನ್ನು ಜೈಲಿಗೆ ಹಾಕಲಾಯಿತು” ಎಂದು ಹೇಳಿದ್ದಾರೆ.
Today marks fifty years since one of the darkest chapters in India’s democratic history, the imposition of the Emergency. The people of India mark this day as Samvidhan Hatya Diwas. On this day, the values enshrined in the Indian Constitution were set aside, fundamental rights…
— Narendra Modi (@narendramodi) June 25, 2025
ತುರ್ತು ಪರಿಸ್ಥಿತಿ ಹೇರಿದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ ಪ್ರಧಾನಿ ಮೋದಿ, “ನಮ್ಮ ಸಂವಿಧಾನದ ಆಶಯಗಳನ್ನು ಉಲ್ಲಂಘಿಸಿದ, ಸಂಸತ್ತಿನ ಧ್ವನಿಯನ್ನು ಹತ್ತಿಕ್ಕಿದ ಮತ್ತು ನ್ಯಾಯಾಲಯಗಳನ್ನು ನಿಯಂತ್ರಿಸಲು ಪ್ರಯತ್ನಿಸಲಾದ ರೀತಿಯನ್ನು ಯಾವುದೇ ಭಾರತೀಯ ಎಂದಿಗೂ ಮರೆಯುವುದಿಲ್ಲ. ಸಂವಿಧಾನದ 42ನೇ ತಿದ್ದುಪಡಿಯು ಅವರ ಕುತಂತ್ರಗಳಿಗೆ ಒಂದು ಪ್ರಮುಖ ಉದಾಹರಣೆಯಾಗಿದೆ. ಬಡವರು, ದುರ್ಬಲರು ಮತ್ತು ದೀನದಲಿತರನ್ನು ವಿಶೇಷವಾಗಿ ಗುರಿಯಾಗಿಸಲಾಯಿತು. ಅವರ ಘನತೆಯನ್ನು ಅವಮಾನಿಸಲಾಯಿತು” ಎಂದಿದ್ದಾರೆ.
ತುರ್ತು ಪರಿಸ್ಥಿತಿಯ ವಿರುದ್ಧದ ಹೋರಾಟದಲ್ಲಿ ದೃಢವಾಗಿ ನಿಂತ ಜನರನ್ನು ಶ್ಲಾಘಿಸಿದ ಪ್ರಧಾನಿ ” ಭಾರತದಾದ್ಯಂತದ ಎಲ್ಲಾ ವರ್ಗದ ಜನರು, ವೈವಿಧ್ಯಮಯ ಸಿದ್ಧಾಂತಗಳಿಂದ ಬಂದವರು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ರಕ್ಷಿಸಲು ಮತ್ತು ನಮ್ಮ ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಜೀವನವನ್ನು ಮುಡಿಪಾಗಿಟ್ಟ ಆದರ್ಶಗಳನ್ನು ಸಂರಕ್ಷಿಸಲು ಒಂದೇ ಗುರಿಯೊಂದಿಗೆ ಪರಸ್ಪರ ಒಗ್ಗಟ್ಟಿನಿಂದ ಕೆಲಸ ಮಾಡಿದರು. ಅವರ ಸಾಮೂಹಿಕ ಹೋರಾಟದಿಂದ ಆಗಿನ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವವನ್ನು ಪುನಃಸ್ಥಾಪಿಸಲು ಮತ್ತು ಹೊಸದಾಗಿ ಚುನಾವಣೆ ನಡೆಸಲು ಸಾಧ್ಯವಾಯಿತು” ಎಂದು ಹೇಳಿದ್ದಾರೆ.
‘ನಮ್ಮ ಸಂವಿಧಾನದ ಮೌಲ್ಯಗಳನ್ನು ಬಲಪಡಿಸುವ ಭಾರತದ ದೂರದೃಷ್ಟಿಯನ್ನು ಸಾಕಾರಗೊಳಿಸಲು ಒಗ್ಗಟ್ಟಾಗಿ ಕೆಲಸ ಮಾಡುವ ಬದ್ಧತೆಯನ್ನು ಪುನರುಚ್ಚರಿಸುತ್ತೇನೆ. ನಾವು ಪ್ರಗತಿಯ ಹೊಸ ಎತ್ತರಕ್ಕೆ ತಲುಪೋಣ ಮತ್ತು ಬಡವರು, ದೀನದಲಿತರ ಕನಸುಗಳನ್ನು ನನಸುಗೊಳಿಸೋಣ’ ಎಂದು ಪ್ರಧಾನಿ ಬರೆದುಕೊಂಡಿದ್ದಾರೆ.
ಇರಾನ್-ಇಸ್ರೇಲ್ ಕದನವಿರಾಮವನ್ನು ಸ್ವಾಗತಿಸಿದ ಭಾರತ; ಅಮೆರಿಕ ಮತ್ತು ಕತಾರ್ ಪಾತ್ರಕ್ಕೆ ಮೆಚ್ಚುಗೆ


